AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹಸಿರು ಇಂಧನ ಕ್ರಾಂತಿ; ಆರು ತಿಂಗಳಲ್ಲಿ ದಾಖಲೆಯ ಶೇ.25ರಷ್ಟು ಪ್ರಗತಿ- ಮಾಹಿತಿ ಬಿಚ್ಚಿಟ್ಟ ಸಚಿವ ಪ್ರಲ್ಹಾದ್ ಜೋಶಿ

India's renewable energy capacity increase by 25pc: 2026ರ ಮೊದಲಾರ್ಧದಲ್ಲಿ 30,581 ಮೆಗಾವ್ಯಾಟ್‌ಗೂ ಅಧಿಕ ಹಸಿರು ಇಂಧನ ಉತ್ಪಾದನಾ ಸಾಮರ್ಥ್ಯ ಸೇರ್ಪಡೆಯಾಗಿದೆ. ಸೌರಶಕ್ತಿ ವಲಯದಲ್ಲಿ ಶೇ.43ರಷ್ಟು ಭರ್ಜರಿ ಬೆಳವಣಿಗೆಯಾಗಿದೆ. ಸೌರಶಕ್ತಿಯಿಂದಲೇ 26,342.07 ಮೆವ್ಯಾ ಇಂಧನ ಉತ್ಪಾದನೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಸೋಲಾರ್ ಎನರ್ಜಿ ಸಾಮರ್ಥ್ಯ ಶೇ. 43ರಷ್ಟು ಹೆಚ್ಚಾಗಿದೆ.

ಭಾರತದಲ್ಲಿ ಹಸಿರು ಇಂಧನ ಕ್ರಾಂತಿ; ಆರು ತಿಂಗಳಲ್ಲಿ ದಾಖಲೆಯ ಶೇ.25ರಷ್ಟು ಪ್ರಗತಿ- ಮಾಹಿತಿ ಬಿಚ್ಚಿಟ್ಟ ಸಚಿವ ಪ್ರಲ್ಹಾದ್ ಜೋಶಿ
ನವೀಕರಣ ಇಂಧನImage Credit source: Pralhad Joshi's X @JoshiPralhad
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 17, 2026 | 8:24 PM

Share

ನವದೆಹಲಿ, ಜುಲೈ 17: ಭಾರತವು ಸ್ವಚ್ಛ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ (Clean and Renewable energy capacity) ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದೆ. 2026ರ ಮೊದಲ ಆರು ತಿಂಗಳ ಅವಧಿಯಲ್ಲೇ ದೇಶದ ಹಸಿರು ಇಂಧನ ಕ್ಷೇತ್ರವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 25ರಷ್ಟು ಅಭೂತಪೂರ್ವ ಪ್ರಗತಿ ಕಂಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ತಿಳಿಸಿದ್ದಾರೆ.

2026ರ ಜನವರಿಯಿಂದ ಜೂನ್ ವರೆಗಿನ ಅವಧಿಯಲ್ಲಿ ಭಾರತವು ತನ್ನ ಇಂಧನ ಜಾಲಕ್ಕೆ 30,581.31 ಮೆಗಾವ್ಯಾಟ್ (MW) ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಯಶಸ್ವಿಯಾಗಿ ಸೇರ್ಪಡೆಗೊಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ (ಜೂನ್ 2025ರ ವೇಳೆಗೆ) ಈ ಪ್ರಮಾಣವು 24,554.49 ಮೆಗಾವ್ಯಾಟ್ ಆಗಿತ್ತು.

ಪ್ರಲ್ಹಾದ್ ಜೋಶಿ ಅವರ ಎಕ್ಸ್ ಪೋಸ್ಟ್

ಸೌರಶಕ್ತಿಯ ಭರ್ಜರಿ ಜಿಗಿತ: ಭಾರತದ ಈ ಇಂಧನ ಕ್ರಾಂತಿಗೆ ಸೌರಶಕ್ತಿ (Solar Energy) ಪ್ರಮುಖ ಇಂಜಿನ್ ಆಗಿ ಕೆಲಸ ಮಾಡಿದೆ. ಈ ಆರು ತಿಂಗಳಲ್ಲಿ ಕೇವಲ ಸೌರಶಕ್ತಿಯಿಂದಲೇ 26,342.07 ಮೆಗಾವ್ಯಾಟ್ ಸಾಮರ್ಥ್ಯವನ್ನು ಸೃಜಿಸಲಾಗಿದೆ. ಇದು ಕಳೆದ ವರ್ಷದ ಇದೇ ಅವಧಿಯ (18,383.12 ಮೆಗಾವ್ಯಾಟ್) ಸಾಧನೆಗೆ ಹೋಲಿಸಿದರೆ ಶೇ. 43ರಷ್ಟು ಭಾರಿ ಪ್ರಗತಿಯಾಗಿದೆ.

ಇದನ್ನೂ ಓದಿ: ಚಿಪ್ ತಯಾರಿಸದಿದ್ದರೂ ಸೆಮಿಕಂಡಕ್ಟರ್ ಕ್ರಾಂತಿಯ ಲಾಭ ಪಡೆಯುತ್ತಿರುವ 3 ಭಾರತೀಯ ಕಂಪನಿಗಳು

ಸ್ವಾವಲಂಬಿ ಭಾರತಕ್ಕೆ ಭದ್ರ ಬುನಾದಿ

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತದ ಹಸಿರು ಇಂಧನ ಪಯಣವು ಅತ್ಯಂತ ವೇಗವಾಗಿ ಸಾಗುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಶ್ಲಾಘಿಸಿದ್ದಾರೆ. “ಸ್ವಚ್ಛ ಇಂಧನ ಪರಿವರ್ತನೆ ಮತ್ತು ಇಂಧನ ವಲಯದಲ್ಲಿ ದೇಶವನ್ನು ‘ಆತ್ಮನಿರ್ಭರ’ ಮಾಡುವ ಪ್ರಧಾನಿಯವರ ಬದ್ಧತೆಗೆ ಈ ಹೊಸ ಮೈಲಿಗಲ್ಲು ಅತ್ಯುತ್ತಮ ಉದಾಹರಣೆಯಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ