AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಔಟ್, ಭಾರತ ಇನ್: ಜಾಗತಿಕ ಮಾರುಕಟ್ಟೆಯಲ್ಲಿ ಜಪಾನ್ ಹೂಡಿಕೆದಾರರ ಭರ್ಜರಿ ದಿಕ್ಕು ಬದಲಾವಣೆ

Japanese Investment Pivots from China to India: ಜಪಾನ್‌ನ ಪ್ರಮುಖ ಹೂಡಿಕೆದಾರರು ಮತ್ತು ಬ್ಯಾಂಕುಗಳು ಚೀನಾದಿಂದ ಭಾರತದತ್ತ ತಮ್ಮ ಬಂಡವಾಳವನ್ನು ವರ್ಗಾಯಿಸುತ್ತಿವೆ. ಚೀನಾದ ರಾಜಕೀಯ ಅಸ್ಥಿರತೆ ಮತ್ತು ಆರ್ಥಿಕ ಮಂದಗತಿ ಇದಕ್ಕೆ ಪ್ರಮುಖ ಕಾರಣ. ಭಾರತದ ವೇಗದ ಆರ್ಥಿಕ ಬೆಳವಣಿಗೆ, ಬೃಹತ್ ಮಾರುಕಟ್ಟೆ ಮತ್ತು 'ಮೇಕ್ ಇನ್ ಇಂಡಿಯಾ' ಯೋಜನೆ ಜಪಾನಿ ಹೂಡಿಕೆದಾರರನ್ನು ಆಕರ್ಷಿಸಿದೆ. ಈ ದಿಕ್ಕುಬದಲಾವಣೆಯು ಭಾರತಕ್ಕೆ ಭಾರಿ ಬಂಡವಾಳ, ಉದ್ಯೋಗ ಸೃಷ್ಟಿ ಮತ್ತು ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡಲಿದೆ.

ಚೀನಾ ಔಟ್, ಭಾರತ ಇನ್: ಜಾಗತಿಕ ಮಾರುಕಟ್ಟೆಯಲ್ಲಿ ಜಪಾನ್ ಹೂಡಿಕೆದಾರರ ಭರ್ಜರಿ ದಿಕ್ಕು ಬದಲಾವಣೆ
ಜಪಾನ್Image Credit source: Alamy
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 03, 2026 | 5:03 PM

Share

ನವದೆಹಲಿ, ಜೂನ್ 3: ಜಾಗತಿಕ ಆರ್ಥಿಕ ಮತ್ತು ರಾಜಕೀಯ ರಂಗದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಯೊಂದು ಮೌನವಾಗಿ ಆದರೆ ಅತ್ಯಂತ ಶಕ್ತಿಯುತವಾಗಿ ನಡೆಯುತ್ತಿದೆ. ದಶಕಗಳಿಂದ ಚೀನಾವನ್ನು ತಮ್ಮ ಪ್ರಮುಖ ಹೂಡಿಕೆಯ ತಾಣವಾಗಿ ನೆಚ್ಚಿಕೊಂಡಿದ್ದ ಜಪಾನ್‌ನ ದೈತ್ಯ ಹೂಡಿಕೆದಾರರು (Japanese investors) ಮತ್ತು ಬ್ಯಾಂಕುಗಳು, ಈಗ ಚೀನಾದಿಂದ ಮುಖತಿರುಗಿಸಿ ಭಾರತದತ್ತ ಮುಖ ಮಾಡುತ್ತಿದ್ದಾರೆ. ಜಪಾನ್‌ನ ಈ ದಿಕ್ಕು ಬದಲಾವಣೆಯು (Pivot) ಮುಂಬರುವ ದಿನಗಳಲ್ಲಿ ಭಾರತದ ಆರ್ಥಿಕತೆಗೆ ಭಾರಿ ಪ್ರಮಾಣದ ಬಂಡವಾಳವನ್ನು ತಂದುಕೊಡಲಿದೆ ಎಂದು ಜಾಗತಿಕ ಹಣಕಾಸು ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ದೀರ್ಘಕಾಲದವರೆಗೆ ಚೀನಾದ ಅಭಿವೃದ್ಧಿಯ ಭಾಗವಾಗಿದ್ದ ಜಪಾನ್‌ ಕಂಪನಿಗಳು ಈಗ ಅಲ್ಲಿಂದ ಹೊರಬರಲು ಪ್ರಮುಖ ಕಾರಣಳಿವೆ. ರಾಜಕೀಯ ಮತ್ತು ಭೌಗೋಳಿಕ ಉದ್ವಿಗ್ನತೆ (Geopolitical Tensions), ಚೀನಾದ ಆರ್ಥಿಕ ಮಂದಗತಿ ಮತ್ತು ಕಠಿಣ ನಿಯಮಗಳು ವಿದೇಶೀ ಹೂಡಿಕೆದಾರರಿಗೆ ಇರಿಸುಮುರಿಸು ತಂದಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಅಮೆರಿಕ ಮತ್ತು ಚೀನಾ ನಡುವಿನ ಹೆಚ್ಚುತ್ತಿರುವ ವಾಣಿಜ್ಯ ಸಮರ ಹಾಗೂ ತೈವಾನ್ ವಿಷಯದಲ್ಲಿ ಸೃಷ್ಟಿಯಾಗಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯು ಜಪಾನ್ ಕಂಪನಿಗಳಿಗೆ ಆತಂಕ ಮೂಡಿಸಿದೆ. ಚೀನಾದ ರಿಯಲ್ ಎಸ್ಟೇಟ್ ವಲಯದ ಕುಸಿತ ಮತ್ತು ಅಲ್ಲಿನ ಆರ್ಥಿಕ ಬೆಳವಣಿಗೆಯ ವೇಗ ತಗ್ಗಿರುವುದು ಹೂಡಿಕೆದಾರರ ವಿಶ್ವಾಸವನ್ನು ಕುಗ್ಗಿಸಿದೆ. ಚೀನಾ ಸರ್ಕಾರವು ಇತ್ತೀಚಿನ ವರ್ಷಗಳಲ್ಲಿ ವಿದೇಶಿ ಕಂಪನಿಗಳ ಮೇಲೆ ಹೇರುತ್ತಿರುವ ಕಟ್ಟುನಿಟ್ಟಿನ ನಿಯಂತ್ರಣಗಳು ಮತ್ತು ನಿಗಾ ವ್ಯವಸ್ಥೆಯು ಜಪಾನ್ ಬ್ಯಾಂಕುಗಳಿಗೆ ಅಲ್ಲಿ ಮುಕ್ತವಾಗಿ ವ್ಯವಹರಿಸಲು ಅಡ್ಡಿಯಾಗಿದೆ.

ಇದನ್ನೂ ಓದಿ: ಭಾರತದ ಸೇವಾ ಕ್ಷೇತ್ರದಲ್ಲಿ ಹೊಸ ಹುರುಪು; ಮೇ ತಿಂಗಳ ಸರ್ವಿಸ್ ಸೆಕ್ಟರ್ ಪಿಎಂಐ 6 ತಿಂಗಳ ಗರಿಷ್ಠ ಮಟ್ಟಕ್ಕೆ

ಭಾರತದ ಕಡೆಗೆ ಜಪಾನಿ ಹೂಡಿಕೆದಾರರು ಆಕರ್ಷಿತರಾಗುತ್ತಿರುವುದೇಕೆ?

ಚೀನಾಕ್ಕೆ ಪರ್ಯಾಯವಾಗಿ ಜಪಾನ್ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತವನ್ನು ಆಯ್ದುಕೊಳ್ಳುತ್ತಿರುವುದರ ಹಿಂದೆಯೂ ಬಲವಾದ ಕಾರಣಗಳಿವೆ. ಭಾರತವು ಪ್ರಸ್ತುತ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಜಾಗತಿಕ ಮಂದಗತಿಯ ನಡುವೆಯೂ ಭಾರತದ ಜಿಡಿಪಿ (GDP) ಪ್ರಗತಿ ಸ್ಥಿರವಾಗಿದೆ.

ಭಾರತದ ಬೃಹತ್ ಗ್ರಾಹಕ ಮಾರುಕಟ್ಟೆ ಮತ್ತು ದುಡಿಯುವ ವಯಸ್ಸಿನ ಯುವ ಜನಸಂಖ್ಯೆಯು ಜಪಾನ್‌ನ ಉತ್ಪಾದನಾ ಮತ್ತು ಸೇವಾ ವಲಯದ ಕಂಪನಿಗಳಿಗೆ ದೊಡ್ಡ ಅವಕಾಶಗಳನ್ನು ಸೃಷ್ಟಿಸಿದೆ.

ಜಪಾನ್ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಬಾಂಧವ್ಯವು ಐತಿಹಾಸಿಕವಾಗಿ ಅತ್ಯಂತ ಸುದೃಢವಾಗಿದೆ. ‘ಕ್ವಾಡ್’ (QUAD) ಒಕ್ಕೂಟದ ಮೂಲಕ ಉಭಯ ದೇಶಗಳ ಕಾರ್ಯತಂತ್ರದ ಪಾಲುದಾರಿಕೆ ಇನ್ನಷ್ಟು ಗಟ್ಟಿಯಾಗಿದೆ.

ಭಾರತ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಯೋಜನೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ನೀಡುತ್ತಿರುವ ಆದ್ಯತೆಯು ಜಪಾನ್ ಹೂಡಿಕೆದಾರರನ್ನು ಸೆಳೆಯುತ್ತಿದೆ.

ಇದನ್ನೂ ಓದಿ: ಫಾರೆಕ್ಸ್​ನ ಚಿನ್ನ ಮಾರಿರುವ ಸುದ್ದಿ ಸುಳ್ಳು ಎಂದ ಸರ್ಕಾರ; ದೇಶದ ಬಂಗಾರದ ದಾಸ್ತಾನು 880.52 ಟನ್‌ಗಳಷ್ಟು ಸುರಕ್ಷಿತವಂತೆ

ಭಾರತದ ಮೇಲಾಗುವ ಸಕಾರಾತ್ಮಕ ಪರಿಣಾಮಗಳು

ಜಪಾನ್‌ನ ಮುಂಚೂಣಿ ಬ್ಯಾಂಕುಗಳಾದ ಮುಫಾಗ್‌ (MUFG), ಮಿತ್ಸುಯಿ ಸುಮಿತೊಮೊ (SMBC) ಮತ್ತು ಮಿಜುಹೊ (Mizuho) ಈಗಾಗಲೇ ಭಾರತದಲ್ಲಿ ತಮ್ಮ ಶಾಖೆಗಳನ್ನು ವಿಸ್ತರಿಸುತ್ತಿದ್ದು, ಭಾರತೀಯ ಸ್ಟಾರ್ಟ್-ಅಪ್‌ಗಳು ಹಾಗೂ ಕಾರ್ಪೊರೇಟ್ ವಲಯಕ್ಕೆ ದೊಡ್ಡ ಮಟ್ಟದ ಸಾಲ ಮತ್ತು ಬಂಡವಾಳವನ್ನು ಒದಗಿಸುತ್ತಿವೆ.

ಜಪಾನ್‌ನ ಈ ‘ಮೌನ ಕ್ರಾಂತಿ’ಯು ಭಾರತದಲ್ಲಿ ಕೇವಲ ಕೈಗಾರಿಕಾ ರಂಗ ಮಾತ್ರವಲ್ಲದೆ, ಹಸಿರು ಇಂಧನ (Green Energy), ತಂತ್ರಜ್ಞಾನ ಮತ್ತು ಡಿಜಿಟಲ್ ಮೂಲಸೌಕರ್ಯ ವಲಯಗಳಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ಭಾರತವನ್ನು ಜಾಗತಿಕ ಉತ್ಪಾದನಾ ಹಬ್ ಆಗಿ ಪರಿವರ್ತಿಸಲು ಪ್ರಮುಖ ಪಾತ್ರ ವಹಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ