1 ಲಕ್ಷ ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಿ; ನಿತಿನ್ ಗಡ್ಕರಿಗೆ ಬಸವರಾಜ ಬೊಮ್ಮಾಯಿ ಒತ್ತಾಯ

ರಾಯಚೂರು, ಗದಗ, ಕೊಪ್ಪಳ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸಂಬಂಧಿಸಿದ ರಸ್ತೆ ನಿರ್ಮಾಣ ಯೋಜನೆಗಳನ್ನು ವಹಿಸಿಕೊಳ್ಳುವಂತೆಯೂ ಬೊಮ್ಮಾಯಿ ಮನವಿ ಮಾಡಿದ್ದಾರೆ.

1 ಲಕ್ಷ ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಿ; ನಿತಿನ್ ಗಡ್ಕರಿಗೆ ಬಸವರಾಜ ಬೊಮ್ಮಾಯಿ ಒತ್ತಾಯ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: Ganapathi Sharma

Updated on: Jan 06, 2023 | 9:55 AM

ಬೆಂಗಳೂರು: ಕರ್ನಾಟಕದಲ್ಲಿ (Karnataka) 1 ಲಕ್ಷ ಕೋಟಿ ರೂ. ಮೊತ್ತದ ರಸ್ತೆ ನಿರ್ಮಾಣ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಒತ್ತಾಯಿಸಿದ್ದಾರೆ. ರಾಯಚೂರು, ಗದಗ, ಕೊಪ್ಪಳ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸಂಬಂಧಿಸಿದ ರಸ್ತೆ ನಿರ್ಮಾಣ ಯೋಜನೆಗಳನ್ನು ವಹಿಸಿಕೊಳ್ಳುವಂತೆಯೂ ಬೊಮ್ಮಾಯಿ ಮನವಿ ಮಾಡಿದ್ದಾರೆ. ‘ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮುಖ್ಯವಾಗಿ ಚರ್ಚಿಸಿದೆವು. 46,830 ಕೋಟಿ ರೂ. ಮೊತ್ತದ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಆದಾಗ್ಯೂ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಮೊತ್ತದ ಯೋಜನೆಗಳು ಕಾರ್ಯಗತವಾಗಬೇಕಿದೆ. ಯೋಜನೆಗಳ ಅನುಷ್ಠಾನಕ್ಕೆ ತ್ವರಿತವಾಗಿ ನಿರ್ಧಾರ ಕೈಗೊಳ್ಳಲಾಗುತ್ತಿದೆ’ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಗಡ್ಕರಿ ಅವರೊಂದಿಗೆ ಸಭೆ ನಡೆಸಿದ ಬಳಿಕ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ.

ಬನ್ನೇರುಘಟ್ಟ ಪ್ರದೇಶದಲ್ಲಿ ಹೆದ್ದಾರಿ ಬರುವುದು ಬೇಡ ಎಂದು ಹೇಳಿದ್ದೇವೆ. ಅದನ್ನ ಕೇಂದ್ರ ಸಾರಿಗೆ ಸಚಿವರು ಒಪ್ಪಿದ್ದಾರೆ. ರಾಜ್ಯದ ಹಲವು ನಗರದಲ್ಲಿ ರೈಲ್ವೆ ಅಂಡರ್ ಪಾಸ್, ಓವರ್ ಬ್ರಿಡ್ಜ್ ನಿರ್ಮಾಣ ಆಗಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. ಪರ್ಯಾಯ ಮಾರ್ಗ ಕಲ್ಪಿಸುವಂತೆ ರಾಜ್ಯ ವನ್ಯಜೀವಿ ಸಮಿತಿಯನ್ನು ಕೋರಿದ್ದೇವೆ. ಬನ್ನೇರುಘಟ್ಟ ಮೀಸಲು ಅರಣ್ಯದ ಮೂಲಕ ಯೋಜನೆ ಜಾರಿಯಾಗುವುದು ಬೇಡ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Nitin Gadkari Karnataka Visit: ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಕಾಮಗಾರಿ ವೀಕ್ಷಿಸಿದ ನಿತಿನ್ ಗಡ್ಕರಿ

ಗಡ್ಕರಿ ಅವರು ಚೆನ್ನೈ-ಬೆಂಗಳೂರು ಎಕ್ಸ್​ಪ್ರೆಸ್​ ವೇ ಮತ್ತು ಬೆಂಗಳೂರು-ಮೈಸೂರು ಹೆದ್ದಾರಿ ಯೋಜನೆಗಳ ಪರಿಶೀಲನೆಗಾಗಿ ಬೆಂಗಳೂರಿಗೆ ಬಂದಿದ್ದಾರೆ. ಈ ಸಂದರ್ಭ ಬಸವರಾಜ ಬೊಮ್ಮಾಯಿ ಮತ್ತು ಗಡ್ಕರಿ ಅನೇಕ ರಸ್ತೆ ನಿರ್ಮಾಣ ಯೋಜನೆಗಳು ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ