AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿದು ಬಿದ್ದ ಇರಾನ್ ಕರೆನ್ಸಿ; ಒಂದು ಕೋಟಿ ರಿಯಾಲ್ ಮುಖಬೆಲೆಯ ಕರೆನ್ಸಿ ನೋಟು ಬಿಡುಗಡೆ; ಇದರ ಮೌಲ್ಯ ಕೆಲವೇ ಡಾಲರ್ ಮಾತ್ರ

Iran battling severe inflation and financial crisis: ಇರಾನ್ ಇದೀಗ 10 ಮಿಲಿಯನ್ ರಿಯಾಲ್ ಮುಖಬೆಲೆಯ ನೋಟುಗಳನ್ನು ಮುದ್ರಿಸಿ ಬಿಡುಗಡೆ ಮಾಡಿದೆ. 10 ಮಿಲಿಯನ್ ಇರಾನೀ ರಿಯಾಲ್ ನೋಟಿನ ಮೌಲ್ಯ 7 ಡಾಲರ್ ಮಾತ್ರ. ಇರಾನ್​ನಲ್ಲಿ ಹಣದುಬ್ಬರ ಶೇ. 50ಕ್ಕಿಂತಲೂ ಹೆಚ್ಚಿರುವುದರಿಂದ ಅಧಿಕ ಮೌಲ್ಯದ ನೋಟುಗಳನ್ನು ಮುದ್ರಿಸಲಾಗುತ್ತಿದೆ.

ಕುಸಿದು ಬಿದ್ದ ಇರಾನ್ ಕರೆನ್ಸಿ; ಒಂದು ಕೋಟಿ ರಿಯಾಲ್ ಮುಖಬೆಲೆಯ ಕರೆನ್ಸಿ ನೋಟು ಬಿಡುಗಡೆ; ಇದರ ಮೌಲ್ಯ ಕೆಲವೇ ಡಾಲರ್ ಮಾತ್ರ
ರಿಯಾಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 22, 2026 | 5:32 PM

Share

ನವದೆಹಲಿ, ಮಾರ್ಚ್ 22: ಯುದ್ಧದಿಂದ ಜರ್ಝರಿತವಾಗಿರುವ ಇರಾನ್ ಇದೀಗ ಆರ್ಥಿಕವಾಗಿ ದುಸ್ತರ ಪರಿಸ್ಥಿತಿಗೆ ಸಿಲುಕಿದೆ. ಅಮೆರಿಕದ ಆರ್ಥಿಕ ದಿಗ್ಬಂಧನದ ಫಲವಾಗಿ ಇರಾನ್​ನ ರಿಯಾಲ್ ಕರೆನ್ಸಿಯ ಮೌಲ್ಯ (Irani Rial notes) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಣನೀಯವಾಗಿ ಕುಸಿದಿದೆ. ಈ ಮಧ್ಯೆ ಇರಾನ್ ದೇಶವು 10 ಮಿಲಿಯನ್ ರಿಯಾಲ್ ಬ್ಯಾಂಕ್ ನೋಟೊಂದನ್ನು ಬಿಡುಗಡೆ ಮಾಡಿದೆ. 10 ಮಿಲಿಯನ್ ಎಂದರೆ ಒಂದು ಕೋಟಿ ರಿಯಾಲ್ ಮುಖಬೆಲೆಯ ನೋಟು ಇದು.

ಈ ಒಂದು ಕೋಟಿ ರಿಯಾಲ್ ನೋಟಿನ ಮೌಲ್ಯ ಕೇವಲ 7 ಡಾಲರ್ ಮಾತ್ರ. ಭಾರತೀಯ ಕರೆನ್ಸಿಯಲ್ಲಿ ಇದರ ಮೌಲ್ಯ ಸುಮಾರು 650 ರುಪಾಯಿ ಮಾತ್ರ. ಅಷ್ಟು ಮಟ್ಟಿಗೆ ಇರಾನ್ ಕರೆನ್ಸಿಯ ಮೌಲ್ಯ ನಶಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಚೀನೀ ಯುವಾನ್ ಕರೆನ್ಸಿಗೆ ಬರೊಬ್ಬರಿ 2 ಲಕ್ಷ ಇರಾನೀ ರಿಯಾಲ್ ಸಿಗುತ್ತದೆ. ಒಂದು ಭಾರತೀಯ ರುಪಾಯಿಯ ಮೌಲ್ಯ ಸುಮಾರು 14,000 ರಿಯಾಲ್​ಗೆ ಸಮ ಎನಿಸುತ್ತದೆ.

ಇದನ್ನೂ ಓದಿ: ಹೋಟೆಲ್, ಮುಂಗಟ್ಟುಗಳಿಗೆ ನಿರಾಳ ಸುದ್ದಿ; ರಾಜ್ಯಗಳಿಗೆ ಕಮರ್ಷಿಯಲ್ ಎಲ್​ಪಿಜಿ ಪೂರೈಕೆ ಶೇ. 50ಕ್ಕೆ ಏರಿಕೆ

ಇರಾನ್​ನಲ್ಲಿ ಹಣದುಬ್ಬರ ಅತಿಯಾದ ಮಟ್ಟದಲ್ಲಿದೆ. ಶೇ. 50ಕ್ಕಿಂತಲೂ ಹೆಚ್ಚಿನ ಹಣದುಬ್ಬರ ದರ ಅಲ್ಲಿದೆ. ಅಂದರೆ, ವರ್ಷಕ್ಕೆ 50 ಪ್ರತಿಶತದಷ್ಟು ಬೆಲೆ ಏರಿಕೆ ಅಲ್ಲಿ ಆಗುತ್ತಿದೆ. ಹಣದ ಮೌಲ್ಯ ಕುಸಿಯುತ್ತಲೇ ಇದೆ. ಸಾಧಾರಣ ವಸ್ತುಗಳನ್ನು ಖರೀದಿಸಲೂ ಜನರು ಬಂಡಲ್​ಗಟ್ಟಲೆ ಹಣ ಕೊಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ, ಅಲ್ಲಿನ ಸರ್ಕಾರ ಒಂದು ಮಿಲಿಯನ್ ರಿಯಾಲ್ ಮುಖಬೆಲೆಯ ನೋಟುಗಳನ್ನು ಮುದ್ರಿಸಿದೆ.

ಜನರಿಂದ ಕ್ಯಾಷ್ ಶೇಖರಣೆ

ಯುದ್ಧದಿಂದ ಇರಾನ್​ನ ಬ್ಯಾಂಕಿಂಗ್ ಸಿಸ್ಟಂ ಮತ್ತು ಡಿಜಿಟಲ್ ಪಾವತಿ ವ್ಯವಸ್ಥೆಗೆ ಧಕ್ಕೆಯಾಗುವ ಭಯವೂ ಇರಾನ್​ನ ಆಡಳಿತ ಮತ್ತು ಜನಸಾಮಾನ್ಯರಿಗೆ ಕಾಡುತ್ತಿದೆ. ಹೀಗಾಗಿ, ಬಹಳಷ್ಟು ಜನರು ನಗದು ಹಣವನ್ನು ಇಟ್ಟುಕೊಳ್ಳಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಬ್ಯಾಂಕು ಹಾಗು ಎಟಿಎಂಗಳ ಮುಂದೆ ಜನರ ನೂಕುನುಗ್ಗಲು ಹೆಚ್ಚಾಗಿದೆ.

ಇದನ್ನೂ ಓದಿ: ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ, ಜೆಟ್ ಫುಯಲ್ ಬೆಲೆ ಹೆಚ್ಚಳ ಪರಿಣಾಮ ಏ. 1ರಿಂದ ವಿಮಾನ ಟಿಕೆಟ್ ದರ ಏರಿಕೆ?

ಅಂತಾರಾಷ್ಟ್ರೀಯ ನಿಷೇಧ ಕ್ರಮವು ಇರಾನ್ ಆರ್ಥಿಕತೆಯನ್ನು ಜರ್ಝರಿತಗೊಳಿಸಿದೆ. ಅಮೆರಿಕನ್ ಡಾಲರ್ ಬಳಕೆ ಅಸಾಧ್ಯವಾದ್ದರಿಂದ ಇರಾನ್​ಗೆ ಅಂತಾರಾಷ್ಟ್ರೀಯ ವ್ಯವಹಾರ ಕಷ್ಟವೆನಿಸಿದೆ. ಚೀನಾ ಜೊತೆ ಬಾರ್ಟರ್ ಸಿಸ್ಟಂ ರೀತಿ ಅದು ವ್ಯವಹರಿಸುತ್ತಿದೆ. ಚೀನಾಗೆ ತೈಲ ಪೂರೈಕೆಗೆ ಬದಲಾಗಿ, ಇರಾನ್​ನಲ್ಲಿ ಚೀನಾ ಬೇರೆ ಸೇವೆಗಳನ್ನು ಒದಗಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ