AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಅನಿಶ್ಚಿತತೆಯ ಸಂದರ್ಭದಲ್ಲೂ ಪ್ರಗತಿಯಲ್ಲಿ ಭಾರತ ಹೆಜ್ಜೆ: ಪ್ರಧಾನಿ ಮೋದಿ

PM Narendra Modi at UPITS: ಪ್ರಧಾನಿ ನರೇಂದ್ರ ಮೋದಿ ಇಂದು ಗುರುವಾರ ನೋಯ್ಡಾದಲ್ಲಿ ಯುಪಿ ಇಂಟರ್​ನ್ಯಾಷನಲ್ ಟ್ರೇಡ್ ಶೋ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಗಳು, ಜಾಗತಿಕ ಅನಿಶ್ಚಿತತೆಯ ಪರಿಸ್ಥಿತಿಯಲ್ಲೂ ಭಾರತ ಉತ್ತಮ ರೀತಿಯಲ್ಲಿ ಪ್ರಗತಿ ಸಾಧಿಸಿದೆ ಎಂದರು. ಒಂದು ದೇಶ ಬೇರೆಯವರ ಮೇಲೆ ಅವಲಂಬಿತವಾದರೆ ಅದರ ಪ್ರಗತಿಗೆ ಹಿನ್ನಡೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

Narendra Modi: ಅನಿಶ್ಚಿತತೆಯ ಸಂದರ್ಭದಲ್ಲೂ ಪ್ರಗತಿಯಲ್ಲಿ ಭಾರತ ಹೆಜ್ಜೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 25, 2025 | 11:54 AM

Share

ನೋಯ್ಡಾ, ಸೆಪ್ಟೆಂಬರ್ 25: ಜಾಗತಿಕವಾಗಿ ಅನಿಶ್ಚಿತತೆಯ ಪರಿಸ್ಥಿತಿ ಇದ್ದರೂ ಭಾರತದ ಪ್ರಗತಿಯ ಹಾದಿ ಉತ್ತಮವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಒತ್ತಿ ಹೇಳಿದರು. ಇಲ್ಲಿ ಇಂದು ಉತ್ತರಪ್ರದೇಶ ಅಂತರರಾಷ್ಟ್ರೀಯ ವ್ಯಾಪಾರ ಪ್ರದರ್ಶನ (ಯುಪಿಐಟಿಎಸ್) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ನರೇಂದ್ರ ಮೋದಿ ಅವರು ತಮ್ಮ ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳನ್ನು ವಿವರಿಸಿದರು.

ಮೇಕ್ ಇನ್ ಇಂಡಿಯಾ ಯೋಜನೆ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಭಾರತದಲ್ಲಿ ಎಲ್ಲವನ್ನೂ ತಯಾರಿಸುವ ಯೋಜನೆ ಹಮ್ಮಿಕೊಳ್ಳಲಾಗಿರುವುದನ್ನು ನರೇಂದ್ರ ಮೋದಿ ಈ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ: ಇಪಿಎಫ್​ಒದ ಬಹುನಿರೀಕ್ಷಿತ ಎಟಿಎಂ ಫೀಚರ್: ಜನವರಿಯಿಂದ ಸಿಗುತ್ತಾ ಈ ಸೌಲಭ್ಯ?

‘ಅನಿಶ್ಚಿತತೆಯ ಸಂದರ್ಭಗಳು ನಮಗೆ ಹಿನ್ನಡೆ ತರುವುದಿಲ್ಲ. ಅಂಥ ಪರಿಸ್ಥಿತಿಯಲ್ಲೂ ಹೊಸ ಮಾರ್ಗ ಕಂಡುಕೊಳ್ಳಲು ಯತ್ನಿಸುತ್ತೇವೆ. ಮುಂಬರುವ ದಶಕಗಳ ಬೆಳವಣಿಗೆಗಾಗಿ ಈಗ ತಳಹದಿ ಬಲಪಡಿಸಲಾಗುತ್ತಿದೆ. ಸ್ವಾವಲಂಬಿ ಭಾರತ್ ನಿರ್ಮಾಣವೇ ನಮ್ಮ ಸಂಕಲ್ಪ ಮತ್ತು ಮಂತ್ರ’ ಎಂದು ಪ್ರಧಾನಿ ತಿಳಿಸಿದರು.

‘ಬೇರೆಯವರ ಮೇಲೆ ಅವಲಂಬಿತವಾಗಿರುವುದಕ್ಕಿಂತ ಹೆಚ್ಚಿನ ಅಸಹಾಯಕತೆ ಮತ್ತೊಂದಿಲ್ಲ. ಒಂದು ದೇಶವು ಬೇರೆಯವರ ಮೇಲೆ ಹೆಚ್ಚು ಅವಲಂಬಿತವಾದಷ್ಟೂ ಅದರ ಪ್ರಗತಿ ಕುಂಠಿತಗೊಳ್ಳುತ್ತಾ ಹೋಗುತ್ತದೆ’ ಎಂದು ನರೇಂದ್ರ ಮೋದಿ ವಿಶ್ಲೇಷಿಸಿದರು.

ಇದನ್ನೂ ಓದಿ: ಪೋಸ್ಟ್ ಆಫೀಸ್​ನ ಈ ಸ್ಕೀಮ್​ನಿಂದ ತಿಂಗಳಿಗೆ 9,250 ರೂವರೆಗೂ ನಿಯಮಿತ ಆದಾಯ ಸೃಷ್ಟಿಸಿ

ದೆಹಲಿಗೆ ಸಮೀಪವೇ ಇರುವ ನೋಯ್ಡಾದಲ್ಲಿ ಉದ್ಘಾಟನೆಯಾಗಿರುವ ಇಂಟರ್​ನ್ಯಾಷನಲ್ ಟ್ರೇಡ್ ಶೋನಲ್ಲಿ 2,500ಕ್ಕೂ ಅಧಿಕ ಪ್ರದರ್ಶಕರು, 500ಕ್ಕೂ ಅಧಿಕ ವಿದೇಶೀ ಖರೀದಿದಾರರು ಪಾಲ್ಗೊಂಡಿದ್ದಾರೆ. ಐದು ಲಕ್ಷಕ್ಕೂ ಅಧಿಕ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಟ್ರೇಡ್ ಶೋನದಲ್ಲಿ ರಷ್ಯಾ ಒಂದು ಪಾರ್ಟ್ನರ್ ದೇಶವಾಗಿದೆ. ಪ್ರಧಾನಿ ತಮ್ಮ ಭಾಷಣದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ, ಭಾರತ ಹಾಗೂ ರಷ್ಯಾದ ಸಹಭಾಗಿತ್ವವು ಸಾಕಷ್ಟು ವರ್ಷಗಳಿಂದ ಗಟ್ಟಿಯಾಗಿದೆ ಎಂದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:50 am, Thu, 25 September 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ