AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಉದ್ಯೋಗಿಗಳ ವರ್ಕ್ ಫ್ರಂ ಹೋಮ್ ಸವಲತ್ತು ಪೂರ್ಣ ನಿಲ್ಲುತ್ತಾ? ಕಚೇರಿ ಹೋಗಿ ಕೆಲಸ ಮಾಡುವುದು ಕಡ್ಡಾಯ?

No WFH, Work from Office: ಕೋವಿಡ್ ನಂತರ ಅನಿವಾರ್ಯವಾಗಿ ಆರಂಭವಾದ ವರ್ಕ್ ಫ್ರಂ ಹೋಮ್ ಸವಲತ್ತಿಗೆ ಹೊಂದಿಕೊಂಡಿರುವ ಉದ್ಯೋಗಿಗಳಿಗೆ ಈಗ ಕಚೇರಿಗೆ ಹೋಗಿ ಕೆಲಸ ಮಾಡುವುದು ಕಷ್ಟವಾಗಿದೆ. ಬಹಳಷ್ಟು ಉದ್ಯೋಗಿಗಳು ಈಗಲೂ ಕೂಡ ಮನೆಯಿಂದಲೇ ಕೆಲಸ ಮಾಡುತ್ತಿರುವುದುಂಟು. ಕಚೇರಿಗೆ ಹೋಗಿ ಕೆಲಸ ಮಾಡುತ್ತಿರುವವರಲ್ಲಿ ಅನೇಕರದ್ದು ಒಲ್ಲದ ಮನಸು ಎಂಬಂತಾಗಿದೆ. ಇದೀಗ ಹಲವು ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವಾರದಲ್ಲಿ ಕನಿಷ್ಠ ಮೂರು ದಿನವಾದರೂ ಕಚೇರಿಗೆ ಬಂದು ಕೆಲಸ ಮಾಡುವಂತೆ ಕಡ್ಡಾಯಪಡಿಸುತ್ತಿವೆ.

ಐಟಿ ಉದ್ಯೋಗಿಗಳ ವರ್ಕ್ ಫ್ರಂ ಹೋಮ್ ಸವಲತ್ತು ಪೂರ್ಣ ನಿಲ್ಲುತ್ತಾ? ಕಚೇರಿ ಹೋಗಿ ಕೆಲಸ ಮಾಡುವುದು ಕಡ್ಡಾಯ?
ವರ್ಕ್ ಫ್ರಂ ಹೋಮ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 03, 2023 | 5:08 PM

ನವದೆಹಲಿ, ಅಕ್ಟೋಬರ್ 3: ಐಟಿ ದಿಗ್ಗಜ ಟಿಸಿಎಸ್ ತನ್ನ ಉದ್ಯೋಗಿಗಳಿಗೆ ನೀಡಿದ್ದ ವರ್ಕ್ ಫ್ರಂ ಹೋಮ್ ಸೌಲಭ್ಯವನ್ನು (work from home) ಅಂತ್ಯಗೊಳಿಸಿರುವ ಸುದ್ದಿ ಬಂದ ಬೆನ್ನಲ್ಲಿ ವರ್ಕ್ ಫ್ರಂ ಹೋಮ್ ವಿಚಾರ ಮುನ್ನೆಲೆಗೆ ಬಂದಿದೆ. ಟಿಸಿಎಸ್ ಮಾತ್ರವಲ್ಲ ವಿಪ್ರೋ, ಕೇಪ್​ಜೆಮಿನಿ, ಎಲ್​ಟಿಐ ಮೈಂಡ್​ಟ್ರೀ ಮೊದಲಾದ ಭಾರತೀಯ ಐಟಿ ಕಂಪನಿಗಳು ತಮ್ಮ ವರ್ಕ್ ಫ್ರಂ ಉದ್ಯೋಗಿಗಳನ್ನು ಕಚೇರಿಗೆ ತರಲು ಕಸರತ್ತು ನಡೆಸುತ್ತಿವೆ. ಬೆಂಗಳೂರು, ಪುಣೆ ಮೊದಲಾದ ಐಟಿ ವಲಯದಲ್ಲಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅನ್ನು ಪೂರ್ಣವಾಗಿ ರದ್ದು ಮಾಡಲು ಅಥವಾ ಭಾಗಶಃ ರದ್ದು ಮಾಡಲು ವಿವಿಧ ಪ್ಲಾಟ್​ಫಾರ್ಮ್​ಗಳಲ್ಲಿ ಸೂಚನೆ ರವಾನಿಸಿದೆ ಎಂದು ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ವರದಿಯಾಗಿದೆ.

ಕೋವಿಡ್ ನಂತರ ಅನಿವಾರ್ಯವಾಗಿ ಆರಂಭವಾದ ವರ್ಕ್ ಫ್ರಂ ಹೋಮ್ ಸವಲತ್ತಿಗೆ ಹೊಂದಿಕೊಂಡಿರುವ ಉದ್ಯೋಗಿಗಳಿಗೆ ಈಗ ಕಚೇರಿಗೆ ಹೋಗಿ ಕೆಲಸ ಮಾಡುವುದು ಕಷ್ಟವಾಗಿದೆ. ಬಹಳಷ್ಟು ಉದ್ಯೋಗಿಗಳು ಈಗಲೂ ಕೂಡ ಮನೆಯಿಂದಲೇ ಕೆಲಸ ಮಾಡುತ್ತಿರುವುದುಂಟು. ಕಚೇರಿಗೆ ಹೋಗಿ ಕೆಲಸ ಮಾಡುತ್ತಿರುವವರಲ್ಲಿ ಅನೇಕರದ್ದು ಒಲ್ಲದ ಮನಸು ಎಂಬಂತಾಗಿದೆ.

ಇದನ್ನೂ ಓದಿ: ನಕಲಿ ವೆಬ್​ಸೈಟ್​ನಲ್ಲಿ ಫ್ಲ್ಯಾಟ್ ಬುಕ್ ಮಾಡಿ ಲಕ್ಷಾಂತರ ಹಣ ಕಳೆದುಕೊಂಡ ದೆಹಲಿ ವ್ಯಕ್ತಿ; ಗೂಗಲ್​ನಲ್ಲಿ ಸರ್ಚ್ ಮಾಡುವಾಗ ಹುಷಾರು

ಆದರೆ, ಭಾರತದ ಐಟಿ ಕಂಪನಿಗಳು ವಿದೇಶಗಳ ದೊಡ್ಡದೊಡ್ಡ ಕಂಪನಿಗಳಿಗೆ ಐಟಿ ಸರ್ವಿಸ್ ಒದಗಿಸುತ್ತವೆ. ಗ್ರಾಹಕರ ಮನವಿ ಮೇರೆಗೆ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಕಚೇರಿ ಬಂದು ಕೆಲಸ ಮಾಡುವಂತೆ ತಾಕೀತು ಮಾಡುತ್ತಿವೆ. ಸದ್ಯ ಬಹುತೇಕ ಐಟಿ ಕಂಪನಿಗಳಲ್ಲಿ ಹೈಬ್ರಿಡ್ ವರ್ಕ್ ಮಾಡೆಲ್ ಇದೆ. ಅಂದರೆ ವಾರದಲ್ಲಿ ಕನಿಷ್ಠ 2-3 ದಿನ ಕಚೇರಿಗೆ ಬಂದು ಕೆಲಸ ಮಾಡುವುದನ್ನು ಕಡ್ಡಾಯಪಡಿಸಲಾಗಿದೆ.

ಪೂರ್ಣವಾಗಿ ವರ್ಕ್ ಫ್ರಂ ಹೋಮ್ ಅವಕಾಶ ಕಲ್ಪಿಸಿರುವ ಕೆಲ ಐಟಿ ಕಂಪನಿಗಳು ಹೈಬ್ರಿಡ್ ಮಾಡಲ್​ಗೆ ಬದಲಾಗುತ್ತಿವೆ. ವಾರದಲ್ಲಿ ಒಂದೆರಡು ದಿನ ಮಾತ್ರವೇ ಮನೆಯಿಂದ ಕೆಲಸ ಮಾಡುವುದು. ಉಳಿದ ದಿನ ಕಚೇರಿಗೆ ಬಂದು ಕೆಲಸ ಮಾಡುವುದು ಈ ಮಾಡಲ್​ನ ಸೂತ್ರ.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ ಕೊಡುತ್ತಾ ಆರ್​ಬಿಐ?; ಸ್ಟಡಿ ಲೋನ್ ನಿಯಮವೊಂದರ ಬದಲಾವಣೆಗೆ ಬ್ಯಾಂಕುಗಳ ಪ್ರಸ್ತಾಪಕ್ಕೆ ಸಮ್ಮತಿ ಸಿಗುತ್ತಾ?

‘ಭವಿಷ್ಯದಲ್ಲಿ ಕೆಲಸವು ಹೈಬ್ರಿಡ್ ಮಾದರಿಯಲ್ಲಿರುತ್ತದೆ. ನಮ್ಮ ನೀತಿಗಳಲ್ಲಿ ನಾವು ಉದಾರತನ ತಂದಿದ್ದೇವೆ. ನಮಗೆ ಕ್ಲೈಂಟ್ ಮತ್ತು ಉದ್ಯೋಗಿಗಳ ಅವಶ್ಯಕತೆ ಬಹಳ ಮುಖ್ಯ. ಮೇ ತಿಂಗಳಿಂದಲೇ ನಮ್ಮ ಎಲ್ಲಾ ಉದ್ಯೋಗಿಗಳಿಗೂ ವರ್ಕ್ ಫ್ರಂ ಆಫೀಸ್​ಗೆ ಉತ್ತೇಜನ ನೀಡಲಾಗಿದೆ. ಅವರ ಇಚ್ಛೆಯ ಯಾವುದೇ ಮೂರು ದಿನದಲ್ಲಿ ಕಚೇರಿಗೆ ಬಂದು ಕೆಲಸ ಮಾಡಬೇಕೆಂದು ತಿಳಿಸಿದ್ದೇವೆ,’ ಎಂದು ವಿಪ್ರೋ ಸಂಸ್ಥೆಯ ವಕ್ತಾರರೊಬ್ಬರು ಹೇಳಿದರೆಂದು ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ವರದಿಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್