AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infinix Note 12 Pro 4G: ಕ್ಯಾಮೆರಾ ಪ್ರಿಯರು ಫುಲ್ ಫಿದಾ: ಕೇವಲ 16,999 ರೂ. ಗೆ 108MP ಕ್ಯಾಮೆರಾ ಫೋನ್ ರಿಲೀಸ್

ಇನ್ಫಿನಿಕ್ಸ್ ಕಂಪನಿ ಇನ್ಫಿನಿಕ್ಸ್ ನೋಟ್ 12 ಸರಣಿಯಡಿಯಲ್ಲಿ (Infinix Note 12 Series) ಇನ್ಫಿನಿಕ್ಸ್​ ನೋಟ್ 12 ಪ್ರೊ 4G ಆವೃತ್ತಿಯನ್ನ ಅನಾವರಣ ಮಾಡಿದೆ. ಇದರಲ್ಲಿರುವ 108 ಮೆಗಾಫಿಕ್ಸೆಲ್​ನ ಕ್ಯಾಮೆರಾಗೆ ಟೆಕ್ ಪ್ರಿಯರಂತು ಫಿದಾ ಆಗಿದ್ದಾರೆ. ಇನ್ಫಿನಿಕ್ಸ್ ಕಂಪನಿ ಇನ್ಫಿನಿಕ್ಸ್ ನೋಟ್ 12 ಸರಣಿಯಡಿಯಲ್ಲಿ (Infinix Note 12 Series) ಇನ್ಫಿನಿಕ್ಸ್​ ನೋಟ್ 12 ಪ್ರೊ 4G ಆವೃತ್ತಿಯನ್ನ ಅನಾವರಣ ಮಾಡಿದೆ. ಇದರಲ್ಲಿರುವ 108 ಮೆಗಾಫಿಕ್ಸೆಲ್​ನ ಕ್ಯಾಮೆರಾಗೆ ಟೆಕ್ ಪ್ರಿಯರಂತು ಫಿದಾ ಆಗಿದ್ದಾರೆ.

Infinix Note 12 Pro 4G: ಕ್ಯಾಮೆರಾ ಪ್ರಿಯರು ಫುಲ್ ಫಿದಾ: ಕೇವಲ 16,999 ರೂ. ಗೆ 108MP ಕ್ಯಾಮೆರಾ ಫೋನ್ ರಿಲೀಸ್
Infinix Note 12 Pro
Vinay Bhat
| Edited By: |

Updated on:Oct 14, 2026 | 5:12 PM

Share

ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುವುದರಲ್ಲಿ ಇನ್ಫಿನಿಕ್ಸ್ (Infinix)​ ಕಂಪನಿಯನ್ನು ಮೀರಿಸುವುದು ಸುಲಭವಲ್ಲ. ಈಗಂತು ಅತ್ಯುತ್ತಮ ಕ್ಯಾಮೆರಾ ಫೋನ್​ಗಳ ಮೇಲೆ ಕಣ್ಣಿಟ್ಟಿರುವ ಇನ್ಫಿನಿಕ್ಸ್​ ಇದೀಗ ಭಾರತದಲ್ಲಿ ಬರೋಬ್ಬರಿ 108 ಮೆಗಾಫಿಕ್ಸೆಲ್​ನ (108MP Camera Phone) ಹೊಸ ಸ್ಮಾರ್ಟ್​​ಫೋನೊಂದನ್ನು ಪರಿಚಯಿಸಿದೆ. ದೇಶದಲ್ಲಿ ಇನ್ಫಿನಿಕ್ಸ್ ಕಂಪನಿ ಇನ್ಫಿನಿಕ್ಸ್ ನೋಟ್ 12 ಸರಣಿಯಡಿಯಲ್ಲಿ (Infinix Note 12 Series) ಇನ್ಫಿನಿಕ್ಸ್​ ನೋಟ್ 12 ಪ್ರೊ 4G ಆವೃತ್ತಿಯನ್ನ ಅನಾವರಣ ಮಾಡಿದೆ. ಇದರಲ್ಲಿರುವ 108 ಮೆಗಾಫಿಕ್ಸೆಲ್​ನ ಕ್ಯಾಮೆರಾಗೆ ಟೆಕ್ ಪ್ರಿಯರಂತು ಫಿದಾ ಆಗಿದ್ದಾರೆ. ಇದರ ಜೊತೆಗೆ ಭರ್ಜರಿ ಬ್ಯಾಟರಿ, ಅತ್ಯುತ್ತಮ ಪ್ರೊಸೆಸರ್‌ ಕೂಡ ನೀಡಲಾಗಿದೆ. ಈ ಫೋನಿನ ಬೆಲೆ?, ಸಂಪೂರ್ಣ ಫೀಚರ್ಸ್​ ಬಗ್ಗೆ ಇಲ್ಲಿದೆ ಮಾಹಿತಿ.

ಇನ್ಫಿನಿಕ್ಸ್‌ ನೋಟ್‌ 12 ಪ್ರೊ 4G ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8GB RAM + 256GB ಸ್ಟೋರೆಜ್ ರೂಪಂತರಕ್ಕೆ ಕೇವಲ 16,999 ರೂ. ಬೆಲೆ ನಿಗದಿ ಮಾಡಲಾಗಿದೆ. ಈ ಫೋನ್ ಸೆಪ್ಟೆಂಬರ್ 1 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಾಗಲಿದೆ. ವೈಟ್, ಗ್ರೇ ಮತ್ತು ಬ್ಲೂ ಕಲರ್​ನಲ್ಲಿ ಬರುತ್ತಿದೆ. ಮೊದಲ ಸೇಲ್​ಗೆ ಆಫರ್ ಕೂಡ ನೀಡಲಾಗಿದ್ದು, ಆಕ್ಸಿಸ್‌ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಪಾವತಿ ಮಾಡುವ ಗ್ರಾಹಕರು 1,500 ರೂ. ಡಿಸ್ಕೌಂಟ್ ಪಡದುಕೊಳ್ಳಬಹುದಾಗಿದೆ.

ಇನ್ಫಿನಿಕ್ಸ್‌ 12 ಪ್ರೊ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಹೀಲಿಯೊ G99 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಮೂಲಕ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ
Image
ಮಾರುಕಟ್ಟೆಗೆ ಧೂಳೆಬ್ಬಿಸಲು ಬಂತು ರೆಡ್ಮಿಯ ಹೊಸ ಸ್ಮಾರ್ಟ್​​ಫೋನ್: ಯಾವುದು?
Image
Azadi Quest Game: ಸ್ವಾತಂತ್ರ್ಯ ಹೋರಾಟವನ್ನು ಆಧರಿಸಿದ ‘ಆಜಾದಿ ಕ್ವೆಸ್ಟ್’ ಆನ್​ಲೈನ್ ಆಟಗಳು ಶೀಘ್ರದಲ್ಲೆ ಆರಂಭ; ಏನಿದು?
Image
Best Smartphone: 25,000 ರೂ. ಗಿಂತ ಕಡಿಮೆ ಬೆಲೆಗೆ ಸಿಗುತ್ತಿರುವ 5 ಬೆಸ್ಟ್​ ಸ್ಮಾರ್ಟ್​​ಫೋನ್​ಗಳು ಇದುವೇ ನೋಡಿ
Image
ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ

ಇನ್ನು ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 108 ಮೆಗಾಪಿಕ್ಸೆಲ್‌ ಸೆನ್ಸಾರ್​​ನಲ್ಲಿದೆ. ಇದು ಸ್ಯಾಮ್​ಸಂಗ್ ICOCELL ಸೆನ್ಸಾರ್​ನಿಂದ ಕೂಡಿದೆ. Quad LED ಫ್ಲ್ಯಾಷ್ ಒಳಗೊಂಡಿದೆ. 2 ಮೆಗಾಫಿಕ್ಸೆಲ್​ನ ಸೆಕೆಂಡರಿ ಸೆನ್ಸಾರ್ ಮತ್ತು ಎಐ ಸೆನ್ಸಾರ್ ನೀಡಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದಕ್ಕೆ ಪೂಕವಾಗಿ ಡ್ಯುಯಲ್ LED ಫ್ಲ್ಯಾಷ್‌ ಅಳವಡಿಸಲಾಗಿದೆ.

5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು ಇದು 33W ಟೈಪ್–ಸಿ ಫಾಸ್ಟ್ ಚಾರ್ಜರ್‌ ಬೆಂಬಲಿಸಲಿದೆ. ಒಂದು ಗಂಟೆ 30 ನಿಮಿಷಗಳ ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿದೆ. ಮಾರುಕಟ್ಟೆಯಲ್ಲಿ ಅದ್ಭುತ ಫೀಚರ್ಸ್​​ಗೆ ಲಭ್ಯವಿರುವ ಅತ್ಯಂತ ಕಡಿಮೆ ಬೆಲೆಯ ಫೋನುಗಳಲ್ಲಿ ಇದುಕೂಡ ಒಂದಾಗಿದೆ. ನೀವು ಕ್ಯಾಮೆರಾ ಪ್ರಿಯರಾಗದ್ದಲ್ಲಿ ಈ ಫೋನನ್ನು ಖರೀದಿಸಬಹುದು.

Published On - 2:00 pm, Sat, 27 August 22

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್