AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jay Kotak: ಕೋಟಕ್ ಮಹೀಂದ್ರಾ ಬ್ಯಾಂಕ್‌ ಸಂಸ್ಥಾಪಕನ ಪುತ್ರನ ಜತೆ ಮಾಜಿ ಮಿಸ್ ಇಂಡಿಯಾ ಅದಿತಿ ಆರ್ಯ ನಿಶ್ಚಿತಾರ್ಥ

ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉದಯ್ ಕೋಟಕ್ ಅವರ ಪುತ್ರ ಜೇ ಕೋಟಕ್ ಅವರು 2015ರ ಫೆಮಿನಾ ಮಿಸ್ ಇಂಡಿಯಾ ವಿಜೇತ ಅದಿತಿ ಆರ್ಯ ಅವರೊಂದಿಗೆ ನಿಶ್ಚಿತಾರ್ಥ

Jay Kotak: ಕೋಟಕ್ ಮಹೀಂದ್ರಾ ಬ್ಯಾಂಕ್‌ ಸಂಸ್ಥಾಪಕನ ಪುತ್ರನ ಜತೆ ಮಾಜಿ ಮಿಸ್ ಇಂಡಿಯಾ ಅದಿತಿ ಆರ್ಯ ನಿಶ್ಚಿತಾರ್ಥ
Jay Kotak and aditi arya
ಅಕ್ಷಯ್​ ಪಲ್ಲಮಜಲು​​
|

Updated on: May 26, 2023 | 5:05 PM

Share

ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉದಯ್ ಕೋಟಕ್ ಅವರ ಪುತ್ರ ಜೇ ಕೋಟಕ್ ಅವರು 2015ರ ಫೆಮಿನಾ ಮಿಸ್ ಇಂಡಿಯಾ ವಿಜೇತ ಅದಿತಿ ಆರ್ಯ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ. ಅದಿತಿ ಆರ್ಯ ಅವರು ಯೇಲ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರುವ ಫೋಟೋವನ್ನು ಜೇ ಕೋಟಕ್ ತಮ್ಮ ಟ್ವಿಟರ್​​ನಲ್ಲಿ ಹಂಚಿಕೊಳ್ಳವ ಮೂಲಕ ತಮ್ಮ ಸಂಬಂಧದ ಆರಂಭದ ಬಗ್ಗೆ ತಿಳಿಸಿದ್ದಾರೆ. ಅದಿತಿ ಆರ್ಯ ಪದವಿ ಪಡೆದಿರುವ ಹಂಚಿಕೊಂಡು ಅವರಿಗೆ ಅಭಿನಂದಿಸಿದ್ದಾರೆ. “ಅದಿತಿ, ನನ್ನ ನಿಶ್ಚಿತವಾಗಿದೆ, ಇಂದು ಯೇಲ್ ವಿಶ್ವವಿದ್ಯಾನಿಲಯದಿಂದ ತನ್ನ ಎಂಬಿಎ ಪೂರ್ಣಗೊಳಿಸಿದ್ದಾಳೆ. ನಿಮ್ಮ ಬಗ್ಗೆ ಅಪಾರ ಹೆಮ್ಮೆ”, ಎಂದು ಬರೆದುಕೊಂಡಿದ್ದಾರೆ.

ಜೇ ಕೋಟಕ್ ಹಂಚಿಕೊಂಡ ಈ ಪೋಸ್ಟ್ ಏಳು ಸಾವಿರಕ್ಕೂ ಹೆಚ್ಚು ಲೈಕ್​​ ಮತ್ತು ಒಂಬತ್ತು ಲಕ್ಷ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಉದ್ಯಮಿ ಹರ್ಷ್ ಗೋಯೆಂಕಾ ಸೇರಿದಂತೆ ಅನೇಕರು ಶುಭಾ ಹಾರೈಸಿದರು. ಕಳೆದ ವರ್ಷ, ಅವರಿಬ್ಬರೂ ಪ್ಯಾರಿಸ್‌ನ ಐಫೆಲ್ ಟವರ್‌ನ ಹೊರಗೆ ನಿಂತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಅವರ ನಿಶ್ಚಿತಾರ್ಥದ ವದಂತಿ ಕಾರಣವಾಗಿತ್ತು. ಆದರೆ, ಇದುವರೆಗೂ ಅವರಿಬ್ಬರೂ ನಿಶ್ಚಿತಾರ್ಥದ ಖಚಿತಪಡಿಸಿರಲಿಲ್ಲ.

ಇದನ್ನೂ ಓದಿ:Business Ideas: ಮಹಿಳೆಯರೇ! ಮನೆಯಲ್ಲೇ ಇದ್ದುಕೊಂಡು ತಿಂಗಳಿಗೆ 1 ಲಕ್ಷ ರೂಪಾಯಿ ಆದಾಯ ಗಳಿಸುವ ಬಿಸಿನೆಸ್​ ಅವಕಾಶ ನಿಮಗಾಗಿ ಇಲ್ಲಿದೆ ನೋಡಿ

ಜೇ ಕೋಟಕ್ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಮತ್ತು ಅರ್ಥಶಾಸ್ತ್ರದಲ್ಲಿ ಪದವಿ ಮಾಡಿದರು. ನಂತರ, ಅವರು ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್‌ನಿಂದ MBA ಮುಗಿಸಿ. ಪ್ರಸ್ತುತ, ಅವರು ಕೋಟಕ್​​ನ 811 ನ ಉಪಾಧ್ಯಕ್ಷರಾಗಿದ್ದಾರೆ. ಮತ್ತೊಂದೆಡೆ, ಅದಿತಿ ಆರ್ಯ ದೆಹಲಿ ವಿಶ್ವವಿದ್ಯಾಲಯದ ಶಾಹೀದ್ ಸುಖದೇವ್ ಕಾಲೇಜ್ ಆಫ್ ಬ್ಯುಸಿನೆಸ್ ಸ್ಟಡೀಸ್‌ನ ಪದವೀಧರರಾಗಿದ್ದು ಮತ್ತು ಅರ್ನ್ಸ್ಟ್ ಮತ್ತು ಯಂಗ್‌ನಲ್ಲಿ ಸಂಶೋಧನಾ ವಿಶ್ಲೇಷಕರಾಗಿದ್ದಾರೆ. 2015ರಲ್ಲಿ, ಅವರು ಸೌಂದರ್ಯ ಸ್ಪರ್ಧೆಯ 52 ನೇ ಆವೃತ್ತಿಯಲ್ಲಿ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಪಡೆದರು. ಪ್ರತಿಷ್ಠಿತ ಐವಿ ಲೀಗ್ ಸಂಸ್ಥೆಯಾದ ಯೇಲ್ ವಿಶ್ವವಿದ್ಯಾಲಯಕ್ಕೆ ಹೋಗುವ ಮುನ್ನ ಮೊದಲು ಅವರು ಕೆಲವು ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?