AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ; ಡೆಡ್​ಲೈನ್ ವಿಸ್ತರಣೆ ಸಾಧ್ಯತೆ ಕಡಿಮೆ

IT returns filing, deadline update: ಐಟಿ ರಿಟರ್ನ್ಸ್ ಫೈಲ್ ಮಾಡಲು ಜುಲೈ 31ಕ್ಕೆ ಡೆಡ್​ಲೈನ್ ಫಿಕ್ಸ್ ಮಾಡಲಾಗಿದೆ. ಯಾವುದೇ ದಂಡ ಇಲ್ಲದೇ ನೀವು ಸಲ್ಲಿಸಬಹುದು. ಜುಲೈ 31ರ ಬಳಿಕ ಪಾವತಿಸಿದರೆ ತಡ ಪಾವತಿ ಶುಲ್ಕ ಅಥವಾ ಲೇಟ್ ಫೀ ಕಟ್ಟಡಬೇಕಾಗುತ್ತದೆ. ಕಳೆದ ವರ್ಷ ಈ ಡೆಡ್​ಲೈನ್ ಅನ್ನು ವಿಸ್ತರಿಸಿರಲಿಲ್ಲ. ಈ ಬಾರಿಯೂ ಜುಲೈ 31ರ ಈ ಗಡುವು ವಿಸ್ತರಣೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ; ಡೆಡ್​ಲೈನ್ ವಿಸ್ತರಣೆ ಸಾಧ್ಯತೆ ಕಡಿಮೆ
ಆದಾಯ ತೆರಿಗೆ ರಿಟರ್ನ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 28, 2024 | 5:49 PM

Share

ನವದೆಹಲಿ, ಜುಲೈ 28: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31ರವರೆಗೆ ಕಾಲಾವಕಾಶ ಕೊಡಲಾಗಿದೆ. ಈ ಡೆಡ್​ಲೈನ್ ವಿಸ್ತರಿಸಬಹುದು ಎಂದು ನೀವು ಇನ್ನೂ ಐಟಿಆರ್ ಸಲ್ಲಿಸದೇ ಹೋಗಿದ್ದರೆ ಕಷ್ಟವಾದೀತು. ಕಳೆದ ವರ್ಷದಂತೆ ಈ ಬಾರಿಯೂ ಡೆಡ್​ಲೈನ್ ವಿಸ್ತರಿಸುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಹಣಕಾಸು ಸಚಿವಾಲಯವಾಗಲೀ, ಅಥವಾ ಆದಾಯ ತೆರಿಗೆ ಇಲಾಖೆಯಾಗಲೀ ಅಧಿಕೃತವಾಗಿ ಏನನ್ನೂ ತಿಳಿಸಿಲ್ಲ. ಒಂದು ವೇಳೆ ಐಟಿಆರ್ ಸಲ್ಲಿಕೆಗೆ ಗಡುವನ್ನು ಹೆಚ್ಚಿಸುವುದೇ ಆದಲ್ಲಿ ಸಾಮಾನ್ಯವಾಗಿ ಜುಲೈ 30 ಅಥವಾ 31ರಂದು ಘೋಷಿಸಲಾಗುತ್ತದೆ.

ಕಳೆದ ವರ್ಷ ಜುಲೈ 25ಕ್ಕೆ ಐಟಿಆರ್ ಸಲ್ಲಿಸಿದವರ ಸಂಖ್ಯೆ 4 ಕೋಟಿ ದಾಟಿತ್ತು. ಈ ವರ್ಷ ಜುಲೈ 22ಕ್ಕೆಯೇ ಆ ಸಂಖ್ಯೆ ದಾಟಿದೆ. ಕಳೆದ ವರ್ಷ ಜುಲೈ 31ರ ಡೆಡ್​ಲೈನ್​ನೊಳಗೆ 6.77 ತೆರಿಗೆ ಪಾವತಿದಾರರು ಐಟಿ ರಿಟರ್ನ್ಸ್ ಸಲ್ಲಿಸಿದ್ದರು. ಈ ವರ್ಷ ಐದು ಕೋಟಿ ಜನರು ಈಗಾಗಲೇ ರಿಟರ್ನ್ಸ್ ಫೈಲ್ ಮಾಡಿದ್ದಾರೆ. ಜುಲೈ ಅಂತ್ಯದೊಳಗೆ ಐಟಿಆರ್​​ಗಳ ಸಂಖ್ಯೆ 7 ಕೋಟಿ ದಾಟುವ ನಿರೀಕ್ಷೆ ಇದೆ.

ಜುಲೈ 31ರ ಬಳಿಕ ಐಟಿಆರ್ ಸಲ್ಲಿಸಲು ಆಗಲ್ಲವಾ?

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31ರವರೆಗೆ ಕಾಲಾವಕಾಶ ಕೊಡಲಾಗಿದೆ. ಅದಾದ ಬಳಿಕವೂ ಸಲ್ಲಿಸಬಹುದು, ಆದರೆ, ದಂಡ ತೆರಬೇಕಾಗುತ್ತದೆ. ಲೇಟ್ ಫೀ ಎಂದು ನಿರ್ದಿಷ್ಟ ಮೊತ್ತದ ಶುಲ್ಕ ಕಟ್ಟಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ದೇಶ ಬಿಟ್ಟುಹೋಗುವವರಿಗೆ ಟ್ಯಾಕ್ಸ್ ಕ್ಲಿಯರೆನ್ಸ್ ನಿಯಮ; ಇದು ಎಲ್ಲರಿಗೂ ಕಡ್ಡಾಯವಲ್ಲ ಎಂದ ಸಿಬಿಡಿಟಿ

ಈ ರೀತಿ ತಡವಾಗಿ ಕಟ್ಟಲೂ ಡಿಸೆಂಬರ್ 31ರವರೆಗೆ ಅವಕಾಶ ಇದೆ. ಈ ಡಿಸೆಂಬರ್ 31ರ ಗಡುವು ಮೀರಿ ಹೋದರೆ ಆದಾಯ ತೆರಿಗೆ ಸೆಕ್ಷನ್ 234ಎ ಮತ್ತು 234ಬಿ ಅಡಿಯಲ್ಲಿ ತಡ ಪಾವತಿ ಶುಲ್ಕದ ಜೊತೆಗೆ ಬಾಕಿ ಮೊತ್ತವನ್ನು ಬಡ್ಡಿ ಸಮೇತ ಕಟ್ಟಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ