Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆರ್ಥಿಕ ವೃದ್ಧಿ ಹಿಂದಿನ ಹಣಕಾಸು ವರ್ಷದಲ್ಲಿ ಶೇ. 7.6, ಈ ವರ್ಷ ಶೇ. 7: ಆರ್​ಬಿಐ ಅಂದಾಜು

Indian economic growth prediction by RBI: ಭಾರತೀಯ ರಿಸರ್ವ್ ಬ್ಯಾಂಕ್ ಮೇ 30, ಗುರುವಾರ ಬಿಡುಗಡೆ ಮಾಡಿದ ವಾರ್ಷಿಕ ವರದಿ ಪ್ರಕಾರ 2024-25ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 7ರಷ್ಟು ಬೆಳೆಯಬಹುದು ಎಂದಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.6ರಷ್ಟು ಬೆಳೆದಿರಬಹುದು ಎಂಬುದು ಅದರ ಅಂದಾಜು. ಆದರೆ, ಮಿಂಟ್ ಪತ್ರಿಕೆ ನಡೆಸಿದ 20 ಆರ್ಥಿಕ ತಜ್ಞರ ಸಮೀಕ್ಷೆಯ ಸರಾಸರಿ ಅಂಶವು ಜಿಡಿಪಿ ಶೇ. 7.9ರಷ್ಟು ಬೆಳೆದಿರಬಹುದು ಎಂದು ಹೇಳಲಾಗಿದೆ.

ಭಾರತದ ಆರ್ಥಿಕ ವೃದ್ಧಿ ಹಿಂದಿನ ಹಣಕಾಸು ವರ್ಷದಲ್ಲಿ ಶೇ. 7.6, ಈ ವರ್ಷ ಶೇ. 7: ಆರ್​ಬಿಐ ಅಂದಾಜು
ಜಿಡಿಪಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 30, 2024 | 12:40 PM

ನವದೆಹಲಿ, ಮೇ 30: ಈ ಹಣಕಾಸು ವರ್ಷದಲ್ಲಿ (2024-25) ಭಾರತದ ಜಿಡಿಪಿ (India GDP) ಶೇ. 7ರಷ್ಟು ಬೆಳೆಯಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಭಿಪ್ರಾಯಪಟ್ಟಿದೆ. ಇಂದು ಗುರುವಾರ (ಮೇ 30) ಆರ್​ಬಿಐ ಬಿಡುಗಡೆ ಮಾಡಿದ ವಾರ್ಷಿಕ ವರದಿಯಲ್ಲಿ ಈ ಅಂದಾಜು ಮಾಡಲಾಗಿದೆ. ಈ ವರದಿ ಪ್ರಕಾರ 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.6ರಷ್ಟು ಹೆಚ್ಚಬಹುದು ಎಂದು ಹೇಳಲಾಗಿದೆ. ಅದಕ್ಕೂ ಹಿಂದಿನ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7ರಷ್ಟು ಬೆಳೆದಿತ್ತು. ಸತತ ಮೂರು ವರ್ಷ ಜಿಡಿಪಿ ಶೇ. 7ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಬೆಳವಣಿಗೆ ಹೊಂದುತ್ತಿರುವಂತಿದೆ.

ದಿ ಮಿಂಟ್ ಪತ್ರಿಕೆ ನಡೆಸಿದ ವಿವಿಧ ಆರ್ಥಿಕ ತಜ್ಞರ ಸಮೀಕ್ಷೆಯಲ್ಲಿ ಸರಾಸರಿ ಪರಿಗಣಿಸಿದಾಗ 2023-24ರ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಶೇ. 7.9ರಷ್ಟು ಬೆಳೆಯುವ ಸಾಧ್ಯತೆ ಕಂಡುಬಂದಿದೆ. ಇದು ಆರ್​ಬಿಐ ಮಾಡಿದ ಅಂದಾಜಿಗಿಂತಲೂ ತುಸು ಹೆಚ್ಚಿದೆ. 2023-24ರ ಹಣಕಾಸು ವರ್ಷದ ಮೊದಲ ಮೂರು ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕ ಅಭಿವೃದ್ಧಿ ನಿರೀಕ್ಷೆಮೀರಿ ಹೆಚ್ಚಿನ ಮಟ್ಟದಲ್ಲಿ ಇತ್ತು ಎಂಬುದು ಗಮನಾರ್ಹ.

ಇದನ್ನೂ ಓದಿ: ಏರ್ಟೆಲ್ ಪತನ ತಪ್ಪಿಸಿತು ಪಿಎಂ ಜೊತೆಗಿನ ಆ ಒಂದು ಭೇಟಿ..! ಮಿಟ್ಟಲ್​ಗೆ ಮೋದಿ ಹೇಳಿದ ಆ ಮಾತೇನು?

ಅನುಕೂಲಕರವಾದ ಸ್ಥೂಲ ಆರ್ಥಿಕ ಮತ್ತು ಹಣಕಾಸು ಸ್ಥಿರತೆಯ ವಾತಾವರಣದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯ ವೇಗವನ್ನು ಮುಂದಿನ ದಶಕದಲ್ಲಿ ಹೆಚ್ಚಿಸಿಕೊಳ್ಳಲು ಆಗುತ್ತದೆ ಎಂದು ಆರ್​ಬಿಐನ ವರದಿ ಹೇಳಿದೆ.

‘ನಿರಂತರ ಜಾಗತಿಕ ರಾಜಕೀಯ ಪ್ರಕ್ಷುಬ್ದತೆ ಮತ್ತು ಅಸ್ಥಿರ ಹಣಕಾಸು ಮಾರುಕಟ್ಟೆಯ ಪರಿಸ್ಥಿತಿಗಳ ಮಧ್ಯೆ ಭಾರತದ ಆರ್ಥಿಕತೆ 2023-24ರಲ್ಲಿ ಪ್ರತಿರೋಧ ಶಕ್ತಿ ತೋರ್ಪಡಿಸಿದೆ. ನಿರ್ದಿಷ್ಟ ಹಣಕಾಸು ನಿಲುವು, ಸರಬರಾಜು ನಿರ್ವಹಣೆ ಕ್ರಮ ಇತ್ಯಾದಿ ಮೂಲಕ ಹಣದುಬ್ಬರವನ್ನು ತಾಳಿಕೆಯ ಮಿತಿಯೊಳಗೆ ನಿಲ್ಲಿಸಲಾಗಿದೆ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಇವತ್ತು ಬಿಡುಗಡೆ ಮಾಡಿದ ವಾರ್ಷಿಕ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಬರದಿದ್ದರೂ ಸರ್ಕಾರದ ಆರ್ಥಿಕ ನೀತಿ ನಿಲ್ಲುವುದಿಲ್ಲ: ರಘುರಾಮ್ ರಾಜನ್

2023ರ ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಶೇ. 8.4ರಷ್ಟು ಬೆಳೆದು ಗಮನ ಸೆಳೆದಿತ್ತು. ಆದರೆ, ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಜಿಡಿಪಿ ಶೇ. 7ರಷ್ಟು ಮಾತ್ರವೇ ಹೆಚ್ಚಾಗಬಹುದು ಎಂದು ಮಿಂಟ್ ಪೋಲ್​​ನಲ್ಲಿ ಪಾಲ್ಗೊಂಡಿದ್ದ 20 ಆರ್ಥಿಕ ತಜ್ಞರ ಸರಾಸರಿ ಅನಿಸಿಕೆ ಆಗಿದೆ. ಅವರ ಪ್ರಕಾರ ಕೃಷಿ ಉತ್ಪಾದನೆ ಮತ್ತು ಔದ್ಯಮಿಕ ವೇಗ ಕಡಿಮೆ ಆಗಿರುವುದು ಜಿಡಿಪಿ ಓಟ ಮಂದಗೊಳ್ಳಲು ಕಾರಣವಂತೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ