IBC: ಬ್ಯಾಟರಿ ತಯಾರಿಕಾ ಘಟಕ ಸ್ಥಾಪನೆಗೆ ಕರ್ನಾಟಕ ಸರ್ಕಾರದೊಂದಿಗೆ ಐಬಿಸಿ ಒಪ್ಪಂದ

Battery Factory in Bengaluru: ವಿಶ್ವದ ಅತಿದೊಡ್ಡ ಬ್ಯಾಟರಿ ಕಂಪನಿಗಳಲ್ಲೊಂದಾದ ಅಮೆರಿಕದ ಐಬಿಸಿ ಬೆಂಗಳೂರಿನಲ್ಲಿ ಲಿಥಿಯಮ್ ಅಯಾನ್ ಬ್ಯಾಟರಿ ತಯಾರಿಕಾ ಘಟಕ ಸ್ಥಾಪಿಸಲಿದೆ. ಕರ್ನಾಟಕ ಸರ್ಕಾರ ಮತ್ತು ಐಬಿಸಿ ಮಧ್ಯೆ ಒಪ್ಪಂದಕ್ಕೆ ಸಹಿಬಿದ್ದಿದೆ.

IBC: ಬ್ಯಾಟರಿ ತಯಾರಿಕಾ ಘಟಕ ಸ್ಥಾಪನೆಗೆ ಕರ್ನಾಟಕ ಸರ್ಕಾರದೊಂದಿಗೆ ಐಬಿಸಿ ಒಪ್ಪಂದ
ಇಂಟರ್ನ್ಯಾಷನ್ ಬ್ಯಾಟರಿ ಕಂಪನಿ ಜೊತೆ ಕರ್ನಾಟಕ ಸರ್ಕಾರ ಒಪ್ಪಂದ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 02, 2023 | 10:30 AM

ಬೆಂಗಳೂರು, ಆಗಸ್ಟ್ 02: ಅಮೆರಿಕ ಮೂಲದ ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿ (IBC- International Battery Company) ಕರ್ನಾಟಕದಲ್ಲಿ ಬ್ಯಾಟರಿ ತಯಾರಿಕಾ ಘಟಕ ಸ್ಥಾಪಿಸಲು ಮುಂದಾಗಿದೆ. ಐಬಿಸಿ ಮತ್ತು ರಾಜ್ಯ ಸರ್ಕಾರದ ಮಧ್ಯೆ ಒಪ್ಪಂದ ಆಗಿದೆ. 8,000 ಕೋಟಿ ರೂ ಮೌಲ್ಯದ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ವಾಣಿಜ್ಯ ಮತ್ತು ಉದ್ಯಮಗಳ ಸಚಿವ ಎಂಬಿ ಪಾಟೀಲ್ ಆಗಸ್ಟ್ 1ರಂದು ಮಾಹಿತಿ ನೀಡಿದ್ದಾರೆ.

ವಿಶ್ವದ ಅತಿದೊಡ್ಡ ಬ್ಯಾಟರಿ ಕಂಪನಿಗಳಲ್ಲೊಂದಾದ ಐಬಿಸಿ ಬೆಂಗಳೂರಿನಲ್ಲಿ 100 ಎಕರೆ ಪ್ರದೇಶದಲ್ಲಿ ಘಟಕ ಸ್ಥಾಪಿಸಲು ಯೋಜಿಸಿದೆ. ವರದಿಗಳ ಪ್ರಕಾರ ಲಿಥಿಯಮ್ ಅಯಾನ್ ಸೆಲ್​ಗಳನ್ನು ಇಲ್ಲಿ ತಯಾರಿಸಲಿದೆ. 2025ರಷ್ಟರಲ್ಲಿ ಉತ್ಪಾದನೆ ಆರಂಭವಾಗುತ್ತದೆ.

ಇದನ್ನೂ ಓದಿ: GST: ಜುಲೈ ತಿಂಗಳಲ್ಲಿ ಜಿಎಸ್​ಟಿ ಶೇ. 11ರಷ್ಟು ಹೆಚ್ಚು ಸಂಗ್ರಹ; ಕರ್ನಾಟಕದಲ್ಲಿ ಎಷ್ಟಿದೆ ಕಲೆಕ್ಷನ್?

ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತ ಗುಂಜನ್ ಕೃಷ್ಣ ನೀಡಿರುವ ಮಾಹಿತಿ ಪ್ರಕಾರ, ಐಬಿಸಿ ಸಂಸ್ಥೆ ಪ್ರಿಸ್ಮಾಟಿಕ್ ಲಿಥಿಯಮ್ ಅಯಾನ್ ಬ್ಯಾಟರಿಗಳನ್ನು ತಯಾರಿಸುತ್ತದೆ. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಉತ್ಪಾದನೆ ನಡೆಯಲಿದೆ. ಬಳಿಕ 2028ರಷ್ಟರಲ್ಲಿ 2 ಗಿಗಾವ್ಯಾಟ್​ನಷ್ಟು ಬ್ಯಾಟರಿ ಉತ್ಪಾದನೆಗೆ ಸಾಮರ್ಥ್ಯ ಹೆಚ್ಚಿಸುವ ಗುರಿ ಇದೆ.

ಲಿಥಿಯಮ್ ಅಯಾನ್ ಸೆಲ್​ಗಳಿಂದ ಮಾಡಿರುವ ಪ್ರಿಸ್ಮಾಟಿಕ್ ಬ್ಯಾಟರಿಗಳು ಎಲೆಕ್ಟ್ರಿಕ್ ಕಾರುಗಳಿಗೆ ಬಳಕೆ ಆಗುತ್ತವೆ. ಇವು ಒತ್ತೊತ್ತಾಗಿ ಜೋಡಿತವಾಗಿರುವುದರಿಂದ ಹೆಚ್ಚು ಸ್ಥಳ ಆಕ್ರಮಿಸಿಕೊಳ್ಳುವುದಿಲ್ಲ. ಹೀಗಾಗಿ, ಬಹುತೇಕ ಎಲೆಕ್ಟ್ರಿಕ್ ಕಾರುತಯಾರಕರು ಪ್ರಿಸ್ಮಾಟಿಕ್ ಬ್ಯಾಟರಿಗಳನ್ನು ಬಳಸುತ್ತಾರೆ.

ಇದನ್ನೂ ಓದಿ: ಮುಂದಿನ 7 ವರ್ಷದಲ್ಲಿ ಭಾರತದ ತಲಾದಾಯ ಶೇ. 70ರಷ್ಟು ಏರಿಕೆ ಸಾಧ್ಯತೆ; ಕರ್ನಾಟಕದ ಪಾತ್ರ ಎಷ್ಟು?

ಅಮೆರಿಕದ ಪೆನ್​ಸಿಲ್ವೇನಿಯಾದಲ್ಲಿ ಮುಖ್ಯಕಚೇರಿ ಹೊಂದಿರುವ ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿಯ ಈ ಪ್ರಿಸ್ಮಾಟಿಕ್ ಬ್ಯಾಟರಿಗಳು ವಾಹನ ಕ್ಷೇತ್ರದಲ್ಲಷ್ಟೇ ಅಲ್ಲ ವಿವಿಧ ಔದ್ಯಮಿಕ ಮತ್ತು ಮಿಲಿಟರಿ ವಲಯದಲ್ಲೂ ಬಳಕೆಯಾಗುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Wed, 2 August 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್