AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಅವರ ಯುಎಇ-ಯೂರೋಪ್ ಪ್ರವಾಸ; 70 ಬಿಲಿಯನ್ ಡಾಲರ್ ವ್ಯಾಪಾರ ಪುಷ್ಟಿ ನಿರೀಕ್ಷೆ

PM Modi's Global Tour: ಪ್ರಧಾನಿ ಮೋದಿ ಯುಎಇ ಮತ್ತು ಯುರೋಪಿಯನ್ ರಾಷ್ಟ್ರಗಳಿಗೆ ಐದು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಇದು ಭಾರತದ ರಫ್ತು ಮತ್ತು ಜಾಗತಿಕ ಹೂಡಿಕೆಗೆ ಉತ್ತೇಜನ ನೀಡಲಿದೆ. ಈ ರಾಷ್ಟ್ರಗಳೊಂದಿಗೆ $70 ಬಿಲಿಯನ್‌ಗೂ ಅಧಿಕ ವ್ಯಾಪಾರ ನಡೆಯುತ್ತಿದೆ. ಯುಎಇ ಜೊತೆ ಇಂಧನ ಭದ್ರತೆ, ಯುರೋಪ್ ಜೊತೆ ಮುಕ್ತ ವ್ಯಾಪಾರ ಒಪ್ಪಂದಗಳು, ಹಸಿರು ಇಂಧನ ಮತ್ತು ತಂತ್ರಜ್ಞಾನ ಸಹಕಾರ ಪ್ರಮುಖ ಅಂಶಗಳು. ಭಾರತೀಯ ಉದ್ಯಮಗಳಿಗೆ ಹೊಸ ಮಾರುಕಟ್ಟೆ ಅವಕಾಶಗಳನ್ನು ಸೃಷ್ಟಿಸುವುದು ಇದರ ಗುರಿ.

ಮೋದಿ ಅವರ ಯುಎಇ-ಯೂರೋಪ್ ಪ್ರವಾಸ; 70 ಬಿಲಿಯನ್ ಡಾಲರ್ ವ್ಯಾಪಾರ ಪುಷ್ಟಿ ನಿರೀಕ್ಷೆ
ಪ್ರಧಾನಿ ಮೋದಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 14, 2026 | 8:04 PM

Share

ನವದೆಹಲಿ, ಮೇ 14: ಭಾರತದ ರಫ್ತು ಮತ್ತು ಹೂಡಿಕೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಉತ್ತೇಜನ ನೀಡುವ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 15 ರಿಂದ 20 ರವರೆಗೆ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) ಮತ್ತು ಪ್ರಮುಖ ಯುರೋಪಿಯನ್ ದೇಶಗಳ ಬಹು-ರಾಷ್ಟ್ರ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಈ ಮಹತ್ವದ ಐದು ರಾಷ್ಟ್ರಗಳ ವಿದೇಶಿ ಪ್ರವಾಸವನ್ನು ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟ (FIEO) ಬಲವಾಗಿ ಸ್ವಾಗತಿಸಿದೆ. ಪ್ರಧಾನಿ ಮೋದಿ ಅವರು ಈ ಪ್ರವಾಸದಲ್ಲಿ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ಭೇಟಿ ನೀಡಲಿದ್ದು, ಆಯಾ ದೇಶಗಳ ಉನ್ನತ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

70 ಬಿಲಿಯನ್ ಡಾಲರ್‌ಗೂ ಅಧಿಕ ವ್ಯಾಪಾರ ಪಾಲುದಾರಿಕೆ

ಎಫ್‌ಐಇಒ (FIEO) ಅಧ್ಯಕ್ಷ ಎಸ್. ಸಿ. ರಾಲ್ಹನ್ ಅವರ ಪ್ರಕಾರ, ಪ್ರಧಾನಿ ಭೇಟಿ ನೀಡುತ್ತಿರುವ ಈ ಎಲ್ಲಾ ದೇಶಗಳೊಂದಿಗೆ ಭಾರತವು ಈಗಾಗಲೇ ಜಂಟಿಯಾಗಿ 70 ಬಿಲಿಯನ್ ಡಾಲರ್​ಗಿಂತಲೂ (ಸುಮಾರು 6.6 ಲಕ್ಷ ಕೋಟಿ ರೂ.) ಹೆಚ್ಚಿನ ದ್ವಿಪಕ್ಷೀಯ ವ್ಯಾಪಾರವನ್ನು ಹೊಂದಿದೆ. ಪ್ರಧಾನಿಯವರ ಈ ಹೈ-ಲೆವೆಲ್ ಭೇಟಿಯು ಕ್ರಾಸ್-ಬಾರ್ಡರ್ ಹೂಡಿಕೆ, ತಂತ್ರಜ್ಞಾನ ವಿನಿಮಯ ಮತ್ತು ಮುಕ್ತ ವ್ಯಾಪಾರಕ್ಕೆ ಹೊಸ ವೇಗವನ್ನು ನೀಡಲಿದೆ.

ಇದನ್ನೂ ಓದಿ: ಮ್ಯೂಚುವಲ್ ಫಂಡ್ ಡಿಸ್ಟ್ರಿಬ್ಯೂಟರ್ಸ್ ಮಾದರಿಯಲ್ಲಿ ಬಾಂಡ್ ವಿತರಕರ ಜಾಲ ಬೆಳೆಸಲು ಸೆಬಿ ಸಜ್ಜು

ಪ್ರವಾಸದ ಪ್ರಮುಖ ಸ್ಟ್ರಾಟಿಜಿಗಳು

ಯುಎಇ ಜೊತೆ ಇಂಧನ ಮತ್ತು ಆರ್ಥಿಕ ಭದ್ರತೆ: ಮಧ್ಯಪ್ರಾಚ್ಯದಲ್ಲಿ ಇರಾನ್-ಅಮೆರಿಕ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಏರುಪೇರಾಗುತ್ತಿರುವ ಬೆನ್ನಲ್ಲೇ ಮೋದಿ ಅವರ ಯುಎಇ ಭೇಟಿ ಗಮರ್ನಾಹವಾಗಿದೆ. ಭಾರತದ ಇಂಧನ ಸ್ಥಿರತೆ, ದೀರ್ಘಾವಧಿಯ ತೈಲ ಪೂರೈಕೆ ಮತ್ತು ಮೂಲಸೌಕರ್ಯಗಳಲ್ಲಿ ಯುಎಇ ಹೂಡಿಕೆಯನ್ನು ಖಚಿತಪಡಿಸಿಕೊಳ್ಳಲು ಈ ಭೇಟಿ ನೆರವಾಗಲಿದೆ.

ಯುರೋಪ್ ಜೊತೆ ಮುಕ್ತ ವ್ಯಾಪಾರ ಒಪ್ಪಂದ: ಇತ್ತೀಚೆಗಷ್ಟೇ ಮುಕ್ತಾಯಗೊಂಡ ಭಾರತ-ಯುರೋಪಿಯನ್ ಯೂನಿಯನ್ ಮುಕ್ತ ವ್ಯಾಪಾರ ಒಪ್ಪಂದ (FTA) ಮತ್ತು ಭಾರತ-ಇಎಫ್‌ಟಿಎ (EFTA) ವ್ಯಾಪಾರ ಒಪ್ಪಂದಗಳ ಹಿನ್ನೆಲೆಯಲ್ಲಿ ಈ ಪ್ರವಾಸ ಆಯೋಜನೆಗೊಂಡಿದೆ.

ಭವಿಷ್ಯದ ತಂತ್ರಜ್ಞಾನಗಳು: ಗ್ರೀನ್ ಹೈಡ್ರೋಜನ್ (ಹಸಿರು ಇಂಧನ), ಸೆಮಿಕಂಡಕ್ಟರ್‌ಗಳು, ಕೃತಕ ಬುದ್ಧಿಮತ್ತೆ (AI), ರಕ್ಷಣಾ ವಲಯದ ಉತ್ಪಾದನೆ ಮತ್ತು ಕ್ಲೀನ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಸಹಕಾರವನ್ನು ವೃದ್ಧಿಸಲು ಯುರೋಪ್ ನಾಯಕರೊಂದಿಗೆ ಮೋದಿ ಚರ್ಚಿಸಲಿದ್ದಾರೆ.

ಇದನ್ನೂ ಓದಿ: ಲಿಥಿಯಂ ಮತ್ತು ವಿರಳ ಭೂಖನಿಜಗಳಿಗೆ ರಷ್ಯಾ ಜೊತೆ ಶೀಘ್ರದಲ್ಲೇ ಭಾರತದ ಮಹತ್ವದ ಒಪ್ಪಂದ

ಭಾರತೀಯ ರಫ್ತುದಾರರಿಗೆ ಬಂಪರ್ ಅವಕಾಶ

ಪ್ರಧಾನಿ ಅವರ ಈ ಭೇಟಿಯಿಂದಾಗಿ ಭಾರತದ ಇಂಜಿನಿಯರಿಂಗ್, ಫಾರ್ಮಾಸ್ಯುಟಿಕಲ್ಸ್ (ಔಷಧ), ಶುದ್ಧ ಇಂಧನ, ಜವಳಿ, ಆಹಾರ ಸಂಸ್ಕರಣೆ ಮತ್ತು ಡಿಜಿಟಲ್ ವ್ಯಾಪಾರ ವಲಯದ ರಫ್ತುದಾರರಿಗೆ ಹೊಸ ಮಾರುಕಟ್ಟೆಗಳು ಮುಕ್ತವಾಗಲಿವೆ. ಅಷ್ಟೇ ಅಲ್ಲದೆ, ಪ್ರಧಾನಿಯವರು ‘ಯುರೋಪಿಯನ್ ರೌಂಡ್ ಟೇಬಲ್ ಫಾರ್ ಇಂಡಸ್ಟ್ರಿ’ ಮತ್ತು ‘ಭಾರತ-ನಾರ್ವೆ ಬಿಸಿನೆಸ್ ಮತ್ತು ರಿಸರ್ಚ್ ಶೃಂಗಸಭೆ’ಯಲ್ಲೂ ಭಾಗವಹಿಸಲಿದ್ದಾರೆ.

ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆಯೂ ಭಾರತವನ್ನು ವಿಶ್ವಾಸಾರ್ಹ ಆರ್ಥಿಕ ಪಾಲುದಾರ ಹಾಗೂ ಜಾಗತಿಕ ಪ್ರಗತಿಯ ಪ್ರಮುಖ ಚಾಲನಾ ಶಕ್ತಿಯಾಗಿ ಬಿಂಬಿಸಲು ಈ 6 ದಿನಗಳ ವಿದೇಶಿ ಪ್ರವಾಸ ಅತ್ಯಂತ ನಿರ್ಣಾಯಕವಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?