AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on January 25: ನೋಯ್ಡಾದಲ್ಲಿ ಪೆಟ್ರೋಲ್ ದರ ಇಳಿಕೆ, ಯಾವ ನಗರಗಳಲ್ಲಿ ಎಷ್ಟು ಬೆಲೆ ತಿಳಿಯಿರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಒಂದು ದಿನದ ಏರಿಕೆಯ ನಂತರ ಗುರುವಾರ ಬೆಳಗ್ಗೆ ಮತ್ತೆ ಇಳಿಕೆ ಕಂಡುಬಂದಿದೆ. ಏತನ್ಮಧ್ಯೆ, ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ದರವನ್ನು ಬಿಡುಗಡೆ ಮಾಡಿದೆ. ಇಂದು, ಅನೇಕ ನಗರಗಳಲ್ಲಿ ತೈಲ ಬೆಲೆಯಲ್ಲಿ ಬದಲಾವಣೆಗಳು ಗೋಚರಿಸುತ್ತವೆ. ನೋಯ್ಡಾದಲ್ಲಿ ಪೆಟ್ರೋಲ್ ದುಬಾರಿಯಾಗಿದೆ, ಗಾಜಿಯಾಬಾದ್‌ನಲ್ಲಿ ಇಂದು ಯಾವುದೇ ಬದಲಾವಣೆ ಇಲ್ಲ, ಅಲ್ಲಿ ಪೆಟ್ರೋಲ್ ಲೀಟರ್‌ಗೆ 96.58 ರೂ.ಗೆ ಮಾರಾಟವಾಗುತ್ತಿದೆ.

Petrol Diesel Price on January 25: ನೋಯ್ಡಾದಲ್ಲಿ ಪೆಟ್ರೋಲ್ ದರ ಇಳಿಕೆ, ಯಾವ ನಗರಗಳಲ್ಲಿ ಎಷ್ಟು ಬೆಲೆ ತಿಳಿಯಿರಿ
ಪೆಟ್ರೋಲ್Image Credit source: ET Auto
ನಯನಾ ರಾಜೀವ್
|

Updated on:Jan 25, 2024 | 7:07 AM

Share

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ(Crude Oil)ದ ಬೆಲೆಯಲ್ಲಿ ಒಂದು ದಿನದ ಏರಿಕೆಯ ನಂತರ ಗುರುವಾರ ಬೆಳಗ್ಗೆ ಮತ್ತೆ ಇಳಿಕೆ ಕಂಡುಬಂದಿದೆ. ಏತನ್ಮಧ್ಯೆ, ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ದರವನ್ನು ಬಿಡುಗಡೆ ಮಾಡಿದೆ. ಇಂದು, ಅನೇಕ ನಗರಗಳಲ್ಲಿ ತೈಲ ಬೆಲೆಯಲ್ಲಿ ಬದಲಾವಣೆಗಳು ಗೋಚರಿಸುತ್ತವೆ. ನೋಯ್ಡಾದಲ್ಲಿ ಪೆಟ್ರೋಲ್ ದುಬಾರಿಯಾಗಿದೆ, ಗಾಜಿಯಾಬಾದ್‌ನಲ್ಲಿ ಇಂದು ಯಾವುದೇ ಬದಲಾವಣೆ ಇಲ್ಲ, ಅಲ್ಲಿ ಪೆಟ್ರೋಲ್ ಲೀಟರ್‌ಗೆ 96.58 ರೂ.ಗೆ ಮಾರಾಟವಾಗುತ್ತಿದೆ.

ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ನೋಯ್ಡಾದಲ್ಲಿ ಪೆಟ್ರೋಲ್ ಲೀಟರ್‌ಗೆ 35 ಪೈಸೆಯಿಂದ 97.00 ರೂ.ಗೆ ಮಾರಾಟವಾಗುತ್ತಿದೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 32 ಪೈಸೆಯಿಂದ 90.14 ರೂ.ಗೆ ಏರಿಕೆಯಾಗಿದೆ. ಇಂದು ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಪೆಟ್ರೋಲ್ ಲೀಟರ್‌ಗೆ 29 ಪೈಸೆ ಏರಿಕೆಯಾಗಿ 108.55 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 29 ಪೈಸೆಯಿಂದ 95.27 ರೂ.ಗೆ ಮಾರಾಟವಾಗುತ್ತಿದೆ.

ಇಂದು ಬೆಳಗ್ಗೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಪೆಟ್ರೋಲ್ ಬೆಲೆ 3 ಪೈಸೆ ಕಡಿಮೆಯಾಗಿ 108.45 ರೂ.ಗೆ ತಲುಪಿದ್ದರೆ, ಡೀಸೆಲ್ 3 ಪೈಸೆ ಕುಸಿದು 93.69 ರೂ.ಗೆ ಮಾರಾಟವಾಗುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗುರುವಾರ ಸ್ವಲ್ಪ ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 0.45 ಡಾಲರ್‌ಗಳಷ್ಟು ಕುಸಿದು 79.61 ಡಾಲರ್‌ಗೆ ತಲುಪಿದೆ. WTI ಯ ದರಗಳು ಇಂದು ಬೆಳಗ್ಗೆ ಕುಸಿತವನ್ನು ತೋರಿಸಿವೆ ಮತ್ತು ಅದನ್ನು ಪ್ರತಿ ಬ್ಯಾರೆಲ್‌ಗೆ 74.42 ಡಾಲರ್​ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಮತ್ತಷ್ಟು ಓದಿ: Petrol Diesel Price on January 24: ನೋಯ್ಡಾ ಹಾಗೂ ಪಾಟ್ನಾದಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ 89.62 ರೂ. – ಮುಂಬೈ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ. ಬೆಂಗಳೂರು-ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ. ಇದೆ. – ಚೆನ್ನೈ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 am, Thu, 25 January 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ