AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಉದ್ಯಮ ಯಶೋಗಾಥೆ: 11 ವರ್ಷದಲ್ಲಿ 6 ಪಟ್ಟು ಹೆಚ್ಚಿದ ತಯಾರಿಕೆ, 8 ಪಟ್ಟು ಹೆಚ್ಚಿದ ರಫ್ತು

India's electronics production reach Rs 12 lakh crore: ಎಲೆಕ್ಟ್ರಾನಿಕ್ಸ್ ಉದ್ಯಮ ಭಾರತದಲ್ಲಿ ಕಳೆದ 11 ವರ್ಷದಲ್ಲಿ ಸಖತ್ ಬೆಳವಣಿಗೆ ಕಂಡಿದೆ. ಎಲೆಕ್ಟ್ರಾನಿಕ್ಸ್ ತಯಾರಿಕೆಯು ಆರು ಪಟ್ಟು ಬೆಳೆದಿದೆ. ಎಲೆಕ್ಟ್ರಾನಿಕ್ಸ್ ಸರಕುಗಳ ರಫ್ತು 11 ವರ್ಷದಲ್ಲಿ ಎಂಟು ಪಟ್ಟು ಹೆಚ್ಚಿದೆ. ಶೇ. 75ರಷ್ಟು ಆಮದು ಮಾಡಿಕೊಳ್ಳುತ್ತಿದ್ದ ಎಲೆಕ್ಟ್ರಾನಿಕ್ಸ್ ಉದ್ಯಮ ಈಗ ರಫ್ತುದಾರ ಎನಿಸಿದೆ. ವಿಶ್ವದಲ್ಲೇ ಎರಡನೇ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ತಯಾರಿಕಾ ದೇಶ ಎನಿಸಿದೆ.

ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಉದ್ಯಮ ಯಶೋಗಾಥೆ: 11 ವರ್ಷದಲ್ಲಿ 6 ಪಟ್ಟು ಹೆಚ್ಚಿದ ತಯಾರಿಕೆ, 8 ಪಟ್ಟು ಹೆಚ್ಚಿದ ರಫ್ತು
ಸ್ಮಾರ್ಟ್​ಫೋನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 11, 2025 | 11:46 AM

Share

ಬೆಂಗಳೂರು, ಆಗಸ್ಟ್ 11: ಭಾರತದ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಉದ್ಯಮದ ಮೌಲ್ಯ 12 ಲಕ್ಷ ಕೋಟಿ ರೂ ಮುಟ್ಟಿದೆ. ಅಮೆರಿಕಕ್ಕೆ ಸ್ಮಾರ್ಟ್​ಫೋನ್ ಸರಬರಾಜುದಾರರಲ್ಲಿ (smartphone suppliers) ಭಾರತ ಮುಂಚೂಣಿಗೆ ಬಂದಿದೆ ಎಂದು ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆ (electronics manufacturing) ಕಳೆದ 11 ವರ್ಷದಲ್ಲಿ ಆರು ಪಟ್ಟು ಬೆಳೆದಿದೆ. ಎಲೆಕ್ಟ್ರಾನಿಕ್ಸ್ ಸರಕುಗಳ ರಫ್ತು ಎಂಟು ಪಟ್ಟು ಹೆಚ್ಚಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

‘ನಮ್ಮ ಎಲೆಕ್ಟ್ರಾನಿಕ್ಸ್ ತಯಾರಿಕೆಯು ಕಳೆದ 11 ವರ್ಷದಲ್ಲಿ ಆರು ಪಟ್ಟು ಬೆಳೆದಿದೆ. ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಉದ್ಯಮ 12 ಲಕ್ಷ ಕೋಟಿ ರೂ ತಲುಪಿದೆ. ಎಲೆಕ್ಟ್ರಾನಿಕ್ಸ್ ರಫ್ತು ಎಂಟು ಪಟ್ಟು ಬೆಳೆದಿದೆ. ಇವತ್ತು ಇದರ ರಫ್ತು 3 ಲಕ್ಷ ಕೋಟಿ ರೂನಷ್ಟಿದೆ. ಭಾರತವು ಈ ವಿಶ್ವದಲ್ಲಿ ಎರಡನೇ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ತಯಾರಕ ದೇಶವೆನಿಸಿದೆ’ ಎಂದು ಎ ವೈಷ್ಣವ್ ವಿವರಿಸಿದ್ದಾರೆ.

ಇದನ್ನೂ ಓದಿ: ಮ್ಯುಚುವಲ್ ಫಂಡ್ ಕಂಪನಿಗಳು ಟ್ರಾನ್ಸಾಕ್ಷನ್ ಶುಲ್ಕ, ಕಮಿಷನ್ ಕೊಡಬೇಕಿಲ್ಲ: ಸೆಬಿ ಕ್ರಮ

2014ರ ನಂತರ ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಉದ್ಯಮದ ರಕ್ಕಸ ಬೆಳವಣಿಗೆ

2014ರಲ್ಲಿ ಭಾರತದಲ್ಲಿ ಎರಡೇ ಎರಡು ಮೊಬೈಲ್ ಮ್ಯಾನುಫ್ಯಾಕ್ಚರಿಂಗ್ ಘಟಕಗಳಿದ್ದುವು. ಇವತ್ತು 300ಕ್ಕೂ ಹೆಚ್ಚು ಘಟಕಗಳಿವೆ. 2014-15ರಲ್ಲಿ ಭಾರತದಲ್ಲಿ ಮಾರಾಟವಾಗುತ್ತಿದ್ದ ಮೊಬೈಲ್ ಫೋನ್​ಗಳಲ್ಲಿ ಶೇ. 26ರಷ್ಟು ಮಾತ್ರವೇ ದೇಶೀಯವಾಗಿ ನಿರ್ಮಾಣವಾದಂಥವಾಗಿದ್ದುವು. ಉಳಿದವನ್ನು ಹೊರದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು. ಇವತ್ತು ಭಾರತದಲ್ಲಿ ಮಾರಾಟವಾಗುತ್ತಿರುವ ಶೇ. 99.2ರಷ್ಟು ಫೋನ್​ಗಳು ಮೇಡ್ ಇನ್ ಇಂಡಿಯಾದ್ದಾಗಿವೆ.

ಎಲೆಕ್ಟ್ರಾನಿಕ್ಸ್ ಉದ್ಯಮಕ್ಕೆ ಪುಷ್ಟಿ ಕೊಟ್ಟ ಪಿಎಲ್​ಐ ಸ್ಕೀಮ್

ಭಾರತ ಜಾರಿಗೆ ತಂದ ಪಿಎಲ್​ಐ ಸ್ಕೀಮ್, ಆರಂಭದಲ್ಲಿ ಮೊಬೈಲ್ ಫೋನ್ ತಯಾರಿಕೆಗೆ ಒತ್ತುಕೊಟ್ಟಿತ್ತು. ಫೋನ್ ಮ್ಯಾನುಫ್ಯಾಕ್ಚರಿಂಗ್​ಗೆ ಇರುವ ಪಿಎಲ್​ಐ ಸ್ಕೀಮ್​ನಿಂದ ಬರೋಬ್ಬರಿ 12,390 ಕೋಟಿ ರೂ ಹೂಡಿಕೆ ಹರಿದುಬಂದಿದೆ. ಕೇಂದ್ರ ಸಚಿವ ಜಿತಿನ್ ಪ್ರಸಾದ ಅವರು ಇತ್ತೀಚೆಗೆ ಲೋಕಸಭೆಗೆ ನೀಡಿದ ಮಾಹಿತಿ ಪ್ರಕಾರ ಮೊಬೈಲ್ ತಯಾರಿಕೆಗೆಂದು ರೂಪಿಸಲಾದ ಪಿಎಲ್​ಐ ಸ್ಕೀಮ್ ಅಡಿಯಲ್ಲಿ ಎಂಟೂವರೆ ಲಕ್ಷ ಕೋಟಿ ರೂ ಸಮೀಪದಷ್ಟು ಮೌಲ್ಯದ ಉತ್ಪಾದನೆ ಆಗಿದೆ. 1,30,330 ನೇರ ಉದ್ಯೋಗಗಳು ಸೃಷ್ಟಿಯಾಗಿವೆ.

ಇದನ್ನೂ ಓದಿ: ಟ್ರಂಪ್ ಟ್ಯಾರಿಫ್ ಬರೆ, ಭಾರತಕ್ಕೆ ಸಿಕ್ಕಿರುವ ದೊಡ್ಡ ಅವಕಾಶ: ಅಮಿತಾಭ್ ಕಾಂತ್

ಐಟಿ ಹಾರ್ಡ್​ವೇರ್​ಗಾಗಿ ರೂಪಿಸಲಾದ ಪಿಎಲ್​ಐ ಸ್ಕೀಮ್​ನಲ್ಲಿ ಈವರೆಗೆ 717 ಕೋಟಿ ರೂ ಹೂಡಿಕೆ ಬಂದಿದೆ. ಈ ಯೋಜನೆ ಅಡಿ 12,195 ಕೋಟಿ ರೂ ಮೌಲ್ಯದ ಸರಕುಗಳ ಉತ್ಪಾದನೆ ಆಗಿದೆ. 5,056 ನೇರ ಉದ್ಯೋಗಗಳು ಸೃಷ್ಟಿಯಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!