Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಖರೀದಿಸಬೇಕೆಂದಿರುವ ಬೆಂಗಳೂರಿಗರಿಗೆ ಕಹಿ ಸುದ್ದಿ; ಸ್ಥಿರಾಸ್ತಿ ಮಾರ್ಗಸೂಚಿ ದರ ಶೇ. 30ರಷ್ಟು ಏರುವ ಸಾಧ್ಯತೆ; ಏನಿದು ಗೈಡೆನ್ಸ್ ವ್ಯಾಲ್ಯೂ?

Property Guidance Value May See 30% Hike: ಐದು ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ವ್ಯವಸ್ಥೆ ಮಾಡಲು ಕರ್ನಾಟಕ ಸರ್ಕಾರ ವಿವಿಧ ಮಾರ್ಗೋಪಾಯಗಳನ್ನು ಅವಲೋಕಿಸುತ್ತಿದೆ. ಈ ನಿಟ್ಟಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಶೇ. 30ರಷ್ಟು ಗೈಡೆನ್ಸ್ ವ್ಯಾಲ್ಯೂ ಹೆಚ್ಚಿಸಲು ಯೋಜಿಸಿದೆ. 10 ವರ್ಷದ ಬಳಿಕ ಇಷ್ಟೊಂದು ಪ್ರಮಾಣದಲ್ಲಿ ಮಾರ್ಗಸೂಚಿ ದರ ಹೆಚ್ಚಾಗುತ್ತಿರುವುದು ಇದೇ ಮೊದಲು. ಅಕ್ಟೋಬರ್ 1ರಿಂದ ಹೊಸ ಮಾರ್ಗಸೂಚಿ ದರ ಜಾರಿಗೆ ಬರಲಿದೆ.

ಮನೆ ಖರೀದಿಸಬೇಕೆಂದಿರುವ ಬೆಂಗಳೂರಿಗರಿಗೆ ಕಹಿ ಸುದ್ದಿ; ಸ್ಥಿರಾಸ್ತಿ ಮಾರ್ಗಸೂಚಿ ದರ ಶೇ. 30ರಷ್ಟು ಏರುವ ಸಾಧ್ಯತೆ; ಏನಿದು ಗೈಡೆನ್ಸ್ ವ್ಯಾಲ್ಯೂ?
ಆಸ್ತಿ ನೊಂದಣಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 08, 2023 | 5:05 PM

ಬೆಂಗಳೂರು, ಸೆಪ್ಟೆಂಬರ್ 8: ಸಿಲಿಕಾನ್ ಸಿಟಿಯ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಹಳ ದಿನಗಳಿಂದ ಕಾಡುತ್ತಿದ್ದ ಆತಂಕ ಈಗ ನಿಜವಾಗುವಂತಿದೆ. ಮುಂಬರುವ ಅಕ್ಟೋಬರ್ 1ರಿಂದ ರಾಜ್ಯದಲ್ಲಿ ಸ್ಥಿರಾಸ್ತಿ ಮಾರ್ಗಸೂಚಿ ದರ (Guidance Value) ಅಥವಾ ಗೈಡೆನ್ಸ್ ವ್ಯಾಲ್ಯೂ ಗಣನೀಯವಾಗಿ ಹೆಚ್ಚಾಗಲಿದೆ. ಗೈಡನ್ಸ್ ವ್ಯಾಲ್ಯೂ ಶೇ. 30ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಮತ್ತು ಮನೆ ಖರೀದಿಸುವ ಆಸೆಯಲ್ಲಿರುವವರನ್ನು ಚಿಂತೆಗೀಡು ಮಾಡಲಿದೆ. ಹೊಸ ಸ್ಥಿರಾಸ್ತಿ ಮಾರ್ಗಸೂಚಿ ದರಗಳನ್ನು ಸರ್ಕಾರ ಶೀಘ್ರದಲ್ಲೇ ಸಾರ್ವತ್ರಿಕಗೊಳಿಸಲಿದ್ದು, ಜನಾಭಿಪ್ರಾಯ ಸಂಗ್ರಹಣೆ ಬಳಿಕ ದರಗಳನ್ನು ಅಂತಿಮಗೊಳಿಸಿ ಅಕ್ಟೋಬರ್ 1ರಿಂದ ಜಾರಿಗೊಳಿಸುವ ಸಾಧ್ಯತೆ ಇದೆ.

ಮಾಧ್ಯಮಗಳಿಗೆ ಬಂದಿರುವ ಮಾಹಿತಿ ಪ್ರಕಾರ ಗೈಡೆನ್ಸ್ ಮೌಲ್ಯ ಶೇ. 30ರಷ್ಟು ಹೆಚ್ಚಾಗಲಿದೆ. ಹಿಂದೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಇದ್ದಾಗಲೂ ಗೈಡೆನ್ಸ್ ವ್ಯಾಲ್ಯೂ ಹೆಚ್ಚಳ ಮಾಡುವ ಪ್ರಸ್ತಾಪ ಇತ್ತು. ಆದರೆ ಶೇ. 14ರಷ್ಟು ಮಾತ್ರ ಮಾರ್ಗಸೂಚಿ ದರ ಹೆಚ್ಚಿಸಲು ಸರ್ಕಾರ ನಿರ್ಧರಿಸಿತ್ತು. ಈ ಸರ್ಕಾರ ಶೇ. 30ರಷ್ಟು ಗೈಡೆನ್ಸ್ ವ್ಯಾಲ್ಯೂ ಹೆಚ್ಚಿಸುತ್ತಿದೆ. 2013ರಲ್ಲಿಯೂ ಶೇ. 30ರಷ್ಟು ಗೈಡೆನ್ಸ್ ವ್ಯಾಲ್ಯೂ ಹೆಚ್ಚಳವಾಗಿತ್ತು. ಅದಾದ ಬಳಿಕ ಇಷ್ಟೊಂದು ಮಟ್ಟದಲ್ಲಿ ಮಾರ್ಗಸೂಚಿ ದರ ಏರಿಕೆಯಾಗಲಿರುವುದು ಇದೇ ಮೊದಲು.

ಇದನ್ನೂ ಓದಿ: ಇಪಿಎಫ್ ಕ್ಲೈಮ್ ಅಥವಾ ರೀಫಂಡ್​ನಲ್ಲಿ ಸಮಸ್ಯೆಯಾಗಿದೆಯೇ? ದೂರುಗಳಿಗೆಂದೇ ಇಪಿಎಫ್​ನಿಂದ ವಿಶೇಷ ಪೋರ್ಟಲ್; ಇಲ್ಲಿ ಕಂಪ್ಲೇಂಟ್ ದಾಖಲಿಸುವ ಪ್ರಕ್ರಿಯೆ ತಿಳಿಯಿರಿ

ಏನಿದು ಗೈಡೆನ್ಸ್ ವ್ಯಾಲ್ಯೂ?

ಇದು ಯಾವುದೇ ಪ್ರದೇಶದ ಸ್ಥಿರಾಸ್ತಿಗಳಿಗೆ ಸರ್ಕಾರ ನಿಗದಿ ಮಾಡುವ ಕನಿಷ್ಠ ಮೌಲ್ಯವಾಗಿದೆ. ಈ ಮೌಲ್ಯಕ್ಕಿಂತ ಕಡಿಮೆ ಮೊತ್ತಕ್ಕೆ ಒಂದು ಆಸ್ತಿಯ ಮಾರಾಟ ಆಗುವಂತಿಲ್ಲ. ಆಸ್ತಿ ಮಾರಾಟದ ವೇಳೆ ಸರ್ಕಾರಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ಇದನ್ನು ತಪ್ಪಿಸಲು ಹಲವರು ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಆಸ್ತಿಮೌಲ್ಯ ತೋರಿಸಿ ಮಾರಾಟ ಮಾಡುತ್ತಿದ್ದರು. ಈ ಕಳ್ಳತನ ತಡೆಯಲು ಸರ್ಕಾರ ಒಂದು ಆಸ್ತಿಗೆ ಕನಿಷ್ಠ ಮೌಲ್ಯ ನಿಗದಿ ಮಾಡುತ್ತದೆ.

ಒಂದು ಪ್ರದೇಶದಲ್ಲಿ ನಿಗದಿಯಾಗಿರುವ ಮಾರ್ಗಸೂಚಿ ದರಕ್ಕಿಂತ ಕಡಿಮೆ ಬೆಲೆಗೆ ಯಾವ ಆಸ್ತಿಯನ್ನೂ ಮಾರಾಟ ಮಾಡಲು ಆಗುವುದಿಲ್ಲ.

ಇದನ್ನೂ ಓದಿ: ಐವತ್ತು ವರ್ಷದಲ್ಲಿ ಆಗುವಂಥದ್ದನ್ನು ಆರೇ ವರ್ಷದಲ್ಲಿ ಸಾಧಿಸಿದೆ ಭಾರತ: ವಿಶ್ವಬ್ಯಾಂಕ್ ಪ್ರಶಂಸೆ

ಮಾರ್ಗಸೂಚಿ ದರ ಇಷ್ಟೊಂದು ಏರಿಕೆ ಯಾಕೆ?

ಸರ್ಕಾರ ಬಹಳ ಅಸ್ಥೆಯಿಂದ ನಿರ್ವಹಿಸುತ್ತಿರುವ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸಲು ಎಲ್ಲಾ ಮಾರ್ಗೋಪಾಯಗಳನ್ನು ಅವಲೋಕಿಸುತ್ತಿದೆ. ಈ ನಿಟ್ಟಿನಲ್ಲಿ ಸ್ಥಿರಾಸ್ತಿ ಮಾರ್ಗಸೂಚಿ ದರ ಏರಿಕೆ ಕ್ರಮ ಒಂದು. ಸಿಎಂ ಸಿದ್ದರಾಮಯ್ಯ ಜುಲೈ ತಿಂಗಳಲ್ಲಿ ಮಂಡಿಸಿದ ಬಜೆಟ್ ವೇಳೆ ಗೈಡೆನ್ಸ್ ವ್ಯಾಲ್ಯೂ ಹೆಚ್ಚಿಸುವ ಬಗ್ಗೆ ಮಾತನಾಡಿದ್ದರು.

ಬೆಂಗಳೂರಿನಲ್ಲಿ ದುಬಾರಿಯಾಗಲಿದೆ ಮನೆ, ನಿವೇಶನ

ಸ್ಥಿರಾಸ್ತಿ ಮಾರ್ಗಸೂಚಿ ದರ ಹೆಚ್ಚಾದಾಗ ಆಸ್ತಿ ನೊಂದಣಿ ವೆಚ್ಚವೂ ಹೆಚ್ಚಾಗುತ್ತದೆ. ಇದರಿಂದ ಮನೆ ಅಥವಾ ನಿವೇಶನ ಖರೀದಿಸಬಯಸುವವರು ಹೆಚ್ಚು ವ್ಯಯಿಸಬೇಕಾಗುತ್ತದೆ. ರಾಜ್ಯಾದ್ಯಂತ ನಡೆಯುವ ಆಸ್ತಿ ವಹಿವಾಟಿನಲ್ಲಿ ಶೇ. 60ಕ್ಕಿಂತ ಹೆಚ್ಚಿನವರು ಬೆಂಗಳೂರಿನಲ್ಲೇ ಆಗುವುದು ಹೌದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ