ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ನಲ್ಲಿ (Karnataka Budget 2023) ರೈತರಿಗೆ ಖುಷಿ ಕೊಟ್ಟಿದ್ದಾರೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ (Interest Free Loans) ನೀಡಲಾಗುವ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷ ರುಪಾಯಿಗೆ ಏರಿಸಿದ್ದಾರೆ. ಮಧ್ಯಮಾವಧಿ, ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂನಿಂದ 15 ಲಕ್ಷ ರುಪಾಯಿಗೆ ಏರಿಸಲಾಗಿದೆ. ಗುಡ್ಡಗಾಡು ಪ್ರದೇಶದ ರೈತರಿಗೆ ಪಿಕ್ ವ್ಯಾನ್ ಖರೀದಿಗೆ ಅಲ್ಪ ಬಡ್ಡಿದರದಲ್ಲಿ 7 ಲಕ್ಷ ರೂವರೆಗೂ ಸಾಲ ಕೊಡುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ.
ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಘೋಷಿಸಿದ್ದಾರೆ. ಶಿಡ್ಲಘಟ್ಟದಲ್ಲಿ 75 ಕೋಟಿ ರೂ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ; ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆಗಳ ಸಂಸ್ಕರಣೆಗೆ 10 ಕೋಟಿ ರೂ ವೆಚ್ಚದಲ್ಲಿ ಯೋಜನೆ; ಚಿಕ್ಕಮಗಳೂರಿನಲ್ಲಿ ಪ್ರವಾಸೋದ್ಯಮ ಮತ್ತು ಕಾಫಿ ಉದ್ಯಮ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲು ಬಜೆಟ್ನಲ್ಲಿ ಹೇಳಲಾಗಿದೆ.
ಇದನ್ನೂ ಓದಿ: Karnataka Budget 2023: ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರ ಅನುಗ್ರಹ ಯೋಜನೆ ಅಡಿ ಕುರಿ ಸಾಕಾಣಿಕೆದಾರರಿಗೆ ಅನುಕೂಲ ಮಾಡಿದೆ. ಈ ಯೋಜನೆಯಲ್ಲಿ ಕುರಿ ಮತ್ತು ಮೇಕೆ ಮೃತಪಟ್ಟರೆ ಮಾಲೀಕರಿಗೆ 5 ಸಾವಿರ ರೂವರೆಗೆ ಪರಿಹಾರ ಕೊಡಲಾಗುತ್ತದೆ.
ಇನ್ನು, ಗ್ರಾಮೀಣ ಭಾಗದಲ್ಲಿ 19 ಕೆರೆಗಳನ್ನು ತುಂಬಿಸಲು 770 ಕೋಟಿ ರೂ ಮೀಸಲಿಡಲಾಗಿದೆ. ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ರೂ ಮೀಸಲಿಡಲಾಗಿದೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ