AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್​​ಎಸ್​ಬಿಸಿ 160 ವರ್ಷ ಇತಿಹಾಸದಲ್ಲಿ ಸಿಎಫ್​ಒ ಆದ ಮೊದಲ ಮಹಿಳೆ; ಭಾರತ ಮೂಲದ ಕೌರ್ ಹೊಸ ಇತಿಹಾಸ

Pam Kaur first woman to become CFO of HSBC holdings: ಯುಕೆ ಮೂಲದ ಎಚ್​ಎಸ್​ಬಿಸಿ ಬ್ಯಾಂಕ್​ನ 159 ವರ್ಷ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರು ಎಕ್ಸಿಕ್ಯೂಟಿವ್ ಹುದ್ದೆ ಅಲಂಕರಿಸಿದ್ದಾರೆ. ಅದೂ ಭಾರತದ ಮೂಲದ ಮಹಿಳೆಯೇ ಈ ಗೌರವ ಪಡೆದಿರುವುದು. ಪಂಜಾಬ್ ಸಂಜಾತೆಯಾದ ಪಾಮ್ ಕೌರ್ ಅವರು ಎಚ್​ಎಸ್​ಬಿಸಿ ಹೋಲ್ಡಿಂಗ್ಸ್​ನ ಸಿಎಫ್​ಒ ಆಗಿ ನೇಮಕವಾಗಿದ್ದಾರೆ. ಈ ಬಗ್ಗೆ ಒಂದು ವರದಿ...

ಎಚ್​​ಎಸ್​ಬಿಸಿ 160 ವರ್ಷ ಇತಿಹಾಸದಲ್ಲಿ ಸಿಎಫ್​ಒ ಆದ ಮೊದಲ ಮಹಿಳೆ; ಭಾರತ ಮೂಲದ ಕೌರ್ ಹೊಸ ಇತಿಹಾಸ
ಪಾಮ್ ಕೌರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 22, 2024 | 2:05 PM

Share

ಲಂಡನ್, ಅಕ್ಟೋಬರ್ 22: ಒಂದೂವರೆ ಶತಮಾನದಷ್ಟು ಹಳೆಯದಾದ ಎಚ್​ಎಸ್​ಬಿಸಿ ಹೋಲ್ಡಿಂಗ್ಸ್ ಸಂಸ್ಥೆಯ ಚೀಫ್ ಫೈನಾನ್ಷಿಯಲ್ ಆಫೀಸರ್ ಆಗಿ ಭಾರತ ಮೂಲದ ಪಾಮ್ ಕೌರ್ ನೇಮಕವಾಗಿದ್ದಾರೆ. ಹಲವು ಜಾಗತಿಕ ಪ್ರಮುಖ ಸಂಸ್ಥೆಗಳಿಗೆ ಭಾರತ ಮೂಲದ ಸಿಇಒಗಳೇ ಹಲವರಿದ್ದಾರೆ. ಇದರಲ್ಲೇನು ವಿಶೇಷ ಎನಿಸಬಹುದು. ಆದರೆ, ಪಾಮ್ ಕೌರ್ (Pam Kaur) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಯೂರೋಪ್​ನ ಅತಿದೊಡ್ಡ ಬ್ಯಾಂಕ್ ಎನಿಸಿರುವ ಎಚ್​ಎಸ್​ಬಿಸಿ ಸ್ಥಾಪನೆಯಾಗಿ 159 ವರ್ಷವಾಗಿದೆ. ಹದಿನಾರು ದಶಕಗಳಷ್ಟು ಸುದೀರ್ಘ ಇತಿಹಾಸ ಇರುವ ಎಚ್​ಎಸ್​ಬಿಸಿಯಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರು ಎಕ್ಸಿಕ್ಯೂಟಿವ್ ಹುದ್ದೆ ಪಡೆದಿದ್ದಾರೆ. ಅದೂ ಆ ಸಾಧನೆ ಬಂದಿದ್ದು ಭಾರತ ಮೂಲದ ವ್ಯಕ್ತಿಯಿಂದ ಎಂಬುದು ಹೆಮ್ಮೆಯ ವಿಚಾರ.

ಈ ಮುಂಚೆ ಸಿಎಫ್​ಒ ಆಗಿದ್ದ ಜಾರ್ಜಸ್ ಎಲೆಡೆರಿ (Georges Elhedery) ಅವರು ಸಿಇಒ ಆಗಿ ಜವಾಬ್ದಾರಿ ಪಡೆದಿದ್ದರು. ಈ ವರ್ಷದಿಂದ ಸಿಎಫ್​ಒ ಸ್ಥಾನ ಹಾಗೇ ಉಳಿದುಕೊಂಡಿತ್ತು. 2013ರಿಂದಲೂ ಎಚ್​ಎಸ್​ಬಿಸಿ ಸಂಸ್ಥೆಯಲ್ಲೇ ಕೆಲಸ ಮಾಡುತ್ತಿರುವ ಪಾಮ್ ಕೌರ್ ಅವರ ಹೆಸರನ್ನು ಜಾರ್ಜಸ್ ಅವರೇ ಸೂಚಿಸಿದ್ದರು. ಅಕ್ಟೋಬರ್ 22, ಇಂದು ಕೌರ್ ಸಿಎಫ್​ಒ ಆಗಿ ನೇಮಕವಾಗಿದ್ದಾರೆ.

ಇದನ್ನೂ ಓದಿ: ಅತಿದೊಡ್ಡ ಐಪಿಒಗಳಲ್ಲಿ ಗೆದ್ದವೆಷ್ಟು, ಸೋತವೆಷ್ಟು? ಪ್ರಾಥಮಿಕ ಮಾರುಕಟ್ಟೆಯಲ್ಲಿ ಹಣ ಹಾಕುವ ಮುನ್ನ ಹುಷಾರ್

ಪಾಮ್ ಕೌರ್ ಎಲ್ಲಿಯವರು?

ಪಂಜಾಬ್​ನಲ್ಲಿ ಹುಟ್ಟಿದ ಪಾಮ್ ಕೌರ್ ಅವರು ಪಂಜಾಬ್ ಯೂನಿವರ್ಸಿಟಿಯಿಂದ ಬಿಕಾಂ ಮತ್ತು ಎಂಬಿಎ ಮಾಡಿದ್ದಾರೆ. ಇಂಗ್ಲೆಂಡ್​ನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಓದಿದ್ದಾರೆ. ಸಿಟಿ ಗ್ರೂಪ್, ಡಾಯ್ಷೆ ಬ್ಯಾಂಕ್ ಮೊದಲಾದ ಬ್ಯಾಂಕುಗಳಲ್ಲಿ ಗ್ರೂಪ್ ಆಡಿಟ್​ನ ಮುಖ್ಯ ಹುದ್ದೆಗಳನ್ನು ನಿಭಾಯಿಸಿದ್ದಾರೆ. ರಾಯಲ್ ಬ್ಯಾಂಕ್ ಆಫ್ ಸ್ಕಾಟ್​ಲ್ಯಾಂಡ್ ಗ್ರೂಪ್​ನಲ್ಲಿ ಸಿಎಫ್​ಒ ಮತ್ತು ಸಿಒಒ ಹುದ್ದೆ ಕೂಡ ಹೊಂದಿದ್ದರು.

2013ರಲ್ಲಿ ಅವರು ಇಂಟರ್ನಲ್ ಆಡಿಟ್​ನ ಗ್ರೂಪ್ ಹೆಡ್ ಆಗಿ ನೇಮಕಗೊಂಡು ಎಚ್​ಎಸ್​ಬಿಸಿ ಸಂಸ್ಥೆಗೆ ಅಡಿ ಇಟ್ಟಿದ್ದರು. 2020ರಲ್ಲಿ ಅವರನ್ನು ಗ್ರೂಪ್ ಚೀಫ್ ರಿಸ್ಕ್ ಆಫೀಸರ್ ಆಗಿ ನೇಮಕ ಮಾಡಲಾಯಿತು. ಪಾಮ್ ಕೌರ್ ಅವರು ಬ್ಯಾಂಕ್​ನ ಗ್ರೂಪ್ ಎಂಡಿ ಆಗಿದ್ಧಾರೆ. ಹಾಗೆಯೇ, ಗ್ರೂಪ್ ಎಕ್ಸಿಕ್ಯೂಟಿವ್ ಕಮಿಟಿಯ ಒಬ್ಬ ಸದಸ್ಯೆಯೂ ಹೌದು.

ಇದನ್ನೂ ಓದಿ: ‘ಮಹತ್ವದ ಜಾಗತಿಕ ಪಾತ್ರಕ್ಕೆ ಭಾರತ ಸಿದ್ಧ’: ಅಮೆರಿಕದ ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ನಿರ್ಮಲಾ ಸೀತಾರಾಮನ್ ಭಾಷಣ

ಎಚ್​ಎಸ್​ಬಿಸಿ ಹೋಲ್ಡಿಂಗ್ಸ್​ನ ಸಿಎಫ್​ಒ ಸ್ಥಾನಕ್ಕೆ ಹಲವರ ಹೆಸರು ಚಾಲನೆಯಲ್ಲಿದ್ದವು. ಸಂಸ್ಥೆಯ ಒಳಗೆ ಮ್ತು ಹೊರಗೆ ಅಭ್ಯರ್ಥಿಗಳನ್ನು ಆ ಸ್ಥಾನಕ್ಕೆ ಪರಿಶೀಲಿಸಲಾಗಿತ್ತು. ಆದರೆ, ಆ ಸ್ಥಾನಕ್ಕೆ ಪಾಮ್ ಕೌರ್ ಅವರು ಸೂಕ್ತ ಎನಿಸಿತು ಎಂದು ಜಾರ್ಜಸ್ ಎಲೆಡೆರಿ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ