AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡ ಹಾಕಿದರೆ ಭಾರತ ಬಗ್ಗಲ್ಲ: ಪಾಶ್ಚಿಮಾತ್ಯ ದೇಶಗಳಿಗೆ ಸಚಿವ ಪೀಯೂಶ್ ಗೋಯಲ್ ಪ್ರಬಲ ಸಂದೇಶ

Piyush Goyal speaks at Berlin Global Dialogue: ಪೀಯೂಶ್ ಗೋಯಲ್ ಅವರು ಪಾಶ್ಚಿಮಾತ್ಯ ದೇಶಗಳ ದ್ವಂದ್ವ ನಿಲುವನ್ನು ಮತ್ತು ಆಷಾಡಬೂತಿತನನ್ನು ಟೀಕಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿಸಬಾರದು ಎಂದು ಈ ದೇಶಗಳು ಭಾರತದ ಮೇಲೆ ಒತ್ತಡ ಹಾಕುತ್ತಿವೆ. ಇದನ್ನು ಗೋಯಲ್ ವಿರೋಧಿಸಿದ್ಧಾರೆ. ವ್ಯಾಪಾರ ಒಪ್ಪಂದಕ್ಕೆ ಭಾರತ ಆತುರದಿಂದ ಸಹಿ ಹಾಕುವುದಿಲ್ಲ ಎಂದು ವಾಣಿಜ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.

ಒತ್ತಡ ಹಾಕಿದರೆ ಭಾರತ ಬಗ್ಗಲ್ಲ: ಪಾಶ್ಚಿಮಾತ್ಯ ದೇಶಗಳಿಗೆ ಸಚಿವ ಪೀಯೂಶ್ ಗೋಯಲ್ ಪ್ರಬಲ ಸಂದೇಶ
ಪೀಯೂಶ್ ಗೋಯಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 24, 2025 | 6:05 PM

Share

ನವದೆಹಲಿ, ಅಕ್ಟೋಬರ್ 24: ಭಾರತ ಆತುರಾತುರವಾಗಿ ಯಾವುದೇ ವ್ಯಾಪಾರ ಒಪ್ಪಂದಕ್ಕೆ (trade deal) ಸಹಿ ಹಾಕುವುದಿಲ್ಲ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ (Piyush Goyal) ಪುನರುಚ್ಚರಿಸಿದ್ದಾರೆ. ಈ ಮೂಲಕ ಅಮೆರಿಕ, ಯೂರೋಪ್ ಇತ್ಯಾದಿ ಪಾಶ್ಚಿಮಾತ್ಯ ಶಕ್ತಿಗಳಿಗೆ ಭಾರತ ಮತ್ತೊಮ್ಮೆ ಸ್ಪಷ್ಟವಾದ ಮತ್ತು ಖಡಕ್ ಆದ ಮೆಸೇಜ್ ರವಾನಿಸಿದೆ. ಜರ್ಮನಿಯ ಬರ್ಲಿನ್​ನಲ್ಲಿ ನಡೆಯುತ್ತಿರುವ ಗ್ಲೋಬಲ್ ಡೈಲಾಗ್​ನಲ್ಲಿ ಮಾತನಾಡುತ್ತಿದ್ದ ಭಾರತದ ವಾಣಿಜ್ಯ ಸಚಿವರು, ತಮ್ಮ ದೇಶವು ಯಾವುದೇ ಒತ್ತಡಕ್ಕೆ ಮಣಿದು ಒಪ್ಪಂದ ಸಹಿ ಹಾಕುವುದಿಲ್ಲ ಎಂದಿದ್ದಾರೆ.

ಇತರ ದೇಶಗಳೊಂದಿಗೆ ಸಂಬಂಧ ಇರಿಸಿಕೊಳ್ಳಬೇಕು ಅಥವಾ ಇರಿಸಿಕೊಳ್ಳಬಾರದು ಎಂದು ಷರತ್ತುಗಳನ್ನು ವಿಧಿಸಿದರೆ ಅದನ್ನು ಭಾರತ ಒಪ್ಪುವುದಿಲ್ಲ. ಪರಸ್ಪರ ವಿಶ್ವಾಸದ ತಳಹದಿಯ ಮೇಲೆ ನಿಂತ ದೀರ್ಘಕಾಲದ ಸಹಭಾಗಿತ್ವವಾಗಿ ವ್ಯಾಪಾರವನ್ನು ನೋಡುತ್ತೇವೆ ಎಂದು ಪೀಯೂಶ್ ಗೋಯಲ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿ ವಿಳಂಬವಾಗಿದ್ದ ಪಿಎಂ ಕಿಸಾನ್ ಹಣ ಈ ಬಾರಿ ಬೇಗ ಸಿಗುವ ನಿರೀಕ್ಷೆ; ಇಲ್ಲಿದೆ 21ನೇ ಕಂತಿನ ಬಿಡುಗಡೆ ದಿನಾಂಕ

ಉಕ್ರೇನ್ ಮೇಲೆ ಯುದ್ಧ ಮಾಡುತ್ತಿರುವ ರಷ್ಯಾದಿಂದ ತೈಲ ಖರೀದಿಸಬೇಡಿ ಎಂದು ಯೂರೋಪಿಯನ್ ದೇಶಗಳು ಭಾರತದ ಮೇಲೆ ಒತ್ತಡ ಹಾಕುತ್ತಿವೆ. ಈ ಹಿನ್ನೆಲೆಯಲ್ಲಿ ಪೀಯೂಶ್ ಗೋಯಲ್ ಮೇಲಿನ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ರಷ್ಯಾ ದೇಶದಿಂದ ಬಹಳ ಕಡಿಮೆ ಬೆಲೆಗೆ ಭಾರತವು ತೈಲವನ್ನು ಖರೀದಿಸುತ್ತಿದೆ. ಆದರೆ, ಭಾರತದ ಈ ನಡೆಯಿಂದಾಗಿ ರಷ್ಯಾದ ಆದಾಯ ಮೂಲ ಸಿಕ್ಕಿದೆ. ಉಕ್ರೇನ್ ಮೇಲಿನ ಯುದ್ಧಕ್ಕೆ ಈ ಹಣವನ್ನು ರಷ್ಯಾ ಬಳಕೆ ಮಾಡಲು ಸಾಧ್ಯವಾಗುತ್ತಿದೆ ಎಂಬುದು ಅಮೆರಿಕ ಹಾಗೂ ಯೂರೋಪ್ ದೇಶಗಳ ಆರೋಪ.

ಇದೇ ಕಾರಣಕ್ಕೆ ಅಮೆರಿಕ ದೇಶವು ಭಾರತದ ಮೇಲೆ ಶೇ. 50ರಷ್ಟು ಟ್ಯಾರಿಫ್ ಹಾಕಿರುವುದು. ಆದರೆ, ಪಾಶ್ಚಿಮಾತ್ಯ ದೇಶಗಳ ದ್ವಂದ್ವ ನಿಲುವನ್ನು ಭಾರತ ಅನೇಕ ಬಾರಿ ಟೀಕಿಸಿದೆ. ರಷ್ಯಾದಿಂದ ಐರೋಪ್ಯ ದೇಶಗಳೂ ಕೂಡ ಆಮದು ಮಾಡಿಕೊಳ್ಳುತ್ತವೆ. ಆದರೆ, ಭಾರತಕ್ಕೆ ತಾಕೀತು ಮಾಡುತ್ತವೆ ಎಂದು ಪೀಯೂಶ್ ಗೋಯಲ್, ಜೈಶಂಕರ್ ಮೊದಲಾದವರು ವಿದೇಶಗಳಲ್ಲಿ ಹೋದಾಗೆಲ್ಲಾ ಎತ್ತಿಯಾಡಿರುವುದುಂಟು.

ಇದನ್ನೂ ಓದಿ: ಭಾರತದ ಜಿಡಿಪಿ ಈ ವರ್ಷ ಶೇ. 6.7-6.9ರಷ್ಟು ಬೆಳೆಯಬಹುದು: ಡುಲೋಟ್ ಅಂದಾಜು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೂ ಕೂಡ ರಷ್ಯನ್ ತೈಲ ವಿಚಾರವಾಗಿ ಭಾರತದ ಮೇಲೆ ಬಾರಿ ಬಾರಿ ಒತ್ತಡ ಹಾಕುತ್ತಿದ್ದಾರೆ. ತಾನು ಪ್ರಧಾನಿ ಮೋದಿ ಜೊತೆ ಮಾತನಾಡಿದ್ದು, ರಷ್ಯನ್ ತೈಲ ಖರೀದಿ ನಿಲ್ಲಿಸುವುದಾಗಿ ಅವರು ತನಗೆ ಹೇಳಿದ್ಧಾರೆ ಎಂದು ಡೊನಾಲ್ಡ್ ಟ್ರಂಪ್ ಹೋದಲ್ಲಿ ಬಂದಲ್ಲೆಲ್ಲಾ ಹೇಳುತ್ತಿದ್ದಾರೆ. ಆದರೆ, ಭಾರತವು ಇದನ್ನು ಪುನರುಚ್ಚರಿಸಿಲ್ಲ. ರಷ್ಯನ್ ತೈಲ ಖರೀದಿಯನ್ನು ನಿಲ್ಲಿಸಲಾಗುತ್ತಿದೆ ಎಂದು ಭಾರತ ಅಧಿಕೃತವಾಗಿ ಎಲ್ಲಿಯೂ ಹೇಳಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ