Petrol Diesel Price on January 10: ಅಯೋಧ್ಯೆ ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್ ಡೀಸೆಲ್ ದರ ಎಷ್ಟಿದೆ ತಿಳಿಯಿರಿ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್​ನ ನೂತನ ದರವನ್ನು ಬಿಡುಗಡೆ ಮಾಡಿವೆ. ಇಂಡಿಯನ್ ಆಯಿಲ್ ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರದಲ್ಲಿ ಶ್ರೀರಾಮ ಮಸ್ತಕಾಭಿಷೇಕ ನಡೆಯಲಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 97.03 ರೂ., ಡೀಸೆಲ್ ಲೀಟರ್​ಗೆ 90.22ರೂ. ಇದೆ. 604ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ, ಆದರೆ ಕಚ್ಚಾತೈಲ ದರವು ಪ್ರತಿ ಬ್ಯಾರೆಲ್​ಗೆ 80ಡಾಲರ್​ಗಿಂತ ಕಡಿಮೆಯಾಗಿದೆ.

Petrol Diesel Price on January 10: ಅಯೋಧ್ಯೆ ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್ ಡೀಸೆಲ್ ದರ ಎಷ್ಟಿದೆ ತಿಳಿಯಿರಿ
ಪೆಟ್ರೋಲ್
Image Credit source: The Economic Times

Updated on: Jan 10, 2024 | 7:14 AM

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್​ನ ನೂತನ ದರವನ್ನು ಬಿಡುಗಡೆ ಮಾಡಿವೆ. ಇಂಡಿಯನ್ ಆಯಿಲ್ ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರದಲ್ಲಿ ಶ್ರೀರಾಮ ಮಸ್ತಕಾಭಿಷೇಕ ನಡೆಯಲಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 97.03 ರೂ., ಡೀಸೆಲ್ ಲೀಟರ್​ಗೆ 90.22ರೂ. ಇದೆ. 604ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ, ಆದರೆ ಕಚ್ಚಾತೈಲ ದರವು ಪ್ರತಿ ಬ್ಯಾರೆಲ್​ಗೆ 80ಡಾಲರ್​ಗಿಂತ ಕಡಿಮೆಯಾಗಿದೆ.

ಬ್ರೆಂಟ್​ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ ಶೇ. 1.93ರಷ್ಟು ಹೆಚ್ಚಾಗಿ 77.59 ಡಾಲರ್​ಗೆ ಏರಿಕೆಯಾಗಿದೆ. ರಷ್ಯಾ-ಉಕ್ರೇನ್ ಯುದ್ಧದ ಸಮಯದಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 130 ಡಾಲರ್​ಗೆ ತಲುಪಿತ್ತು. ಆಗಲೂ ಭಾರತದಲ್ಲಿ ಪೆಟ್ರಲ್ ಡೀಸೆಲ್ ದರ ಏರಿಕೆಯಾಗಿರಲಿಲ್ಲ.

ಎಲ್ಲೆಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಲಕ್ನೋದಲ್ಲಿ ಪೆಟ್ರೋಲ್ 96.57 ರೂ., ಡೀಸೆಲ್ 93.72 ರೂ., ಭೋಪಾಲ್​ನಲ್ಲಿ ಪೆಟ್ರೋಲ್ 108.65 ರೂ., ಡೀಸೆಲ್ 89.76 ರೂ., ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ., ಡೀಸೆಲ್ 95.77 ರೂ., ನೋಯ್ಡಾದಲ್ಲಿ ಪೆಟ್ರೋಲ್ 96.79 ರೂ., ಡೀಸೆಲ್ 89.96 ರೂ., ದೆಹಲಿಯಲ್ಲಿ ಪೆಟ್ರೋಲ್ ದರ 96.72 ರೂ., ಡೀಸೆಲ್ 89.62 ರೂ., ಮುಂಬೈನಲ್ಲಿ ಪೆಟ್ರೋಲ್ 106.31 ರೂ., ಡೀಸೆಲ್ 94.27 ರೂ. ಇದೆ. ಬೆಂಗಳೂರು: ಪೆಟ್ರೋಲ್ 101.94ರೂ. ಡೀಸೆಲ್ 87.89 ರೂ. ಇದೆ.

ಮತ್ತಷ್ಟು ಓದಿ: Petrol Diesel Price on January 09: ಗುಜರಾತ್, ಮಧ್ಯಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ, ಮಹಾರಾಷ್ಟ್ರದಲ್ಲಿ ಏರಿಕೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ

ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಈ ಕಾರಣದಿಂದಲೇ ನಾವು ಪೆಟ್ರೋಲ್, ಡೀಸೆಲ್ ಅನ್ನು ದುಬಾರಿ ಬೆಲೆಗೆ ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು

ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us