AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 10 ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಶೇ8 ರಷ್ಟು ಪ್ರಗತಿ ಕಾಣಲಿದೆ: ಅಶ್ವಿನಿ ವೈಷ್ಣವ್

ರೈಸಿನಾ ಡೈಲಾಗ್ 2024ರಲ್ಲಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭಾರತದಲ್ಲಿ ವ್ಯಾಪಾರ ಮಾಡಲು ಜಾಗತಿಕ ಕಂಪನಿಗಳನ್ನು ಆಹ್ವಾನಿಸಿದ್ದು, ದೇಶೀಯ ಮತ್ತು ಜಾಗತಿಕ ಮಾರುಕಟ್ಟೆಗಳಿಂದ ಲಾಭ ಪಡೆಯಲು ಸರ್ಕಾರವು ಅವರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ಖಚಿತಪಡಿಸುತ್ತದೆ ಎಂದು ಹೇಳಿದರು.

ಮುಂದಿನ 10 ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಶೇ8 ರಷ್ಟು ಪ್ರಗತಿ ಕಾಣಲಿದೆ: ಅಶ್ವಿನಿ ವೈಷ್ಣವ್
ಅಶ್ವಿನಿ ವೈಷ್ಣವ್
ರಶ್ಮಿ ಕಲ್ಲಕಟ್ಟ
|

Updated on: Feb 24, 2024 | 8:55 PM

Share

ದೆಹಲಿ ಫೆಬ್ರವರಿ 24: ಆರ್ಥಿಕ ಹಿಂಜರಿತದ(recession)ಸಮಯದಲ್ಲಿಯೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ವಿಶ್ವದ ಏಕೈಕ ದೇಶ ಭಾರತವಾಗಿದೆ. ಭಾರತದ ನೆರೆಯ ರಾಷ್ಟ್ರಗಳಾದ ಚೀನಾ, ಪಾಕಿಸ್ತಾನ ಮತ್ತು ಶ್ರೀಲಂಕಾ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬ್ರಿಟನ್ ಮತ್ತು ಜಪಾನ್‌ನಂತಹ ಅಭಿವೃದ್ಧಿ ಹೊಂದಿದ ದೇಶಗಳ ಪರಿಸ್ಥಿತಿಯೂ ಇದೇ ಆಗಿದೆ. ಅಲ್ಲಿಯೂ ಬೆಳವಣಿಗೆ ದರ ಮಂದ ಗತಿಯಲ್ಲಿ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಭಾರತದಲ್ಲೂ ಇದೇ ಪರಿಸ್ಥಿತಿ ಎದುರಾಗಬಹುದು. ಮುಂದಿನ 10 ವರ್ಷಗಳಲ್ಲಿ ಭಾರತವು ಆರರಿಂದ ಎಂಟು ಪ್ರತಿಶತದಷ್ಟು ಬೆಳವಣಿಗೆ ದರದಲ್ಲಿ ನಿರಂತರವಾಗಿ ಪ್ರಗತಿ ಸಾಧಿಸಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿದ್ದಾರೆ.

ರೈಸಿನಾ ಡೈಲಾಗ್ 2024 ಚರ್ಚೆ

ರೈಸಿನಾ ಡೈಲಾಗ್ 2024 ರಲ್ಲಿ ಮಾತನಾಡಿದ ಸಚಿವರು ಭಾರತದಲ್ಲಿ ವ್ಯಾಪಾರ ಮಾಡಲು ಜಾಗತಿಕ ಕಂಪನಿಗಳನ್ನು ಆಹ್ವಾನಿಸಿದರು. ಈ ಕಂಪನಿಗಳಇಗೆ ದೇಶೀಯ ಮತ್ತು ಜಾಗತಿಕ ಮಾರುಕಟ್ಟೆಗಳಿಂದ ಲಾಭ ಪಡೆಯಲು ಸರ್ಕಾರವು ಅವರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ಖಚಿತಪಡಿಸುತ್ತದೆ ಎಂದು ಅವರು ಹೇಳಿದ್ದಾರೆ. ಭಾರತವು ವಿಶ್ವಕ್ಕೆ ಮುಕ್ತ ಮಾರುಕಟ್ಟೆ ಎಂದು ಬಣ್ಣಿಸಿದ ಅವರು ಆರ್ಥಿಕತೆಯ ಬೆಳವಣಿಗೆಯ ವೇಗದ ಬಗ್ಗೆಯೂ ಚರ್ಚಿಸಿದ್ದಾರೆ.

ಅಭಿವೃದ್ಧಿ ಹೊಂದಿದ ಭಾರತಕ್ಕೆ ಅಡಿಪಾಯ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಾರಂಭಿಸಿದ ವಿವಿಧ ಅಭಿವೃದ್ಧಿ ಉಪಕ್ರಮಗಳಿಂದಾಗಿ ಇಂದು ದೇಶವು ಕ್ಷಿಪ್ರ ಪ್ರಗತಿಯ ಸಾಧಿಸುತ್ತಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಭವಿಷ್ಯದಲ್ಲಿ, ಅವರು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಅಡಿಪಾಯವನ್ನು ಹಾಕುವ ಬಗ್ಗೆ ಮಾತನಾಡಿದ್ದಾರೆ. ಮುಂಬರುವ ಐದು ವರ್ಷಗಳಲ್ಲಿ ಶಿಕ್ಷಣ, ಆರೋಗ್ಯ, ಸೇವೆ ಮತ್ತು ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಸಚಿವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈಗ ಭಾರತದ ಸ್ಥಿತಿ ಹೇಗಿದೆ?

ಭಾರತವು 2027 ರ ವೇಳೆಗೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ನಿರೀಕ್ಷೆಯಿದೆ. ಮೋದಿ ಸರ್ಕಾರದ ನೀತಿಗಳಿಂದಾಗಿ ದೇಶದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಹೆಚ್ಚಾಗಿದೆ. ಕಳೆದ 9 ವರ್ಷಗಳಲ್ಲಿ ಇದು 615.73 ಬಿಲಿಯನ್ ಡಾಲರ್ ಆಗಿದೆ. ಭಾರತದ ವಿದೇಶಿ ವಿನಿಮಯ ಸಂಗ್ರಹವೂ ವೇಗವಾಗಿ ಹೆಚ್ಚಿದೆ. ಇಂದು ಅದು 620.44 ಬಿಲಿಯನ್ ಡಾಲರ್ ಮಟ್ಟವನ್ನು ತಲುಪಿದೆ. ಅಂದರೆ, ಒಟ್ಟಾರೆಯಾಗಿ, ಭಾರತವು ಜಾಗತಿಕ ಎಂಜಿನ್‌ನ ಹಬ್ ಆಗುವ ದಿನ ಹತ್ತಿರದಲ್ಲಿದೆ.

ಇದನ್ನೂ ಓದಿ: What India Thinks Today: ಮಾರುತಿ ಸುಜುಕಿ ಇವಿಯಿಂದ ಏಕೆ ದೂರವಿದೆ, ಮಹೀಂದ್ರಾ ಭವಿಷ್ಯದ ಯೋಜನೆ ಏನು?

ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಭಾರತದಲ್ಲಿ ಅಂತರರಾಷ್ಟ್ರೀಯ ನಂಬಿಕೆಯು ಅತ್ಯುನ್ನತ ಮಟ್ಟದಲ್ಲಿದೆ ಎಂದು ಹೇಳಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್‌ಬಿಐ ಬೆಳವಣಿಗೆಯ ಅಂದಾಜು ಶೇ.7ರಷ್ಟಿತ್ತು. NSO (ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್) 7.3% ಎಂದು ಹೇಳಿದೆ. ಹಾಗಾಗಿ ಪ್ರಸಕ್ತ ವರ್ಷಕ್ಕೆ ಶೇ.7 ಎಂದು ಹೇಳಿದಾಗ ಆರ್‌ಬಿಐ ಅತಿಯಾಗಿ ಅಂದಾಜು ಮಾಡುತ್ತಿದೆ ಎಂದು ಹೊರಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಆದರೆ ವಾಸ್ತವದಲ್ಲಿ, NSO ಪ್ರಸಕ್ತ ವರ್ಷಕ್ಕೆ 7.3% ಮತ್ತು  2024-25 ಹಣಕಾಸು ವರ್ಷಕ್ಕೆ ಕ್ಕೆ 7.3% ಎಂದು ಹೇಳಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ