GST Collection: ಜೂನ್ ತಿಂಗಳ ಜಿಎಸ್​​ಟಿ ಸಂಗ್ರಹದಲ್ಲಿ ಭರ್ಜರಿ ಹೆಚ್ಚಳ; ಕಳೆದ ವರ್ಷಕ್ಕಿಂತ ಶೇ 12ರಷ್ಟು ಹೆಚ್ಚು

ಇದರೊಂದಿಗೆ ಮಾಸಿಕ ಜಿಎಸ್‌ಟಿ ಆದಾಯ ಸತತ 15ನೇ ತಿಂಗಳಿನಲ್ಲಿಯೂ 1.4 ಲಕ್ಷ ಕೋಟಿ ರೂ.ಗೂ ಹೆಚ್ಚು ಸಂಗ್ರಹವಾದಂತಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಯಾದ ನಂತರ ಒಟ್ಟು ಆದಾಯವು ಆರನೇ ಬಾರಿಗೆ 1.6 ಲಕ್ಷ ಕೋಟಿ ಗಡಿ ದಾಟಿದೆ.

GST Collection: ಜೂನ್ ತಿಂಗಳ ಜಿಎಸ್​​ಟಿ ಸಂಗ್ರಹದಲ್ಲಿ ಭರ್ಜರಿ ಹೆಚ್ಚಳ; ಕಳೆದ ವರ್ಷಕ್ಕಿಂತ ಶೇ 12ರಷ್ಟು ಹೆಚ್ಚು
ಜಿಎಸ್​​ಟಿ
Follow us
|

Updated on: Jul 01, 2023 | 3:30 PM

ನವದೆಹಲಿ: ಭಾರತದ ಒಟ್ಟು ಜಿಎಸ್‌ಟಿ ಆದಾಯ ಸಂಗ್ರಹವು (GST Revenue Collection) ಜೂನ್‌ನಲ್ಲಿ 1,61,497 ಕೋಟಿ ರೂಪಾಯಿಗಳಾಗಿದ್ದು, ಕಳೆದ ವರ್ಷದ ಇದೇ ಅವಧಿಗಿಂತ ಶೇಕಡಾ 12 ರಷ್ಟು ಏರಿಕೆಯನ್ನು ದಾಖಲಿಸಿದೆ ಎಂದು ಹಣಕಾಸು ಸಚಿವಾಲಯ (Finance Ministry) ಶನಿವಾರ ತಿಳಿಸಿದೆ. 2023 ರ ಏಪ್ರಿಲ್‌ನಲ್ಲಿ 1.87 ಲಕ್ಷ ಕೋಟಿ ರೂಪಾಯಿಗಳ ಜಿಎಸ್​ಟಿ ಸಂಗ್ರಹವಾಗಿದ್ದು, ಇದು ಈವರೆಗಿನ ಗರಿಷ್ಠ ಸಂಗ್ರಹವಾಗಿದೆ. ಮೇ ತಿಂಗಳಲ್ಲಿ 1,57,090 ಕೋಟಿ ರೂಪಾಯಿ ಪರೋಕ್ಷ ತೆರಿಗೆ ಸಂಗ್ರಹವಾಗಿತ್ತು.

ಇದರೊಂದಿಗೆ ಮಾಸಿಕ ಜಿಎಸ್‌ಟಿ ಆದಾಯ ಸತತ 15ನೇ ತಿಂಗಳಿನಲ್ಲಿಯೂ 1.4 ಲಕ್ಷ ಕೋಟಿ ರೂ.ಗೂ ಹೆಚ್ಚು ಸಂಗ್ರಹವಾದಂತಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಯಾದ ನಂತರ ಒಟ್ಟು ಆದಾಯವು ಆರನೇ ಬಾರಿಗೆ 1.6 ಲಕ್ಷ ಕೋಟಿ ಗಡಿ ದಾಟಿದೆ.

2021-22, 22-23 ಮತ್ತು 23-24 ರ ಹಣಕಾಸು ವರ್ಷಗಳ ಮೊದಲ ತ್ರೈಮಾಸಿಕದಲ್ಲಿ ಸರಾಸರಿ, ಮಾಸಿಕ ಒಟ್ಟು ಜಿಎಸ್​ಟಿ ಸಂಗ್ರಹವು ಕ್ರಮವಾಗಿ 1.10 ಲಕ್ಷ ಕೋಟಿ ರೂ., 1.51 ಲಕ್ಷ ಕೋಟಿ ರೂ. ಮತ್ತು 1.69 ಲಕ್ಷ ಕೋಟಿ ರೂ. ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಹೆಚ್ಚಳ: ಸರ್ಕಾರ ಆದೇಶ

ಜೂನ್‌ನಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್‌ಟಿ ಆದಾಯದಲ್ಲಿ ಸಿಜಿಎಸ್‌ಟಿ (ಕೇಂದ್ರ ಸಂಗ್ರಹ) 31,013 ಕೋಟಿ ರೂ., ಎಸ್‌ಜಿಎಸ್‌ಟಿ (ರಾಜ್ಯ ಸಂಗ್ರಹ) 38,292 ಕೋಟಿ ರೂ., ಐಜಿಎಸ್‌ಟಿ 80,292 ಕೋಟಿ ರೂ. (ಸರಕುಗಳ ಆಮದಿನ ಮೇಲೆ 39,035 ಕೋಟಿ ಸಂಗ್ರಹಿಸಲಾಗಿದೆ) ಮತ್ತು ಸೆಸ್ 11,900 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ರೂ 1,028 ಕೋಟಿ ಸೇರಿದಂತೆ) ಆಗಿದೆ.

ಜೂನ್​​ನಲ್ಲಿ, ದೇಶೀಯ ವಹಿವಾಟುಗಳಿಂದ (ಸೇವೆಗಳ ಆಮದು ಸೇರಿದಂತೆ) ಸಂಗ್ರಹಿಸಲ್ಪಟ್ಟ ಆದಾಯವು ಕಳೆದ ವರ್ಷದ ಇದೇ ತಿಂಗಳಿನಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ ಶೇಕಡಾ 18 ರಷ್ಟು ಹೆಚ್ಚಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು