AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jio Phone 5G: ರೋಚಕತೆ ಸೃಷ್ಟಿಸಿದ ಜಿಯೋ ಫೋನ್ 5G: ಸೋರಿಕೆಯಾಗಿದೆ ಫೀಚರ್ಸ್, ಬೆಲೆ ಎಷ್ಟು?

ಗ್ಯಾಜೆಟ್ಸ್ ವೆಬ್​ಸೈಟ್ 91 ಮೊಬೈಲ್ಸ್ ಮಾಡಿರುವ ವರದಿಯ ಪ್ರಕಾರ ನೂತನ ಜಿಯೋ ಫೋನ್ 5G ಬೆಲೆ ಕೇವಲ 12,000 ರೂ. ಕ್ಕಿಂತ ಕಡಿಮೆ ಇರಲಿದೆ ಎಂದು ಹೇಳಲಾಗಿದೆ. ಜೊತೆಗೆ ಈ ಫೋನ್ 'ಗಂಗಾ' ಎಂಬ ಕೋಡ್‌ ನೇಮ್‌ ಹೊಂದಿದ್ದು, 'LS1654QB5' ಮಾದರಿ ಸಂಖ್ಯೆಯೊಂದಿಗೆ ಲಾಂಚ್ ಆಗಲಿದೆ ಎಂಬ ಮಾತಿದೆ.

Jio Phone 5G: ರೋಚಕತೆ ಸೃಷ್ಟಿಸಿದ ಜಿಯೋ ಫೋನ್ 5G: ಸೋರಿಕೆಯಾಗಿದೆ ಫೀಚರ್ಸ್, ಬೆಲೆ ಎಷ್ಟು?
ರಿಲಯನ್ಸ್ ಜಿಯೊ
TV9 Web
| Edited By: |

Updated on:Oct 08, 2026 | 12:23 PM

Share

ಭಾರತದಲ್ಲಿ 5ಜಿ ಲಾಂಚ್​ಗೆ ಕ್ಷಣಗಣನೆ ಶುರುವಾಗಿದೆ. ಅಕ್ಟೋಬರ್ 1 ರಂದು ನಡೆಯಲಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್‌ (Mobile Congress) ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತದಲ್ಲಿ 5G ಸೇವೆಗಳನ್ನು ಪ್ರಾರಂಭಿಸಲಿದ್ದಾರೆ. ಪ್ರಸಿದ್ಧ ಟೆಲಿಕಾಂ ಸಂಸ್ಥೆಗಳಾದ ಜಿಯೋ, ಏರ್ಟೆಲ್ ಹಾಗೂ ವೋಡಾಫೋನ್ ಐಡಿಯಾ ಮುಂದಿನ ತಿಂಗಳು 5G ಆರಂಭಿಸುವ ನಿರೀಕ್ಷಿಯಿದೆ. ಇದರ ನಡುವೆ ಭಾರತದಲ್ಲಿ ಒಂದರ ಹಿಂದೆ ಒಂದಂರಂತೆ ಅತಿ ಕಡಿಮೆ ಬೆಲೆಗೆ 5ಜಿ ಫೋನ್​ಗಳು ಬಿಡುಗಡೆ ಆಗುತ್ತಿದೆ. ಈ ಪೈಕಿ ಜಿಯೋ ಕೂಡ ನೂತನ 5G (Jio Phone 5G) ಸ್ಮಾರ್ಟ್‌ಫೋನ್‌ ರಿಲೀಸ್ ಮಾಡಲು ಸಿದ್ಧತೆ ನಡೆಸುತ್ತಿದೆ. ಹೀಗಿರುವಾಗ ಈ ಫೋನಿನ ಬೆಲೆ ಸೇರಿದಂತೆ ಕೆಲ ಫೀಚರ್​ಗಳು ಆನ್​ಲೈನ್​ನಲ್ಲಿ ಸೋರಿಕೆಯಾಗಿದೆ. ಇದೀಗ ಜಿಯೋ ಲಾಂಚ್ ಮಾಡಲಿರುವ ಹೊಸ 5G ಸ್ಮಾರ್ಟ್‌ಫೋನ್‌ ಗ್ರಾಹಕರಲ್ಲಿ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

ಗ್ಯಾಜೆಟ್ಸ್ ವೆಬ್​ಸೈಟ್ 91 ಮೊಬೈಲ್ಸ್ ಮಾಡಿರುವ ವರದಿಯ ಪ್ರಕಾರ ನೂತನ ಜಿಯೋ ಫೋನ್ 5G ಬೆಲೆ ಕೇವಲ 12,000 ರೂ. ಕ್ಕಿಂತ ಕಡಿಮೆ ಇರಲಿದೆ ಎಂದು ಹೇಳಲಾಗಿದೆ. ಜೊತೆಗೆ ಈ ಫೋನ್ ‘ಗಂಗಾ’ ಎಂಬ ಕೋಡ್‌ ನೇಮ್‌ ಹೊಂದಿದ್ದು, ‘LS1654QB5’ ಮಾದರಿ ಸಂಖ್ಯೆಯೊಂದಿಗೆ ಲಾಂಚ್ ಆಗಲಿದೆ ಎಂಬ ಮಾತಿದೆ.

ಜಿಯೋ ಫೋನ್ 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ+ LCD ಸ್ಕ್ರೀನ್ ಜೊತೆಗೆ 90Hz ಸ್ಕ್ರೀನ್ ರೀಫ್ರೇಶ್ ರೇಟ್‌ ಅನ್ನು ಹೊಂದಿರಲಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 480 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದ್ದು, ಈ ಪ್ರೊಸೆಸರ್‌ ಎಂಟ್ರಿ ಲೆವೆಲ್ 5G SoC ಆಗಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಹೊಂದಿರಲಿದೆ ಎನ್ನಲಾಗಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ಯ ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ ಎಂದು ಹೇಳಲಾಗಿದೆ. ಜಿಯೋ ಫೋನ್ 5G ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿರುವ ಸಾದ್ಯತೆಯಿದೆ.

ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿರಲಿದೆ. ಜೊತೆಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಇರಲಿದೆ. 5,000mAh ಬ್ಯಾಟರಿ ಬ್ಯಾಕ್‌ಅಪ್‌ ಇರಲಿದ್ದು 18W ವೇಗದ ಚಾರ್ಜಿಂಗ್ ಸಪೋರ್ಟ್‌ ಪಡೆದಿರಲಿದೆಯಂತೆ. ಇದು ಸೋರಿಕೆ ಆಗಿರುವ ಫೀಚರ್ಸ್ ಆಗಿದೆಯಷ್ಟೆ. ಕಂಪನಿಯಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

Published On - 12:21 pm, Thu, 29 September 22

Follow Us
TV9 Web
TV9 Web

TV9 Kannada

Read More
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ