AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railways: 6,115 ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ; 11,535 ಬೋಗಿಗಳಲ್ಲಿ ಸಿಸಿಟಿವಿ: ರೈಲ್ವೆ ಸಚಿವರಿಂದ ಮಾಹಿತಿ

Indian Railways enhance security at stations: ದೇಶಾದ್ಯಂತ 11,535 ಬೋಗಿಗಳಿಗೆ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ 74,000 ಕೋಚ್​ಗಳಲ್ಲಿ ಕ್ಯಾಮರಾ ಹಾಕಲಾಗುವುದು ಎಂದಿದ್ಧಾರೆ ರೈಲ್ವೆ ಸಚಿವರು. 15,000 ಲೋಕೋಮೋಟಿವ್​ಗಳಲ್ಲೂ ಕ್ಯಾಮರಾ ಹಾಕಲಾಗುತ್ತಿದೆ. ದೇಶಾದ್ಯಂತ ಬಹುತೇಕ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲೂ ಉಚಿತ ವೈಫೈ ಅಳವಡಿಸಲಾಗಿದೆ.

Railways: 6,115 ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ; 11,535 ಬೋಗಿಗಳಲ್ಲಿ ಸಿಸಿಟಿವಿ: ರೈಲ್ವೆ ಸಚಿವರಿಂದ ಮಾಹಿತಿ
ರೈಲ್ವೆ ನಿಲ್ದಾಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 12, 2025 | 1:38 PM

Share

ನವದೆಹಲಿ, ಆಗಸ್ಟ್ 12: ಟ್ರೈನುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯ ಹೆಚ್ಚಿಸಲು ರೈಲ್ವೆ ಇಲಾಖೆ (Indian Railways) ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ ಸಾವಿರಾರು ಕೋಚ್​ಗಳಿಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದೆ. ಸಾವಿರಾರು ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೌಕರ್ಯಗಳನ್ನೂ ಒದಗಿಸಿದೆ. ಕೇಂದ್ರ ರೈಲ್ವೆ ಸಚಿವ ಡಾ. ಅಶ್ವಿನಿ ವೈಷ್ಣವ್ ಇತ್ತೀಚೆಗೆ ರಾಜ್ಯಸಭೆ ಹಾಗೂ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ವಿವರ ನೀಡಿದ್ದಾರೆ.

ರೈಲು ಬೋಗಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ

ಭಾರತೀಯ ರೈಲ್ವೆ ಇಲಾಖೆಯು ಈವರೆಗೆ ದೇಶಾದ್ಯಂತ ವಿವಿಧ ಟ್ರೈನುಗಳಲ್ಲಿಯ 11,535 ಬೋಗಿಗಳಿಗೆ ಸಿಸಿಟಿವಿ ಕ್ಯಾಮರಾ ಅಳವಡಿಸಿದೆ ಎನ್ನುವ ಮಾಹಿತಿಯನ್ನು ಸಚಿವರು ನೀಡಿದ್ದಾರೆ.

ಮುಂದಿನ ದಿನಗಳಲ್ಲಿ 74,000 ಕೋಚ್​ಗಳು ಹಾಗೂ 15,000 ಲೊಕೋಮೋಟಿವ್​ಗಳಲ್ಲೂ ಸಿಸಿಟಿವಿ ಕ್ಯಾಮರಾ ಹಾಕಲಾಗುವುದು. ಪ್ರತೀ ಬೋಗಿಯಲ್ಲೂ ನಾಲ್ಕು ಕ್ಯಾಮರಾಗಳಿರುತ್ತವೆ. ಬೋಗಿಯ ಎರಡೂ ಬದಿಯ ದ್ವಾರಗಳಲ್ಲಿ ಎರಡೆರಡು ಕ್ಯಾಮರಾಗಳನ್ನು ಹಾಕಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದುಬಾರಿಯಾಗಲಿದೆ ಮೊಬೈಲ್ ಬಿಲ್; ಮುಂಬರುವ ತಿಂಗಳಲ್ಲಿ ಬೆಲೆ ಏರಿಸಲಿವೆ ಟೆಲಿಕಾಂ ಕಂಪನಿಗಳು

6,115 ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೌಲಭ್ಯ

ದೇಶಾದ್ಯಂತ 6,115 ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕೆಂದು ಉಚಿತವಾಗಿ ವೈಫೈ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ ಎಂದು ಡಾ. ವೈಷ್ಣವ್ ತಿಳಿಸಿದ್ದಾರೆ.

‘ಬಹುತೇಕ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ 4ಜಿ, 5ಜಿ ಕವರೇಜ್ ಕೊಡಲಾಗಿದೆ. ರೈಲು ಪ್ರಯಾಣಿಕರಿಗೆ ಇದರಿಂದ ಸಾಕಷ್ಟು ಅನುಕೂಲವಾಗಿದೆ. 6,116 ನಿಲ್ದಾಣಗಳಲ್ಲಿ ಉಚತಿ ವೈಫೈ ಸೇವೆಗಳನ್ನೂ ಒದಗಿಸಲಾಗಿದೆ’ ಎಂದು ರೈಲ್ವೆ ಸಚಿವರು ಹೇಳಿದ್ಧಾರೆ.

ಇದನ್ನೂ ಓದಿ: ಮನೆ ಆಸ್ತಿ ಆದಾಯಕ್ಕೆ ತೆರಿಗೆ: ಹೊಸ ಇನ್ಕಮ್ ಟ್ಯಾಕ್ಸ್ ಮಸೂದೆಯಲ್ಲಿ ಕಾನೂನು ಸ್ಪಷ್ಟತೆ

ನಿಲ್ದಾಣದಲ್ಲಿ ಉಚಿತ ವೈಫೈ ಬಳಸುವುದು ಹೇಗೆ?

  • ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ತಮ್ಮ ಸ್ಮಾರ್ಟ್​ಫೋನ್​ನಲ್ಲಿ ವೈಫೈ ಆನ್ ಮಾಡಬೇಕು.
  • ರೈಲ್​ವೈರ್ ಎನ್ನುವ ವೈಫೈ ನೆಟ್ವರ್ಕ್ ಆಯ್ದುಕೊಳ್ಳಬೇಕು.
  • ಮೊಬೈಲ್ ನಂಬರ್ ನಮೂದಿಸಿ ಒಟಿಪಿ ಪಡೆದು, ಅದನ್ನು ಹಾಕಬೇಕು.
  • ಈ ಮೂಲಕ ಪ್ರಯಾಣಿಕರು ಹೈಸ್ಪೀಡ್ ವೈಫೈ ನೆಟ್ವರ್ಕ್ ಅನ್ನು ಬಳಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ