Interest free Loans: ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲದ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ

Siddaramaiah's 14th Budget: ರೈತರಿಗೆ ನೀಡಲಾಗುತ್ತಿದ್ದ ಶೂನ್ಯ ಬಡ್ಡಿದರದ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷ ರೂಗೆ ಏರಿಸಲಾಗಿದೆ. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನೂ ಹೆಚ್ಚಿಸಲಾಗಿದೆ.

Interest free Loans: ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲದ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
ರೈತರಿಗೆ ಸಾಲ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 07, 2023 | 1:21 PM

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್​ನಲ್ಲಿ (Karnataka Budget 2023) ರೈತರಿಗೆ ಖುಷಿ ಕೊಟ್ಟಿದ್ದಾರೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ (Interest Free Loans) ನೀಡಲಾಗುವ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷ ರುಪಾಯಿಗೆ ಏರಿಸಿದ್ದಾರೆ. ಮಧ್ಯಮಾವಧಿ, ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂನಿಂದ 15 ಲಕ್ಷ ರುಪಾಯಿಗೆ ಏರಿಸಲಾಗಿದೆ. ಗುಡ್ಡಗಾಡು ಪ್ರದೇಶದ ರೈತರಿಗೆ ಪಿಕ್ ವ್ಯಾನ್ ಖರೀದಿಗೆ ಅಲ್ಪ ಬಡ್ಡಿದರದಲ್ಲಿ 7 ಲಕ್ಷ ರೂವರೆಗೂ ಸಾಲ ಕೊಡುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ.

ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಘೋಷಿಸಿದ್ದಾರೆ. ಶಿಡ್ಲಘಟ್ಟದಲ್ಲಿ 75 ಕೋಟಿ ರೂ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ; ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆಗಳ ಸಂಸ್ಕರಣೆಗೆ 10 ಕೋಟಿ ರೂ ವೆಚ್ಚದಲ್ಲಿ ಯೋಜನೆ; ಚಿಕ್ಕಮಗಳೂರಿನಲ್ಲಿ ಪ್ರವಾಸೋದ್ಯಮ ಮತ್ತು ಕಾಫಿ ಉದ್ಯಮ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲು ಬಜೆಟ್​ನಲ್ಲಿ ಹೇಳಲಾಗಿದೆ.

ಇದನ್ನೂ ಓದಿKarnataka Budget 2023: ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ

ಕುರಿ ಸಾವಾದರೆ 5 ಸಾವಿರ ರೂ ಪರಿಹಾರ

ರಾಜ್ಯ ಸರ್ಕಾರ ಅನುಗ್ರಹ ಯೋಜನೆ ಅಡಿ ಕುರಿ ಸಾಕಾಣಿಕೆದಾರರಿಗೆ ಅನುಕೂಲ ಮಾಡಿದೆ. ಈ ಯೋಜನೆಯಲ್ಲಿ ಕುರಿ ಮತ್ತು ಮೇಕೆ ಮೃತಪಟ್ಟರೆ ಮಾಲೀಕರಿಗೆ 5 ಸಾವಿರ ರೂವರೆಗೆ ಪರಿಹಾರ ಕೊಡಲಾಗುತ್ತದೆ.

ಇನ್ನು, ಗ್ರಾಮೀಣ ಭಾಗದಲ್ಲಿ 19 ಕೆರೆಗಳನ್ನು ತುಂಬಿಸಲು 770 ಕೋಟಿ ರೂ ಮೀಸಲಿಡಲಾಗಿದೆ. ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ರೂ ಮೀಸಲಿಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್