AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಭಾರತೀಯ ರೈತರ ಹಿತಾಸಕ್ತಿ ಬಲಿಕೊಡುವುದಿಲ್ಲ ಎಂದ ವಾಣಿಜ್ಯ ಸಚಿವ

India-US trade deal updates: ಅಮೆರಿಕದೊಂದಿಗೆ ಮುಂಬರುವ ವ್ಯಾಪಾರ ಒಪ್ಪಂದದಲ್ಲಿ ಭಾರತದ ರೈತರ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ರಕ್ಷಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಇಂದು ಬುಧವಾರ ನಡೆದ 4ನೇ ಐಎಸ್​ಐಡಿ-ಐಡಿಆರ್​ಎ ನ್ಯಾಷನಲ್ ಕಾನ್ಫರೆನ್ಸ್​ನಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಭಾರತೀಯ ರೈತರ ಹಿತಾಸಕ್ತಿ ಬಲಿಕೊಡುವುದಿಲ್ಲ ಎಂದ ವಾಣಿಜ್ಯ ಸಚಿವ
Piyush Goyal 7 PtiImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 29, 2026 | 4:58 PM

Share

ನವದೆಹಲಿ, ಅಕ್ಟೋಬರ್ 29: ಅಮೆರಿಕದೊಂದಿಗೆ ನಡೆಯುತ್ತಿರುವ ವ್ಯಾಪಾರ ಒಪ್ಪಂದದ ಮಾತುಕತೆಗಳಲ್ಲಿ ಭಾರತೀಯ ರೈತರ ಹಿತಾಸಕ್ತಿಗಳಿಗೆ ಯಾವುದೇ ರೀತಿಯಲ್ಲಿ ಚ್ಯುತಿ ಬಾರದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಸ್ಪಷ್ಟಪಡಿಸಿದ್ದಾರೆ. ಮುಂಬರುವ ಈ ವ್ಯಾಪಾರ ಒಪ್ಪಂದದಲ್ಲಿ ಭಾರತವು ಅತ್ಯಂತ ಬಲವಾದ ಮತ್ತು ಅನುಕೂಲಕರವಾದ ಸ್ಥಾನವನ್ನು (Advantage) ಹೊಂದಿರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಭಾರತದ ಕೈಗಾರಿಕಾ ಪರಿವರ್ತನೆಯ 4ನೇ ISID-IDRA ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು ಅಮೆರಿಕದ ಜೊತೆಗಿನ ಒಪ್ಪಂದದಲ್ಲಿ ಭಾರತೀಯರ ರೈತರ ಹಿತಾಸಕ್ತಿ ಬಲಿಕೊಡುವುದಿಲ್ಲ ಎನ್ನುವ ಆಭಯ ನೀಡಿದ್ದಾರೆ.

ಇದನ್ನೂ ಓದಿ: ಪಿಎಂ ಕಿಸಾನ್ ಸ್ಕೀಮ್: 24ನೇ ಕಂತಿನ ಹಣ ಬಿಡುಗಡೆ ದಿನ ಫಿಕ್ಸ್; 9.34 ಕೋಟಿ ರೈತರಿಗೆ ಅ. 30ಕ್ಕೆ ಸಿಗಲಿದೆ ಹಣ

ರೈತರ ಹಿತಾಸಕ್ತಿಗಳ ರಕ್ಷಣೆಗೆ ಆದ್ಯತೆ

ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದಗಳ ಸಂದರ್ಭದಲ್ಲಿ ದೇಶದ ಕೃಷಿ ವಲಯ ಮತ್ತು ರೈತರ ಹಿತರಕ್ಷಣೆಯೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ಯಾವುದೇ ಕಾರಣಕ್ಕೂ ರೈತರ ಹಿತಾಸಕ್ತಿಗಳನ್ನು ಬಲಿಪಶು ಮಾಡಲಾಗುವುದಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ.

ಅಮೆರಿಕದೊಂದಿಗೆ ಮುಂಬರುವ ವ್ಯಾಪಾರ ಒಪ್ಪಂದವು ಪರಸ್ಪರ ಪ್ರಯೋಜನಕಾರಿಯಾಗಿರಲಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಭಾರತದ ರಫ್ತುದಾರರಿಗೆ ಮತ್ತು ಆರ್ಥಿಕತೆಗೆ ಇದು ಬಲವಾದ ಮುನ್ನಡೆಯನ್ನು ತಂದುಕೊಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Amazon Layoffs: ಮೈಕ್ರೋಸಾಫ್ಟ್​ನಲ್ಲಿ ಬ್ಲಡ್​ಬಾತ್; ಇನ್ನೋಡಾಟಾ ಬಳಿಕ ಅಮೇಜಾನ್​ನಲ್ಲಿ ದಿಢೀರ್ ಲೇ ಆಫ್; ಕಂಗಾಲಾದ ಟೆಕ್ಕಿಗಳು

ಆರ್ಥಿಕ ಬೆಳವಣಿಗೆಗೆ ಪೂರಕ ಕ್ರಮಗಳು

ದೇಶದ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುತ್ತಲೇ ಜಾಗತಿಕ ವಾಣಿಜ್ಯ ಪಾಲುದಾರಿಕೆಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದು, ಇದು ದೇಶದ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಪೂರಕವಾಗಲಿದೆ ಎಂದು ಪೀಯುಷ್ ಗೋಯಲ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More