AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಆರ್ಥಿಕ ಬಿಕ್ಕಟ್ಟುಗಳ ನಡುವೆಯೂ ಭಾರತದಿಂದ ಉತ್ತಮ ಆರ್ಥಿಕ ಬೆಳವಣಿಗೆ; ಬಲತುಂಬಿರುವ ಮೂಲಾಂಶಗಳು: ಆರ್​ಬಿಐ ಬುಲೆಟಿನ್

ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆಗಳು ಮತ್ತು ಪ್ರತಿಕೂಲ ಗಾಳಿ ಬೀಸುತ್ತಿದ್ದರೂ, ಭಾರತೀಯ ಆರ್ಥಿಕತೆಯು ದೃಢವಾದ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳ ನೆರವಿನಿಂದ ಸ್ಥಿರವಾಗಿ ಮುನ್ನಡೆಯುತ್ತಿದೆ ಎಂದು ಆರ್​ಬಿಐ ತನ್ನ ಅಕ್ಟೋಬರ್ ತಿಂಗಳ ಬುಲೆಟಿನ್‌ನಲ್ಲಿ ತಿಳಿಸಿದೆ. ಭಾರತದ ಆಂತರಿಕ ಬೇಡಿಕೆ ಸ್ಥಿರವಾಗಿದೆ. ಅದರ ಜೊತೆಗೆ ಖಾಸಗಿ ಮತ್ತು ಸರ್ಕಾರಿ ಹೂಡಿಕೆಗಳು ಉತ್ತಮವಾಗಿವೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.

ಜಾಗತಿಕ ಆರ್ಥಿಕ ಬಿಕ್ಕಟ್ಟುಗಳ ನಡುವೆಯೂ ಭಾರತದಿಂದ ಉತ್ತಮ ಆರ್ಥಿಕ ಬೆಳವಣಿಗೆ; ಬಲತುಂಬಿರುವ ಮೂಲಾಂಶಗಳು: ಆರ್​ಬಿಐ ಬುಲೆಟಿನ್
ಆರ್‌ಬಿಐImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 25, 2026 | 12:50 PM

Share

ನವದೆಹಲಿ, ಅಕ್ಟೋಬರ್ 25: ಜಾಗತಿಕ ಮಾರುಕಟ್ಟೆಯಲ್ಲಿ ಆರ್ಥಿಕ ಅಸ್ಥಿರತೆ ಹಾಗೂ ಸವಾಲುಗಳು ಎದುರಾಗುತ್ತಿದ್ದರೂ, ಭಾರತದ ಆರ್ಥಿಕತೆಯು ಅತ್ಯಂತ ಕ್ಷಮತೆ ಪ್ರದರ್ಶಿಸುತ್ತಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಇತ್ತೀಚಿನ ಮಾಸಿಕ ಬುಲೆಟಿನ್‌ನಲ್ಲಿ ಅಭಿಪ್ರಾಯಪಟ್ಟಿದೆ. ದೇಶದ ದೃಢವಾದ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳೇ (Macroeconomic Fundamentals) ಈ ಬೆಳವಣಿಗೆಗೆ ಪ್ರಮುಖ ಆಧಾರವಾಗಿವೆ ಎಂದು ಆರ್‌ಬಿಐ ತನ್ನ ಅಕ್ಟೋಬರ್ ತಿಂಗಳ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣದುಬ್ಬರ, ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ಪೂರೈಕೆ ಸರಪಳಿಯಲ್ಲಿನ ವ್ಯತ್ಯಯಗಳಂತಹ ಸವಾಲುಗಳಿದ್ದರೂ, ಭಾರತೀಯ ಆರ್ಥಿಕತೆಯು ತನ್ನ ಆಂತರಿಕ ಬಲದ ಮೇಲೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ರಿಸರ್ವ್ ಬ್ಯಾಂಕ್ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಮನ್ ಕಿ ಬಾತ್‌ನಲ್ಲಿ ಸ್ಥಳೀಯ ಉತ್ಪನ್ನಗಳ ಬಳಕೆಗೆ ಪ್ರಧಾನಿ ಮೋದಿ ಕರೆ: ಕರ್ನಾಟಕದ ಕಲಬುರಗಿ ತೊಗರಿಬೇಳೆ, ಬಿಹಾರದ ಮಖಾನಾ ಉಲ್ಲೇಖ

ಗೃಹ ಬಳಕೆ ಮತ್ತು ಹೂಡಿಕೆಯಲ್ಲಿ ಚೇತರಿಕೆ

ದೇಶದಲ್ಲಿ ಗ್ರಾಹಕರ ಬೇಡಿಕೆ ಸ್ಥಿರವಾಗಿ ಪಾಲನೆ ಆಗಿರುವುದು ಹಾಗೂ ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆಗಳು ನಿರಂತರವಾಗಿ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಮುಖ್ಯ ಕಾರಣವಾಗಿದೆ ಎಂದು ಬುಲೆಟಿನ್​ನಲ್ಲಿ ತಿಳಿಸಿದೆ.

ಹಣದುಬ್ಬರ ನಿಯಂತ್ರಣ ಮತ್ತು ವಿತ್ತೀಯ ಸ್ಥಿರತೆ

ರೀಟೇಲ್ ಹಣದುಬ್ಬರವು ನಿಯಂತ್ರಣಕ್ಕೆ ಬರುತ್ತಿರುವುದು ಮತ್ತು ಬ್ಯಾಂಕಿಂಗ್ ವಲಯದ ಬಲವಾದ ಬ್ಯಾಲೆನ್ಸ್ ಶೀಟ್ ಆರ್ಥಿಕತೆಯ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ವಿದೇಶಿ ವಿನಿಮಯ ಮೀಸಲು ನಿಧಿ (Forex Reserves) ಕೂಡ ಉತ್ತಮ ಸ್ಥಿತಿಯಲ್ಲಿದ್ದು, ಬಾಹ್ಯ ಆಘಾತಗಳನ್ನು ತಡೆಯಲು ಇದು ದೇಶಕ್ಕೆ ನೆರವಾಗಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಜಿಯೋ ಐಪಿಒಗೆ ನಿರೀಕ್ಷೆಮೀರಿದ ಸ್ಪಂದನೆ; ವಿಶ್ವದಾಖಲೆಗಳು, ಮೈಲಿಗಲ್ಲುಗಳು

ಮುಂದಿನ ಆರ್ಥಿಕ ಮುನ್ನೋಟ

ಕೃಷಿ ಕ್ಷೇತ್ರದ ಉತ್ತಮ ಉತ್ಪಾದನೆ, ಸೇವಾ ವಲಯದ ಬಲವಾದ ಪ್ರದರ್ಶನ ಹಾಗೂ ಉತ್ಪಾದನಾ ವಲಯದಲ್ಲಿನ ಚೇತರಿಕೆಯು ಮುಂಬರುವ ತಿಂಗಳುಗಳಲ್ಲಿ ಭಾರತದ ಆರ್ಥಿಕ ಬೆಳವಣಿಗೆಯ ವೇಗವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಆರ್‌ಬಿಐ ತನ್ನ ಮಾಸಿಕ ಬುಲೆಟಿನ್​ನಲ್ಲಿ ವಿಶ್ವಾಸ ವ್ಯಕ್ತಪಡಿಸಿದೆ.

ಈ ವರ್ಷ ಭಾರತದ ಜಿಡಿಪಿ ಶೇ. 7.1ರಷ್ಟು ಹೆಚ್ಚಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್​ನ ಎಂಪಿಸಿ ಸಮಿತಿ ತನ್ನ ಇತ್ತೀಚಿನ ಸಭೆಯಲ್ಲಿ ಅಂದಾಜಿಸಿದೆ. ಐಎಂಎಫ್, ವಿಶ್ವಬ್ಯಾಂಕ್ ಸೇರಿದಂತೆ ಹೆಚ್ಚಿನ ಅಂತರರಾಷ್ಟ್ರೀಯ ಹಣಕಾಸು ಏಜೆನ್ಸಿಗಳು ಭಾರತದ ಆರ್ಥಿಕ ಬೆಳವಣಿಗೆಯ ದರ ಕನಿಷ್ಠ ಶೇ. 7ರಷ್ಟು ಇರುತ್ತದೆಂದು ಹೇಳಿವೆ. ಕಳೆದ ಕೆಲ ವರ್ಷಗಳಿಂದಲೂ ವಿಶ್ವದ ಪ್ರಮುಖ ಆರ್ಥಿಕತೆಗಳ ಪೈಕಿ ಭಾರತವೇ ಅತಿವೇಗವಾಗಿ ವೃದ್ಧಿಕಾಣುತ್ತಿರುವುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ