AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲುಗಳಲ್ಲಿ ಇನ್ಮುಂದೆ ಮತ್ತೆ ಅಡುಗೆ ಶುರು; ಆದರೆ, ಎಲ್​ಪಿಜಿ ಬದಲು ಇಂಡಕ್ಷನ್ ಸ್ಟೌವ್ ಬಳಲು ನಿರ್ಧಾರ

Indian Railways Shifts to Induction Stoves for Train Food: ಭಾರತೀಯ ರೈಲ್ವೆ ಮತ್ತು ಐಆರ್‌ಸಿಟಿಸಿ ರೈಲುಗಳಲ್ಲಿ ಅಡುಗೆ ವಿಧಾನವನ್ನು ಬದಲಾಯಿಸುತ್ತಿವೆ. ಅಗ್ನಿ ಅವಘಡ ತಪ್ಪಿಸಲು ಮತ್ತು ಸುರಕ್ಷತೆ ಹೆಚ್ಚಿಸಲು ಎಲ್‌ಪಿಜಿ ಬದಲು ಇಂಡಕ್ಷನ್ ಸ್ಟೌವ್‌ಗಳನ್ನು ಬಳಸಲು ನಿರ್ಧರಿಸಿದೆ. ಇದು ರೈಲು ಪ್ಯಾಂಟ್ರಿಗಳಲ್ಲಿ ವರ್ಷಗಳ ನಂತರ ಅಡುಗೆ ಭಾಗ್ಯವನ್ನು ಮರಳಿಸಲಿದೆ. ಈ ಬದಲಾವಣೆಯು ಅಡುಗೆಯನ್ನು ಹೆಚ್ಚು ಸುಸ್ಥಿರ, ಸುರಕ್ಷಿತ ಮತ್ತು ಆಧುನಿಕವನ್ನಾಗಿಸಲಿದೆ, ಪ್ರಯಾಣಿಕರಿಗೆ ಉತ್ತಮ ಆಹಾರ ಒದಗಿಸಲು ನೆರವಾಗಲಿದೆ.

ರೈಲುಗಳಲ್ಲಿ ಇನ್ಮುಂದೆ ಮತ್ತೆ ಅಡುಗೆ ಶುರು; ಆದರೆ, ಎಲ್​ಪಿಜಿ ಬದಲು ಇಂಡಕ್ಷನ್ ಸ್ಟೌವ್ ಬಳಲು ನಿರ್ಧಾರ
ರೈಲ್ವೆ ನಿಲ್ದಾಣImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 09, 2026 | 2:50 PM

Share

ನವದೆಹಲಿ, ಜೂನ್ 9: ಎಲ್‌ಪಿಜಿ (LPG) ಅನಿಲ ಪೂರೈಕೆಯಲ್ಲಿನ ನಿರ್ಬಂಧ ಮತ್ತು ಸುರಕ್ಷತೆಯ ದೃಷ್ಟಿಯಿಂದ, ರೈಲುಗಳಲ್ಲಿ ಅಡುಗೆ ಮಾಡುವ ವಿಧಾನವನ್ನು ಬದಲಾಯಿಸಲು ಭಾರತೀಯ ರೈಲ್ವೆ ಮತ್ತು ಐಆರ್‌ಸಿಟಿಸಿ (IRCTC) ಮುಂದಾಗಿವೆ. ಇನ್ನು ಮುಂದೆ ರೈಲು ಪ್ರಯಾಣಿಕರಿಗೆ ಒದಗಿಸಲು ಆಹಾರ ತಯಾರಿಕೆಗೆ ಎಲ್​ಪಿಜಿ ಬದಲು ಇಂಡಕ್ಷನ್ ಸ್ಟೌವ್ ಬಳಸುವ ಪ್ರಸ್ತಾಪ ಇದೆ. ಹಾಗೆಯೇ, ರೈಲುಗಳ ಅಡುಗೆ ಕೋಣೆಯಲ್ಲೂ (ಪ್ಯಾಂಟ್ರಿ ರೂಮ್) ಇಂಡಕ್ಷನ್ ಸ್ಟೌವ್‌ಗಳನ್ನು (Induction Stoves) ಬಳಸಲು ನಿರ್ಧರಿಸಲಾಗಿದೆ. ಇದರೊಂದಿಗೆ ವರ್ಷಗಳ ನಂತರ ರೈಲು ಪ್ಯಾಂಟ್ರಿಯಲ್ಲಿ ಅಡುಗೆ ಭಾಗ್ಯ ಮರಳಿದಂತಾಗಿದೆ.

ರೈಲುಗಳಲ್ಲಿ ಎಲ್​ಪಿಜಿ ಸಿಲಿಂಡರ್‌ಗಳನ್ನು ಒಯ್ಯುವುದು ಅಗ್ನಿ ಅವಘಡಗಳ ದೃಷ್ಟಿಯಿಂದ ಅಪಾಯಕಾರಿ. ಈ ಕಾರಣಕ್ಕೆ ರೈಲಿನೊಳಗೆ ಎಲ್​ಪಿಜಿ ಇಡುವುದನ್ನು ಇಲಾಖೆ ನಿರ್ಬಂಧಿಸಿತ್ತು. ಈಗ ಗ್ಯಾಸ್ ಸಿಲಿಂಡರ್​ಗೆ ಪರ್ಯಾಯವಾಗಿರುವ ವಿದ್ಯುತ್ ಚಾಲಿತ ಇಂಡಕ್ಷನ್ ಸ್ಟೌವ್ ಬಳಸಲು ಅನುಮತಿಸುತ್ತಿದೆ. ಅಲ್ಲದೆ, ಗ್ಯಾಸ್ ಸಿಲಿಂಡರ್‌ಗಳ ಲಭ್ಯತೆಯ ಸಮಸ್ಯೆ ಇರುವುದರಿಂದ ಎಲೆಕ್ಟ್ರಿಕ್ ಸ್ಟೌವ್​ಗೆ ಮಣೆ ಹಾಕಲಾಗುತ್ತಿದೆ.

ಇದನ್ನೂ ಓದಿ: ಹೊಸ DL, ವಾಹನ ನಿಯಮ: ಪರವಾನಗಿ ಅವಧಿ ವಿಸ್ತರಣೆ, ಆನ್​ಲೈನ್​ನಲ್ಲೇ ವಾಹನ ಮಾಲಕತ್ವ ವರ್ಗಾವಣೆ

ರೈಲ್ವೆ ಅಡುಗೆ ವ್ಯವಸ್ಥೆಯನ್ನು ಹೆಚ್ಚು ಸುಸ್ಥಿರ ಮತ್ತು ಆಧುನಿಕವನ್ನಾಗಿ ಮಾಡುವ ಉದ್ದೇಶದಿಂದ ಈ ಬದಲಾವಣೆಯನ್ನು ತರಲಾಗುತ್ತಿದೆ. ಆರಂಭಿಕ ಹಂತದಲ್ಲಿ ಆಯ್ಕೆಮಾಡಿದ ಮಾರ್ಗಗಳಲ್ಲಿ ಮತ್ತು ರೈಲುಗಳಲ್ಲಿ ಇಂಡಕ್ಷನ್ ಆಧಾರಿತ ಅಡುಗೆ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಇದರಿಂದ ಅಡುಗೆ ಮಾಡುವ ಸ್ಥಳದಲ್ಲಿನ ಬಿಸಿಯನ್ನು ಕಡಿಮೆ ಮಾಡಲು ಮತ್ತು ಅಡುಗೆಯ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ.

ಸದ್ಯ ಇರುವ ವ್ಯವಸ್ಥೆಯಲ್ಲಿ ರೈಲುಗಳ ಪ್ಯಾಂಟ್ರಿಯಲ್ಲಿ ಹಲವು ವರ್ಷಗಳಿಂದ ಗ್ಯಾಸ್ ಸ್ಟೌವ್ ಬಳಸಲಾಗುತ್ತಿಲ್ಲ. ಅಡುಗೆ ಕೂಡ ಮಾಡಲಾಗುತ್ತಿಲ್ಲ. ಪ್ರಯಾಣಿಕರಿಗೆ ಊಟ ಸರಬರಾಜು ಮಾಡಲು ನಿರ್ದಿಷ್ಟ ರೈಲ್ವೆ ನಿಲ್ದಾಣಗಳಲ್ಲಿ ಕೇಂದ್ರೀಕೃತ ಅಡುಗೆ ಕೋಣೆಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಈ ಸ್ಟೇಷನ್​ಗಳಲ್ಲಿರುವ ಅಡುಗೆ ಕೋಣೆಗಳಲ್ಲಿ ತಯಾರಾಗುವ ಆಹಾರವನ್ನು ಪ್ರಯಾಣಿಕರಿಗೆ ಒದಗಿಸಲಾಗುತ್ತದೆ. ಈಗ ಈ ಸೆಂಟ್ರಲೈಸ್ಡ್ ಕಿಚನ್​ಗಳಲ್ಲೂ ಎಲ್​ಪಿಜಿ ಬದಲು ಇಂಡಕ್ಷನ್ ಸ್ಟೌವ್ ತರುವ ವ್ಯವಸ್ಥೆ ಮಾಡಲಾಗುತ್ತಿದೆ.

ಇದನ್ನೂ ಓದಿ: ನಿಜವಾದ ಶ್ರೀಮಂತಿಕೆ ಲಕ್ಷುರಿ ಕಾರು, ಬಂಗಲೆಗಳಲ್ಲ; ಏನೆಲ್ಲಾ ಅಂಶಗಳಲ್ಲಿ ನೀವು ಪಾಸಾಗಬೇಕು?

ವಿದ್ಯುತ್ ಚಾಲಿತ ಇಂಡಕ್ಷನ್ ಸ್ಟೌವ್‌ಗಳನ್ನು ಬಳಸುವುದು ಸುಲಭವಾಗಿದ್ದು, ರೈಲುಗಳಲ್ಲಿನ ವಿದ್ಯುತ್ ವ್ಯವಸ್ಥೆಯನ್ನು ಇದಕ್ಕೆ ಅನುಗುಣವಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಈ ಬದಲಾವಣೆಯು ಪ್ರಯಾಣಿಕರಿಗೆ ನೀಡುವ ಆಹಾರದ ತಯಾರಿಕೆಯನ್ನು ಹೆಚ್ಚು ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು