AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on January 01: ಹೊಸ ವರ್ಷದಂದು ಬಿಹಾರದಲ್ಲಿ ಪೆಟ್ರೋಲ್ ದರ ಕೊಂಚ ಏರಿಕೆ, ಪಂಜಾಬ್​ನಲ್ಲಿ ತುಸು ಇಳಿಕೆ

ಹೊಸ ವರ್ಷದಂದು ಪೆಟ್ರೋಲ್, ಡೀಸೆಲ್ ದರ ಎಷ್ಟಾಗಬಹುದು ಎನ್ನುವ ಕುತೂಹಲ ಎಲ್ಲರಿಗೂ ಇರುತ್ತದೆ. ಹಾಗೆಯೇ ಇಂದು ಬಿಹಾರದಲ್ಲಿ ಪೆಟ್ರೋಲ್ ದರ ಸ್ವಲ್ಪ ಏರಿಕೆಯಾಗಿದ್ದರೆ, ಪಂಜಾಬ್​ನಲ್ಲಿ ಕೊಂಚ ಇಳಿಕೆ ಕಂಡಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎಂಬುದನ್ನು ನೋಡೋಣ.

Petrol Diesel Price on January 01: ಹೊಸ ವರ್ಷದಂದು ಬಿಹಾರದಲ್ಲಿ ಪೆಟ್ರೋಲ್ ದರ ಕೊಂಚ ಏರಿಕೆ, ಪಂಜಾಬ್​ನಲ್ಲಿ ತುಸು ಇಳಿಕೆ
ಪೆಟ್ರೋಲ್
ನಯನಾ ರಾಜೀವ್
|

Updated on:Jan 01, 2024 | 7:15 AM

Share

ಹೊಸ ವರ್ಷದಂದು ಪೆಟ್ರೋಲ್, ಡೀಸೆಲ್ ದರ ಎಷ್ಟಾಗಬಹುದು ಎನ್ನುವ ಕುತೂಹಲ ಎಲ್ಲರಿಗೂ ಇರುತ್ತದೆ. ಹಾಗೆಯೇ ಇಂದು ಬಿಹಾರದಲ್ಲಿ ಪೆಟ್ರೋಲ್ ದರ ಸ್ವಲ್ಪ ಏರಿಕೆಯಾಗಿದ್ದರೆ, ಪಂಜಾಬ್​ನಲ್ಲಿ ಕೊಂಚ ಇಳಿಕೆ ಕಂಡಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎಂಬುದನ್ನು ನೋಡೋಣ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್​ಗೆ 71.65 ಡಾಲರ್​ನಂತೆ ಮಾರಾಟ ಮಾಡಲಾಗುತ್ತಿದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಬಿಹಾರದಲ್ಲಿ ಪೆಟ್ರೋಲ್ ಬೆಲೆ 36 ಪೈಸೆ ಮತ್ತು ಡೀಸೆಲ್ ಬೆಲೆ 34 ಪೈಸೆ ಏರಿಕೆಯಾಗಿದೆ. ಗುಜರಾತ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 27 ಪೈಸೆಗಳಷ್ಟು ಹೆಚ್ಚಾಗಿದೆ. ಇದಲ್ಲದೇ ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ.

ಮತ್ತೊಂದೆಡೆ, ಪಂಜಾಬ್‌ನಲ್ಲಿ ಪೆಟ್ರೋಲ್ 28 ಪೈಸೆ ಮತ್ತು ಡೀಸೆಲ್ 27 ಪೈಸೆ ಅಗ್ಗವಾಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ 34 ಪೈಸೆ ಮತ್ತು ಡೀಸೆಲ್ 31 ಪೈಸೆ ಕಡಿಮೆಯಾಗಿದೆ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 37 ಪೈಸೆ ಮತ್ತು ಡೀಸೆಲ್ ಬೆಲೆ 36 ಪೈಸೆ ಇಳಿಕೆಯಾಗಿದೆ. ಉತ್ತರಾಖಂಡ, ಒಡಿಶಾ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.

ಈ ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 90.08 ರೂ. – ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ. -ಬೆಂಗಳೂರಿನಲ್ಲಿ ಪೆಟ್ರೋಲ್ 101.94ರೂ. ಡೀಸೆಲ್ 87.89 ರೂ. ಇದೆ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಇದೆ.

-ನೋಯ್ಡಾದಲ್ಲಿ ಪೆಟ್ರೋಲ್ 96.65 ರೂ ಮತ್ತು ಡೀಸೆಲ್ ಲೀಟರ್‌ಗೆ 89.82 ರೂ ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.47 ರೂ ಮತ್ತು ಡೀಸೆಲ್ ರೂ 89.66 ಆಗಿದೆ. – ಪಾಟ್ನಾದಲ್ಲಿ, ಪೆಟ್ರೋಲ್ ಲೀಟರ್‌ಗೆ 107.24 ರೂ. ಮತ್ತು ಡೀಸೆಲ್ 94.36 ರೂ. ಆಗಿದೆ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ. ಮತ್ತು ಡೀಸೆಲ್ 79.74 ರೂ. ಆಗಿದೆ.

ಮತ್ತಷ್ಟು ಓದಿ:Petrol Diesel Price on December 31: ದೇಶದ ಪ್ರಮುಖ ನಗರಗಳಲ್ಲಿ ಡಿ.31 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?, ಮಾಹಿತಿ ಇಲ್ಲಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಬರೆಯುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:12 am, Mon, 1 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!