AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MB Patil: ಇನ್ವೆಸ್ಟ್ ಕರ್ನಾಟಕ ಸಮಾವೇಶ ಮೂಲಕ ರಾಜ್ಯಕ್ಕೆ ಹರಿದುಬರಲಿದೆ 5.4 ಲಕ್ಷ ಕೋಟಿ ರೂ ಹೂಡಿಕೆ

Invest Karnataka and FMCG Investers Meet: ಬೆಂಗಳೂರಿನಲ್ಲಿ ನಡೆದ 2022ರ ಇನ್ವೆಸ್ಟ್ ಕರ್ನಾಟಕ ಸಮಾವೇಶದಿಂದ 57 ಕಂಪನಿಗಳು ರಾಜ್ಯ ಸರ್ಕಾರದೊಂದಿಗೆ 5.14 ಲಕ್ಷಕೋಟಿ ರೂ ಮೊತ್ತದ ಎಂಒಯು ಮಾಡಿಕೊಂಡಿವೆ. ಹುಬ್ಬಳ್ಳಿಯಲ್ಲಿ ನಡೆದ ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶದಿಂದ 16 ಕಂಪನಿಗಳು 1,275 ಕೋಟಿ ರೂ ಮೊತ್ತದ ಒಡಂಬಡಿಕೆ ಮಾಡಿಕೊಂಡಿವೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಈ ಮಾಹಿತಿ ನೀಡಿದ್ದಾರೆ.

MB Patil: ಇನ್ವೆಸ್ಟ್ ಕರ್ನಾಟಕ ಸಮಾವೇಶ ಮೂಲಕ ರಾಜ್ಯಕ್ಕೆ ಹರಿದುಬರಲಿದೆ 5.4 ಲಕ್ಷ ಕೋಟಿ ರೂ ಹೂಡಿಕೆ
ಎಂಬಿ ಪಾಟೀಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 08, 2023 | 3:02 PM

Share

ಬೆಳಗಾವಿ, ಡಿಸೆಂಬರ್ 8: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಭರ್ಜರಿ ಬಂಡವಾಳ ಹರಿದುಬರುತ್ತಿರುವ ವಿಚಾರವನ್ನು ಸರ್ಕಾರ ಬಹಿರಂಗಪಡಿಸಿದೆ. ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಮೂಲಕ 57 ಕಂಪನಿಗಳೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ ಎಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಈ ಎಲ್ಲಾ 57 ಒಡಂಬಡಿಕೆಗಳ ಮೊತ್ತ 5,51,369 ಕೋಟಿ ರೂ ಆಗುತ್ತದೆ. ಈ ಎಲ್ಲಾ ಯೋಜನೆಗಳು ಜಾರಿಯಾಗಲು 3ರಿಂದ 4 ವರ್ಷ ಆಗಬಹುದು ಎಂದೂ ಅವರು ಹೇಳದ್ದಾರೆ.

ಇದರ ಜೊತೆಗೆ ಹುಬ್ಬಳ್ಳಿಯಲ್ಲಿ ನಡೆದ ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶದಲ್ಲಿ 16 ಕಂಪನಿಗಳ ಜೊತೆ 1,275 ಕೋಟಿ ರೂ ಮೊತ್ತದ ಹೂಡಿಕೆಗೆ ಒಪ್ಪಂದಾಗಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ. ಇನ್ವೆಸ್ಟ್ ಕರ್ನಾಟಕ ಬೆಂಗಳೂರಿನಲ್ಲಿ 2022ರ ನವೆಂಬರ್​ನಲ್ಲಿ ನಡೆದಿತ್ತು. ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶ ಹುಬ್ಬಳ್ಳಿಯಲ್ಲಿ ನಡೆದಿತ್ತು.

ಇದನ್ನೂ ಓದಿ: Narendra Modi: ಭಾರತ ಎಐ ತಂತ್ರಜ್ಞಾನ ಕ್ಷೇತ್ರದಲ್ಲಿ ಜಿಗಿಯುತ್ತಿದೆ; ಬನ್ನಿ GPAI ಸಮಿಟ್​ನಲ್ಲಿ ಭಾಗಿಯಾಗಿ: ನರೇಂದ್ರ ಮೋದಿ ಕರೆಯೋಲೆ

ಇನ್ವೆಸ್ಟ್ ಕರ್ನಾಟಕದಲ್ಲಿ ಕುದುರಿಸಲಾದ 57 ಒಡಂಬಡಿಕೆ (ಎಂಒಯು) ಪೈಕಿ 7 ಯೋಜನೆಗಳಿಗೆ ಎಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಗೆ ಭೂಮಿ, ನೀರು ಮತ್ತು ವಿದ್ಯುತ್ ಪೂರೈಕೆ ಒದಗಿಸಲಾಗುವುದು. ಇವು ಬೃಹತ್ ಯೋಜನೆಗಳಾದ್ದರಿಂದ ಕಾರ್ಯಾರಂಭಕ್ಕೆ 3-4 ವರ್ಷ ಆಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಇನ್ನು, ಹುಬ್ಬಳ್ಳಿಯ ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶದಲ್ಲಿ ಆಗಿರುವ 16 ಒಪ್ಪಂದಗಳ ಪೈಕಿ 3 ಯೋಜನೆಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅನುಮೋದನೆ ನೀಡಲಾಗಿದೆ ಎಂದೂ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Onion Export Ban: ಮಾರ್ಚ್​ವರೆಗೂ ಈರುಳ್ಳಿ ರಫ್ತು ನಿಷೇಧ; ಕೇಂದ್ರ ಸರ್ಕಾರದ ಕ್ರಮಕ್ಕೆ ಮಹಾರಾಷ್ಟ್ರದಲ್ಲಿ ವಿರೋಧ

ಹಿಂದಿನ ಸರ್ಕಾರ ಇದ್ದಾಗ ಇನ್ವೆಸ್ಟ್ ಕರ್ನಾಟಕ 2022 ನಡೆದಿತ್ತು. ಅದಕ್ಕೆ 74.99 ಕೋಟಿ ರೂ ವೆಚ್ಚವಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಎಫ್​ಎಂಸಿಜಿ ಇನ್ವೆಸ್ಟರ್ಸ್ ಸಮಾವೇಶದಲ್ಲಿ 12.23 ಲಕ್ಷ ರೂ ಅನ್ನು ಸರ್ಕಾರ ವ್ಯಯಿಸಿದೆ ಎಂಬ ಮಾಹಿತಿಯನ್ನು ಪ್ರಶ್ನೋತ್ತರ ವೇಳೆ ಎಂಬಿ ಪಾಟೀಲ್ ನೀಡಿದ್ದಾರೆ.

ಇದೇ ವೇಳೆ ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ‘ಈ ಉದ್ಯಮದಲ್ಲಿ ಡಿ ಗ್ರೂಪ್ ಹುದ್ದೆಗಳನ್ನು ಕನ್ನಡಿಗರಿಗೆ ಶೇ. 100ರಷ್ಟು ಉದ್ಯೋಗ ಕೊಡಬೇಕು. ಒಟ್ಟಾರೆ ಶೇ. 70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕು ಎನ್ನುವ ನಿಯಮ ರೂಪಿಸಲಾಗಿದೆ,’ ಎಂದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ