AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಇಂಧನ ಬೆಲೆ ಏರಿಕೆ ಎಫೆಕ್ಟ್; ವಿಮಾನ ಪ್ರಯಾಣದರ ಏರಿಕೆ ಅನಿವಾರ್ಯ ಎಂದ ಇಂಡಿಗೋ ಸಿಇಒ

ವಿಮಾನ ಇಂಧನ (ATF) ವೆಚ್ಚದಲ್ಲಿ ಭಾರೀ ಹೆಚ್ಚಳವಾಗಿರುವುದರಿಂದ ವಿಮಾನಯಾನ ಸಂಸ್ಥೆಯ ಮೇಲೆ ಬರುವ ಆರ್ಥಿಕ ಹೊರೆಯನ್ನು ತಗ್ಗಿಸಲು ವಿಮಾನ ಟಿಕೆಟ್ ದರಗಳನ್ನು ಹೆಚ್ಚಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಇಂಡಿಗೋ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (CEO) ಸ್ಪಷ್ಟಪಡಿಸಿದ್ದಾರೆ. ಇಂಧನ ವೆಚ್ಚ ಮತ್ತು ರುಪಾಯಿ ಮೌಲ್ಯ ಕುಸಿತದಿಂದಾಗಿ ಸಂಸ್ಥೆಗೆ ಹಿನ್ನಡೆಯಾಗುತ್ತಿರುವುದನ್ನು ವಿಲ್ಲೀ ವಾಲ್ಶ್ ವಿವರಿಸಿದ್ದಾರೆ.

ವಿಮಾನ ಇಂಧನ ಬೆಲೆ ಏರಿಕೆ ಎಫೆಕ್ಟ್; ವಿಮಾನ ಪ್ರಯಾಣದರ ಏರಿಕೆ ಅನಿವಾರ್ಯ ಎಂದ ಇಂಡಿಗೋ ಸಿಇಒ
ಇಂಡಿಗೋImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 29, 2026 | 7:13 PM

Share

ನವದೆಹಲಿ, ಅಕ್ಟೋಬರ್ 29: ವಿಮಾನ ಇಂಧನ (ATF) ಬೆಲೆಯಲ್ಲಿ ಉಂಟಾಗಿರುವ ತೀವ್ರ ಏರಿಕೆಯಿಂದಾಗಿ ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ (IndiGo) ಮುಂದಿನ ದಿನಗಳಲ್ಲಿ ಟಿಕೆಟ್ ದರಗಳನ್ನು ಹೆಚ್ಚಿಸುವ ಸುಳಿವು ನೀಡಿದೆ. ಇಂಧನ ವೆಚ್ಚವು ಗಣನೀಯವಾಗಿ ಹೆಚ್ಚಿರುವುದರಿಂದ ಟಿಕೆಟ್ ಬೆಲೆ ಏರಿಕೆಯನ್ನು ಪರಿಗಣಿಸುವುದನ್ನು ಬಿಟ್ಟು ತಮಗೆ ಬೇರೆ ಆಯ್ಕೆಯಿಲ್ಲ ಎಂದು ಇಂಡಿಗೋ ಸಿಇಒ ವಿಲ್ಲೀ ವಾಲ್ಷ್ ತಿಳಿಸಿದ್ದಾರೆ.

ಇಂಧನ ವೆಚ್ಚದ ಬಾರೀ ಏರಿಕೆ

ಒಂದು ವಿಮಾನಯಾನ ಸಂಸ್ಥೆಯ ಒಟ್ಟು ಕಾರ್ಯಾಚರಣೆ ವೆಚ್ಚದಲ್ಲಿ ವಿಮಾನ ಇಂಧನದ (ATF) ಪಾಲು ಸುಮಾರು ಶೇ. 40ರಷ್ಟಿರುತ್ತದೆ. ಇಂಧನ ಬೆಲೆಯಲ್ಲಿ ಆಗುತ್ತಿರುವ ನಿರಂತರ ಏರಿಕೆಯು ಕಂಪನಿಯ ಕಾರ್ಯಾಚರಣೆಯ ಲಾಭದ ಮೇಲೆ ತೀವ್ರ ಪರಿಣಾಮ ಬೀರಿದೆ.

ಕಂಪನಿಯ ನಷ್ಟ ಮತ್ತು ಆರ್ಥಿಕ ಒತ್ತಡ

ಇತ್ತೀಚಿನ ತ್ರೈಮಾಸಿಕದಲ್ಲಿ ವಿಮಾನ ಇಂಧನ ವೆಚ್ಚವು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ಮತ್ತು ರೂಪಾಯಿ ಮೌಲ್ಯ ಕುಸಿತದಿಂದಾಗಿ ಕಂಪನಿಯು ಆರ್ಥಿಕ ನಷ್ಟವನ್ನು ಎದುರಿಸಬೇಕಾಗಿ ಬಂದಿದೆ. ಈ ಕಾರಣದಿಂದ ಕಾರ್ಯಾಚರಣಾ ವೆಚ್ಚವನ್ನು ಸರಿದೂಗಿಸಲು ದರ ಏರಿಕೆ ಅನಿವಾರ್ಯವಾಗಿದೆ ಎಂದು ಸಿಇಒ ತಿಳಿಸಿದ್ದಾರೆ.

ಇದನ್ನೂ ಓದಿ: ಎಐ ಎಫೆಕ್ಟ್; 10 ಮಂದಿಯ ಕೆಲಸ ಒಬ್ಬನಿಂದಲೇ ಸಾಧ್ಯ; ಭವಿಷ್ಯದ ವಾಸ್ತವ ಬಿಚ್ಚಿಟ್ಟ ಜೋಹೋ ಸಂಸ್ಥಾಪಕ ಶ್ರೀಧರ್ ವೆಂಬು

ಪ್ರಯಾಣಿಕರ ಮೇಲೆ ಪರಿಣಾಮ

ಈಗಾಗಲೇ ಇಂಡಿಗೋ ಸಂಸ್ಥೆಯು ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಇಂಧನ ಸರ್‌ಚಾರ್ಜ್‌ಗಳನ್ನು ಪರಿಷ್ಕರಿಸಿದ್ದು, ಮುಂಬರುವ ದಿನಗಳಲ್ಲಿ ಟಿಕೆಟ್ ದರಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ವಿಮಾನ ಪ್ರಯಾಣಿಕರ ಜೇಬಿಗೆ ಹೆಚ್ಚಿನ ಬಾಸುಂದಿಯಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ
ಜೈಲಿನಿಂದ ಕೊಟ್ಟ ಸಂದೇಶಕ್ಕೆ ತಲೆ ಕೆಡಿಸಿಕೊಳ್ಳಬೇಕಿಲ್ಲ: ಧನ್ವೀರ್ ಲಾಯರ್
ಜೈಲಿನಿಂದ ಕೊಟ್ಟ ಸಂದೇಶಕ್ಕೆ ತಲೆ ಕೆಡಿಸಿಕೊಳ್ಳಬೇಕಿಲ್ಲ: ಧನ್ವೀರ್ ಲಾಯರ್
ಸಿದ್ದರಾಮಯ್ಯ ಈಸ್ ಬ್ಯಾಕ್: ಅಹಿಂದ ಹಳೆ ಅಸ್ತ್ರಕ್ಕೆ ಸಾಣೆ ಹಿಡಿಯಲು ಸಿದ್ದತೆ
ಸಿದ್ದರಾಮಯ್ಯ ಈಸ್ ಬ್ಯಾಕ್: ಅಹಿಂದ ಹಳೆ ಅಸ್ತ್ರಕ್ಕೆ ಸಾಣೆ ಹಿಡಿಯಲು ಸಿದ್ದತೆ
ಹೆಣ್ಮಕ್ಕಳ ಬಗ್ಗೆ ತೂಕವಾಗಿ ಮಾತಾಡಬೇಕು: ವಿವಾದಕ್ಕೆ ಪ್ರೇಮ್ ಪ್ರತಿಕ್ರಿಯೆ
ಹೆಣ್ಮಕ್ಕಳ ಬಗ್ಗೆ ತೂಕವಾಗಿ ಮಾತಾಡಬೇಕು: ವಿವಾದಕ್ಕೆ ಪ್ರೇಮ್ ಪ್ರತಿಕ್ರಿಯೆ
‘ದರ್ಶನ್​​ ಅನ್ನು ಹೊರಗೆ ತರಲು ವಿಜಯಲಕ್ಷ್ಮಿ ಬಹಳ ಕಷ್ಟಪಡುತ್ತಿದ್ದಾರೆ’
‘ದರ್ಶನ್​​ ಅನ್ನು ಹೊರಗೆ ತರಲು ವಿಜಯಲಕ್ಷ್ಮಿ ಬಹಳ ಕಷ್ಟಪಡುತ್ತಿದ್ದಾರೆ’
10 ಕೋಟಿ ರೂಪಾಯಿ ವಿವಾದ; ಎಲ್ಲಾ ತನಿಖೆ ಎದುರಿಸಲು ಧನ್ವೀರ್ ರೆಡಿ ಎಂದ ಲಾಯರ್
10 ಕೋಟಿ ರೂಪಾಯಿ ವಿವಾದ; ಎಲ್ಲಾ ತನಿಖೆ ಎದುರಿಸಲು ಧನ್ವೀರ್ ರೆಡಿ ಎಂದ ಲಾಯರ್
ಹಾಸನಾಂಬ ದರ್ಶನೋತ್ಸವ: ವರ್ಷದ ಬಳಿಕ ತೆರೆದ ದೇಗುಲದ ಗರ್ಭಗುಡಿ
ಹಾಸನಾಂಬ ದರ್ಶನೋತ್ಸವ: ವರ್ಷದ ಬಳಿಕ ತೆರೆದ ದೇಗುಲದ ಗರ್ಭಗುಡಿ
ಸ್ಟಿಂಗ್ ಕೇಸ್: ಕೃಪಾ‌ ಆಳ್ವಾ ಬಂಧನ ಭೀತಿಯಿಂದ ವಿದೇಶಕ್ಕೆ ತೆರಳಿರುವ ಶಂಕೆ
ಸ್ಟಿಂಗ್ ಕೇಸ್: ಕೃಪಾ‌ ಆಳ್ವಾ ಬಂಧನ ಭೀತಿಯಿಂದ ವಿದೇಶಕ್ಕೆ ತೆರಳಿರುವ ಶಂಕೆ
ವೈರಲ್ ಆಗಿರುವ ಧನ್ವೀರ್ ಗೌಡ ಆಡಿಯೋಗಳು ಫೇಕ್: ವಕೀಲರ ಆರೋಪ
ವೈರಲ್ ಆಗಿರುವ ಧನ್ವೀರ್ ಗೌಡ ಆಡಿಯೋಗಳು ಫೇಕ್: ವಕೀಲರ ಆರೋಪ