Petrol Diesel Price on January 21:ಗುಜರಾತ್, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿ, ಈ ರಾಜ್ಯಗಳಲ್ಲಿ ಕಡಿಮೆ

ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇಂದಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು. ಉತ್ತರ ಪ್ರದೇಶ, ಆಂಧ್ರಪ್ರದೇಶ, ಕರ್ನಾಟಕ, ಗುಜರಾತ್ ಮತ್ತು ಹರಿಯಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ, ಆದರೆ ಪಂಜಾಬ್, ರಾಜಸ್ಥಾನ, ಹಿಮಾಚಲ, ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಧನ ಬೆಲೆ ಕಡಿಮೆಯಾಗಿದೆ. ಇತರ ರಾಜ್ಯಗಳು ಮತ್ತು ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ತಿಳಿಯೋಣ.

Petrol Diesel Price on January 21:ಗುಜರಾತ್, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿ, ಈ ರಾಜ್ಯಗಳಲ್ಲಿ ಕಡಿಮೆ
ಪೆಟ್ರೋಲ್
Image Credit source: Business Standard

Updated on: Jan 21, 2024 | 7:42 AM

ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇಂದಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು. ಉತ್ತರ ಪ್ರದೇಶ, ಆಂಧ್ರಪ್ರದೇಶ, ಕರ್ನಾಟಕ, ಗುಜರಾತ್ ಮತ್ತು ಹರ್ಯಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ, ಆದರೆ ಪಂಜಾಬ್, ರಾಜಸ್ಥಾನ, ಹಿಮಾಚಲ, ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಧನ ಬೆಲೆ ಕಡಿಮೆಯಾಗಿದೆ. ಇತರ ರಾಜ್ಯಗಳು ಮತ್ತು ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ತಿಳಿಯೋಣ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ
– ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ.
– ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ.
– ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ.
ಮತ್ತು ಡೀಸೆಲ್ ಲೀಟರ್‌ಗೆ 94.24 ರೂ.
-ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ, ಡೀಸೆಲ್ 87.89 ರೂ.

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ
– ನೋಯ್ಡಾದಲ್ಲಿ ಪೆಟ್ರೋಲ್ 96.94 ರೂ. ಮತ್ತು ಡೀಸೆಲ್ ಲೀಟರ್‌ಗೆ 90.11 ರೂ. ಆಗಿದೆ.
– ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.62 ರೂ ಆಗಿದೆ.
-ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ. ಮತ್ತು ಡೀಸೆಲ್ ರೂ. 89.76 ಆಗಿದೆ.
-ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.30 ರೂ. ಮತ್ತು ಡೀಸೆಲ್ 94.09 ರೂ.

ಮತ್ತಷ್ಟು ಓದಿ: Petrol Diesel Price on January 19: ಕಚ್ಚಾತೈಲ ಬೆಲೆ ಏರಿಕೆ, ಭಾರತದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ
ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು
ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು.

ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us