Infinix Smart 7 HD: ಭಾರತದಲ್ಲಿ ಕೇವಲ 5,999 ರೂ. ಗೆ ಹೊಸ ಫೋನ್ ಬಿಡುಗಡೆ: ಖರೀದಿಗೆ ಕ್ಯೂ ಗ್ಯಾರಂಟಿ

ಇನ್ಫಿನಿಕ್ಸ್‌ ಸಂಸ್ಥೆ ಇದೀಗ ಭಾರತದಲ್ಲಿ ಹೊಸದಾಗಿ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಹೆಚ್​ಡಿ (Infinix Smart 7 HD) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಈ ಫೋನಿನ ವಿಶೇಷತೆ ಏನು? ಬೆಲೆ ಎಷ್ಟು? ಎಂಬ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಇನ್ಫಿನಿಕ್ಸ್‌ ಸಂಸ್ಥೆ ಇದೀಗ ಭಾರತದಲ್ಲಿ ಹೊಸದಾಗಿ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಹೆಚ್​ಡಿ (Infinix Smart 7 HD) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಈ ಫೋನಿನ ವಿಶೇಷತೆ ಏನು? ಬೆಲೆ ಎಷ್ಟು? ಎಂಬ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

Infinix Smart 7 HD: ಭಾರತದಲ್ಲಿ ಕೇವಲ 5,999 ರೂ. ಗೆ ಹೊಸ ಫೋನ್ ಬಿಡುಗಡೆ: ಖರೀದಿಗೆ ಕ್ಯೂ ಗ್ಯಾರಂಟಿ
Infinix Smart 7 HD
Edited By:

Updated on: Oct 14, 2026 | 5:22 PM

ಮುಖ್ಯಾಂಶಗಳು

  • ಭಾರತದಲ್ಲಿ ಕೇವಲ 5,999 ರೂ. ಗೆ ಹೊಸ ಫೋನ್ ರಿಲೀಸ್
  • ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಒಂದು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ
  • ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್​ನಲ್ಲಿದೆ

ಭಾರತೀಯ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಫೋನುಗಳಿಗೆ (Budget Smartphone) ಎಲ್ಲಿಲ್ಲದ ಬೇಡಿಕೆ. ಕಳೆದ ವರ್ಷ 15,000, 10,000 ರೂ. ಗೆ ಆಕರ್ಷಕ ಫೀಚರ್​ಗಳ ಫೋನ್​ಗಳು ಬಿಡುಗಡೆ ಆಗುತ್ತಿದ್ದರೆ ಈ ವರ್ಷ ಇನ್ನಷ್ಟು ಕಡಿಮೆ ದರಕ್ಕೆ ಮೊಬೈಲ್ ಲಾಂಚ್ ಆಗುತ್ತಿದೆ. ಈ ರೀತಿಯ ಫೋನ್​ಗಳನ್ನು ಬಿಡುಗಡೆ ಮಾಡುವುದರಲ್ಲಿ ಇನ್ಫಿನಿಕ್ಸ್ (Infinix) ಎತ್ತಿದ ಕೈ. ಈಗಾಗಲೇ ಬಜೆಟ್ ಬೆಲೆಗೆ ಅನೇಕ ಆಕರ್ಷಕ ಫೋನ್​ಗಳನ್ನು ಅನಾವರಣ ಮಾಡಿ ಯಶಸ್ಸು ಕಂಡಿರುವ ಸಂಸ್ಥೆ ಇದೀಗ ಭಾರತದಲ್ಲಿ ಹೊಸದಾಗಿ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಹೆಚ್​ಡಿ (Infinix Smart 7 HD) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಈ ಫೋನಿನ ವಿಶೇಷತೆ ಏನು? ಬೆಲೆ ಎಷ್ಟು? ಎಂಬ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?

ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಸ್ಟೋರೆಜ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆ ಆಗಿದೆ. ಇದರ 2GB RAM + 64GB ಇಂಟರ್‌ ಸ್ಟೋರೇಜ್‌ ಮಾದರಿಗೆ ಕೇವಲ 5,999 ರೂ. ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಮುಂದಿನ ತಿಂಗಳು ಮೇ 4 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಖರೀದಿಗೆ ಸಿಗಲಿದೆ. ಇಂಕ್ ಬ್ಲಾಕ್, ಜೇಡ್ ವೈಟ್ ಮತ್ತು ಸಿಲ್ಕ್ ಬ್ಲಾಕ್ ಬಣ್ಣಗಳಲ್ಲಿ ಲಭ್ಯವಿದೆ. ಫ್ಲಿಪ್​ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ ಶೇ. 5 ರಷ್ಟು ಕ್ಯಾಶ್​ಬ್ಯಾಕ್ ಆಫರ್ ಘೋಷಣೆ ಮಾಡಲಾಗಿದೆ.

 

ಏನಿದೆ ಫೀಚರ್ಸ್?:

ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಫೋನ್ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್ HD + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್​ರೇಟ್ ಅನ್ನು ಒಳಗೊಂಡಿದೆ. 120Hz ಟಚಿಂಗ್ ಸ್ಯಾಂಪಲ್ ರೇಟ್ ಇದೆ. ಆಕ್ಟಾ-ಕೋರ್ ಯುನಿಸಾಕ್ SC9863A1 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ XOS 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಈ ಸ್ಮಾರ್ಟ್‌ಫೋನ್‌ ಡ್ಯುಯಲ್ AI ಡ್ಯುಯೆಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್​ನಲ್ಲಿದೆ. ಜೊತೆಗೆ ಡಬಲ್ LED ಫ್ಲ್ಯಾಷ್‌ ಒಳಗೊಂಡಿದೆ. ಇದು ಬ್ಯೂಟಿ ಮತ್ತು ಪೋರ್ಟ್ರೇಟ್‌ ನಂತಹ ವಿಭಿನ್ನ ಮೋಡ್‌ಗಳನ್ನು ಹೊಂದಿದೆ. ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದ್ದು ಇದುಕೂಡ LED ಫ್ಲ್ಯಾಷ್​ನಿಂದ ಕೂಡಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಸ್ಮಾರ್ಟ್‌ಫೋನ್​ನ ಮತ್ತೊಂದು ಪ್ರಮುಖ ಹೈಲೇಟ್ ಬ್ಯಾಟರ್ ಆಗಿದ್ದು, ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಎಷ್ಟು ವೋಲ್ಟ್​ ವೇಗದ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ ಎಂಬುದು ತಿಳಿದುಬಂದಿಲ್ಲ. ಈ ಬ್ಯಾಟರಿಯನ್ನು ಒಮ್ಮೆ ಫುಲ್ ಚಾರ್ಜ್ ಮಾಡಿದರೆ 30 ದಿನಗಳ ಸ್ಟ್ಯಾಂಡ್​ ಬೈ ಟೈಮ್ ನೀಡಲಿದ್ದು, 50 ಗಂಟೆಗಳ ಕಾಲ ಬ್ಯೂಸಿಕ್ ಪ್ಲೇಬ್ಯಾಕ್ ಸಮಯ ಮತ್ತು 39 ಗಂಟೆಗಳ ಕಾಲ ಕರೆಯಲ್ಲಿ ಮಾತನಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಹಾಟ್‌ಸ್ಪಾಟ್‌, ಬ್ಲೂಟೂತ್‌ 4.2, GPS ಅನ್ನು ಬೆಂಬಲಿಸುತ್ತದೆ.

 

Published On - 3:51 pm, Fri, 28 April 23

Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Loading...
Unable to load recommendations.
Follow Us