AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಫಾರೆಕ್ಸ್ ರಿಸರ್ವ್ಸ್ 50 ದಿನದಲ್ಲಿ 47 ಬಿಲಿಯನ್ ಡಾಲರ್​ನಷ್ಟು ಇಳಿಕೆ; ಪಾಕಿಸ್ತಾನದ್ದು 17 ಮಿಲಿಯನ್ ಡಾಲರ್ ಏರಿಕೆ

Forex reserves of India: ಭಾರತದ ಫಾರೀನ್ ಎಕ್ಸ್​ಚೇಂಜ್ ರಿಸರ್ವ್ಸ್ ನವೆಂಬರ್ 15ರಂದು ಅಂತ್ಯಗೊಂಡ ವಾರದಲ್ಲಿ 17 ಬಿಲಿಯನ್ ಡಾಲರ್​ನಷ್ಟು ಇಳಿಕೆ ಕಂಡಿದೆ. ಕಳೆದ 50 ದಿನಗಳಿಂದ ಕುಸಿತವಾದ ಫಾರೆಕ್ಸ್ ಮೀಸಲು ನಿಧಿಯ ಪ್ರಮಾಣ ಬರೋಬ್ಬರಿ 47 ಬಿಲಿಯನ್ ಡಾಲರ್ ಆಗಿದೆ. ಅದೇ ವೇಳೆ ಪಾಕಿಸ್ತಾನದಲ್ಲಿ ಫಾರೆಕ್ಸ್ ಸಂಪತ್ತು 17 ಮಿಲಿಯನ್ ಡಾಲರ್​ನಷ್ಟು ಏರಿದೆ.

ಭಾರತದ ಫಾರೆಕ್ಸ್ ರಿಸರ್ವ್ಸ್ 50 ದಿನದಲ್ಲಿ 47 ಬಿಲಿಯನ್ ಡಾಲರ್​ನಷ್ಟು ಇಳಿಕೆ; ಪಾಕಿಸ್ತಾನದ್ದು 17 ಮಿಲಿಯನ್ ಡಾಲರ್ ಏರಿಕೆ
ಫಾರೆಕ್ಸ್ ಸಂಪತ್ತು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 24, 2024 | 1:19 PM

Share

ನವದೆಹಲಿ, ನವೆಂಬರ್ 24: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿಯಲ್ಲಿ ಸತತವಾದ ಇಳಿಕೆ ಮುಂದುವರಿದಿದೆ. ಮೊನ್ನೆ ಆರ್​ಬಿಐ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಭಾರತದ ಫಾರೆಕ್ಸ್ ರಿಸರ್ವ್ಸ್ ನವೆಂಬರ್ 15ರಂದು 657.892 ಬಿಲಿಯನ್ ಡಾಲರ್​ಗೆ ಇಳಿದಿದೆ. ಆ ವಾರ ಬರೋಬ್ಬರಿ 17.761 ಬಿಲಿಯನ್ ಡಾಲರ್​ನಷ್ಟು ನಿಧಿ ಕುಸಿತ ಕಂಡಿದೆ. ಅದಕ್ಕೂ ಹಿಂದಿನ ವಾರದಲ್ಲಿ, ಅಂದರೆ ನವೆಂಬರ್ 8ರಂದು ಅಂತ್ಯಗೊಂಡ ವಾರದಲ್ಲಿ 6.477 ಬಿಲಿಯನ್ ಡಾಲರ್​ನಷ್ಟು ಇಳಿದಿತ್ತು.

ನವೆಂಬರ್ 15ರಂದು ಅಂತ್ಯಗೊಂಡ ವಾರದಲ್ಲಿ ಫಾರೆಕ್ಸ್ ರಿಸರ್ವ್ಸ್ ಕುಸಿತವಾದ 17.761 ಬಿಲಿಯನ್ ಡಾಲರ್​ನಲ್ಲಿ ವಿದೇಶೀ ಕರೆನ್ಸಿ ಆಸ್ತಿಗಳ ಮೌಲ್ಯ ಕುಸಿತವೇ 15.548 ಬಿಲಿಯನ್ ಡಾಲರ್​ನಷ್ಟಿದೆ. ಗೋಲ್ಡ್ ರಿಸರ್ವ್ ಕೂಡ 2.068 ಬಿಲಿಯನ್ ಡಾಲರ್​ನಷ್ಟು ಇಳಿಕೆ ಆಗಿದೆ. ಎಸ್​ಡಿಆರ್ ಮತ್ತು ಐಎಂಎಫ್​ನೊಂದಿಗಿನ ನಿಧಿಯಲ್ಲೂ ಇಳಿಕೆ ಆಗಿದೆ.

ಇದನ್ನೂ ಓದಿ: ಭಾರತದ ಸ್ಟಾರ್ಟಪ್​ಗಳಿಗೆ ಈ ವಾರ ಫಂಡಿಂಗ್ ಸುಗ್ಗಿ; ಶೇ. 226ರಷ್ಟು ಫಂಡಿಂಗ್ ಹೆಚ್ಚಳ

50 ದಿನದಲ್ಲಿ 47 ಬಿಲಿಯನ್ ಡಾಲರ್​ನಷ್ಟು ಫಾರೆಕ್ಸ್ ರಿಸರ್ವ್ಸ್ ಕುಸಿತ

ಭಾರತದ ಫಾರೆಕ್ಸ್ ರಿಸರ್ವ್ಸ್ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಗರಿಷ್ಠ ಮಟ್ಟವಾದ 704.885 ಬಿಲಿಯನ್ ಡಾಲರ್ ಮುಟ್ಟಿತ್ತು. ಅದಾದ ಬಳಿಕ ನಿಧಿಯಲ್ಲಿ ಸತತ ಇಳಿಕೆ ಆಗಿದೆ. 50 ದಿನದ ಅಂತರದಲ್ಲಿ 47 ಬಿಲಿಯನ್ ಡಾಲರ್​ನಷ್ಟು ಇಳಿಕೆ ಆಗಿದೆ.

ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಫಾರೆಕ್ಸ್ ಸಂಪತ್ತು

ಪಾಕಿಸ್ತಾನದ ವಿದೇಶೀ ವಿನಿಮಯ ಮೀಸಲು ನಿಧಿ ಕಳೆದ ಕೆಲ ವಾರಗಳಿಂದ ಉತ್ತಮ ಪ್ರಮಾಣದಲ್ಲಿ ಹೆಚ್ಚಳ ಕಾಣುತ್ತಿದೆ. ಭಾರತದ ಫಾರೆಕ್ಸ್ ಸಂಪತ್ತು 50 ದಿನದಲ್ಲಿ 47 ಬಿಲಿಯನ್ ಡಾಲರ್​ನಷ್ಟು ಕುಸಿತ ಕಂಡರೆ, ಪಾಕಿಸ್ತಾನದ ಸಂಪತ್ತು ಅದೇ ವೇಳೆ 29 ಮಿಲಿಯನ್ ಡಾಲರ್​ನಷ್ಟು ಏರಿಕೆ ಆಗಿದೆ. ಆ ದೇಶದ ಒಟ್ಟಾರೆ ಫಾರೆಕ್ಸ್ ನಿಧಿ 16 ಬಿಲಿಯನ್ ಡಾಲರ್​ಗೆ ಏರಿದೆ.

ಇದನ್ನೂ ಓದಿ: ಇನ್ನೊಂದು ವರ್ಷದಲ್ಲಿ ಎರಡು ಪಟ್ಟು ಹೆಚ್ಚಲಿದೆಯಂತೆ ಬಿಟ್​ಕಾಯಿನ್ ಮೌಲ್ಯ; 2,00,000 ಡಾಲರ್ ಬೆಲೆ ಪಡೆಯಲಿದೆ ಈ ಕ್ರಿಪ್ಟೋಕರೆನ್ಸಿ

ಪಾಕಿಸ್ತಾನದ ಒಟ್ಟಾರೆ ಫಾರೆಕ್ಸ್ ನಿಧಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಸಂಪತ್ತು ಒಂದೇ ವಾರದಲ್ಲಿ ಕರಗಿದೆ. ಇಷ್ಟಾದರೂ ಭಾರತದ ಫಾರೆಕ್ಸ್ ನಿಧಿಯು ಪಾಕಿಸ್ತಾನದಕ್ಕಿಂತ 41 ಪಟ್ಟು ಹೆಚ್ಚು ಇದೆ. ಚೀನಾ, ಜಪಾನ್, ಸ್ವಿಟ್ಜರ್​ಲ್ಯಾಂಡ್ ಬಿಟ್ಟರೆ ಭಾರತವೇ ಅತಿಹೆಚ್ಚು ಫಾರೆಕ್ಸ್ ರಿಸರ್ವ್ಸ್ ನಿಧಿ ಹೊಂದಿರುವುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ