Petrol Diesel Price on January 31: ಬಿಹಾರದಲ್ಲಿ ಪೆಟ್ರೋಲ್ ಬೆಲೆ ಇಳಿಕೆ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

|

Updated on: Jan 31, 2024 | 7:07 AM

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ ಸುಮಾರು 2 ಡಾಲರ್​ಗೆ ಇಳಿದಿದೆ. ಏತನ್ಮಧ್ಯೆ, ಬುಧವಾರ ಬೆಳಗ್ಗೆ ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿದ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿ ಬದಲಾವಣೆ ಕಂಡುಬಂದಿದೆ. ಬಿಹಾರದಲ್ಲಿ ಸತತ ಎರಡನೇ ದಿನವೂ ತೈಲ ಅಗ್ಗವಾಗಿದ್ದು, ಇಂದು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗಿದೆ.

Petrol Diesel Price on January 31: ಬಿಹಾರದಲ್ಲಿ ಪೆಟ್ರೋಲ್ ಬೆಲೆ ಇಳಿಕೆ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಪೆಟ್ರೋಲ್
Image Credit source: ET Energy World
Follow us on

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ ಸುಮಾರು 2 ಡಾಲರ್​ಗೆ ಇಳಿದಿದೆ. ಏತನ್ಮಧ್ಯೆ, ಬುಧವಾರ ಬೆಳಗ್ಗೆ ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿದ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿ ಬದಲಾವಣೆ ಕಂಡುಬಂದಿದೆ. ಬಿಹಾರದಲ್ಲಿ ಸತತ ಎರಡನೇ ದಿನವೂ ತೈಲ ಅಗ್ಗವಾಗಿದ್ದು, ಇಂದು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗಿದೆ.

ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಇಂದು ಪೆಟ್ರೋಲ್ ಮತ್ತೆ ಅಗ್ಗವಾಗಿದೆ ಮತ್ತು 24 ಪೈಸೆಯಷ್ಟು ಕುಸಿದ ನಂತರ ಲೀಟರ್‌ಗೆ 107.24 ರೂ.ಗೆ ಮಾರಾಟವಾಗುತ್ತಿದೆ. ಇಲ್ಲಿ ಡೀಸೆಲ್ ಕೂಡ 22 ಪೈಸೆ ಇಳಿಕೆಯಾಗಿದ್ದು, ಲೀಟರ್‌ಗೆ 94.04 ರೂ. ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಇಂದು ಪೆಟ್ರೋಲ್ ಬೆಲೆ 31 ಪೈಸೆಯಷ್ಟು ಕಡಿಮೆಯಾಗಿದೆ ಮತ್ತು ಲೀಟರ್‌ಗೆ 99.67 ರೂ.ಗೆ ಮಾರಾಟವಾಗುತ್ತಿದೆ ಮತ್ತು ಡೀಸೆಲ್ ಲೀಟರ್‌ಗೆ 29 ಪೈಸೆ ಇಳಿಕೆಯಾಗಿ 85.09 ರೂ.ಗೆ ತಲುಪಿದೆ. ಇಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಲೀಟರ್‌ಗೆ 8 ಪೈಸೆ ಏರಿಕೆಯಾಗಿ 103.57 ರೂ.ಗೆ ಮತ್ತು ಡೀಸೆಲ್ ಬೆಲೆ 8 ಪೈಸೆ ಏರಿಕೆಯಾಗಿ 95.21 ರೂ.ಗೆ ಮಾರಾಟವಾಗುತ್ತಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ನಿರಂತರ ಏರಿಕೆಯ ನಂತರ ಇಂದು ಕಚ್ಚಾ ತೈಲದ ಬೆಲೆಯೂ ಕುಸಿಯುತ್ತಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 2 ಡಾಲರ್​ನಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 82.40 ಡಾಲರ್​ ತಲುಪಿದೆ. ಅದೇ ರೀತಿ, ಡಬ್ಲ್ಯುಟಿಐ ಕೂಡ ಪ್ರತಿ ಬ್ಯಾರೆಲ್‌ಗೆ 77.05 ಡಾಲರ್​ನಂತೆ ಮಾರಾಟವಾಗುತ್ತಿದೆ.

ಮತ್ತಷ್ಟು ಓದಿ: Petrol Diesel Price on January 30: ಹೊಸ ಸರ್ಕಾರ ರಚನೆಯಾಗುತ್ತಿದ್ದಂತೆ, ಬಿಹಾರದಲ್ಲಿ ತಗ್ಗಿತು ಪೆಟ್ರೋಲ್, ಡೀಸೆಲ್ ಬೆಲೆ

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ
– ದೆಹಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ 89.62 ರೂ.
– ಮುಂಬೈ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ.
– ಚೆನ್ನೈ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ.
-ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಈ ನಗರಗಳಲ್ಲಿಯೂ ಬಿಡುಗಡೆಯಾದ ಹೊಸ ಬೆಲೆಗಳು
– ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ ಲೀಟರ್‌ಗೆ 94.04 ರೂ. ಆಗಿದೆ.
– ದೋಡಾದಲ್ಲಿ ಪೆಟ್ರೋಲ್ ಲೀಟರ್‌ಗೆ 99.67 ರೂ. ಮತ್ತು ಡೀಸೆಲ್ 85.09 ರೂ.
– ಕನ್ಯಾಕುಮಾರಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.57 ರೂ ಮತ್ತು ಡೀಸೆಲ್ 95.21 ರೂ ಆಗಿದೆ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದುಪ್ಪಟ್ಟು ಆಗುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ