AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat: ಕರ್ನಾಟಕಕ್ಕೆ ನಾಲ್ಕನೇ ವಂದೇ ಭಾರತ್ ಟ್ರೈನ್; ಬೆಂಗಳೂರಿಂದ ತಮಿಳುನಾಡಿನ ಕೊಯಮತ್ತೂರಿಗೆ ಸಾಗಲಿದೆ ಎಕ್ಸ್​ಪ್ರೆಸ್ ರೈಲು

Bengaluru to Coimbatore Vande Bharat Train: ಡಿಸೆಂಬರ್ ಅಂತ್ಯದೊಳಗೆ ಬೆಂಗಳೂರಿನಿಂದ ಕೊಯಮತ್ತೂರಿಗೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸೇವೆ ಆರಂಭವಾಗಲಿದೆ ಎಂದು ಸಂಸದ ಪಿ.ಸಿ. ಮೋಹನ್ ತಿಳಿಸಿದ್ದಾರೆ. ಸದ್ಯ ಕರ್ನಾಟಕದಲ್ಲಿ ಮೂರು ವಂದೇ ಭಾರತ್ ರೈಲುಗಳಿವೆ. ಬೆಂಗಳೂರಿನಿಂದ ಹೈದರಾಬಾದ್ ಮತ್ತು ಬೆಳಗಾವಿಗೆ; ಮೈಸೂರಿನಿಂದ ಚೆನ್ನೈಗೆ ಇವು ಸಂಚರಿಸುತ್ತವೆ. ಬೆಂಗಳೂರು ಮತ್ತು ಕೊಯಮತ್ತೂರು ಮಧ್ಯೆ ಈಗಾಗಲೇ ಉದಯ್ ಎಕ್ಸ್​​ಪ್ರೆಸ್ ರೈಲು ಇದೆ. ಇದರ ಜೊತೆಗೆ ವಂದೇ ಭಾರತ್ ಕೂಡ ಸಂಚರಿಸುತ್ತದೆ.

Vande Bharat: ಕರ್ನಾಟಕಕ್ಕೆ ನಾಲ್ಕನೇ ವಂದೇ ಭಾರತ್ ಟ್ರೈನ್; ಬೆಂಗಳೂರಿಂದ ತಮಿಳುನಾಡಿನ ಕೊಯಮತ್ತೂರಿಗೆ ಸಾಗಲಿದೆ ಎಕ್ಸ್​ಪ್ರೆಸ್ ರೈಲು
ವಂದೇ ಭಾರತ್ ರೈಲು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 21, 2023 | 10:49 AM

Share

ಬೆಂಗಳೂರು, ಡಿಸೆಂಬರ್ 21: ಬೆಂಗಳೂರಿನಿಂದ ಕೊಯಮತ್ತೂರಿಗೆ ಹೋಗಿ ಬರುವ ಪ್ರಯಾಣಿಕರಿಗೆ ಈಗ ಎರಡನೇ ರೈಲು ಸಿಗುತ್ತಿದೆ. ಉದಯ್ ಎಕ್ಸ್​ಪ್ರೆಸ್ ರೈಲಿನ ಜೊತೆಗೆ ಈಗ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು (Vande Bharat Express Train) ಈ ಮಾರ್ಗದಲ್ಲಿ ಸಂಚರಿಸಲಿದೆ. ಈ ತಿಂಗಳ ಅಂತ್ಯದ ಒಳಗೆ (ಡಿಸೆಂಬರ್​ನೊಳಗೆ) ವಂದೇ ಭಾರತ್ ಎಕ್ಸ್​ಪ್ರೆಸ್ ರೈಲೊಂದು ಇಲ್ಲಿ ಸೇವೆ ಆರಂಭಿಸಲಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಈ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಕರ್ನಾಟಕಕ್ಕೆ ನಾಲ್ಕನೇ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸಿಕ್ಕಂತಾಗುತ್ತದೆ.

ಕೊಯಮತ್ತೂರಿನಿಂದ ಬಹಳಷ್ಟು ಜನರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬಹಳ ಅನುಕೂಲವಾಗಲಿದೆ. ಸದ್ಯ ಬೆಂಗಳೂರು ಮತ್ತು ಕೊಯಮತ್ತೂರು ನಡುವೆ ಸಂಚರಿಸುತ್ತಿರುವ ಉದಯ್ ಎಕ್ಸ್​ಪ್ರೆಸ್ ರೈಲು 7 ಗಂಟೆ ತೆಗೆದುಕೊಳ್ಳುತ್ತದೆ. ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನಲ್ಲಿ ಒಂದೆರಡು ಗಂಟೆ ಬೇಗ ತಲುಪಲಿದೆ.

ಇದನ್ನೂ ಓದಿ: GST Act: ನ್ಯಾಯಮಂಡಳಿ ನೇಮಕಾತಿ ನಿಯಮದಲ್ಲಿ ತಾಳಮೇಳ ತರಲು ಜಿಎಸ್​ಟಿ ಕಾಯ್ದೆ ತಿದ್ದುಪಡಿ ಮಸೂದೆ ತಂದ ಸರ್ಕಾರ

ಕರ್ನಾಟಕದಲ್ಲಿ ಸದ್ಯ ಮೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳ ಸೇವೆ ಇದೆ. ಮೈಸೂರಿನಿಂದ ಚೆನ್ನೈ ನಡುವೆ ಒಂದು ರೈಲು ಸಾಗುತ್ತದೆ. ಇದು ಬೆಂಗಳೂರು ಮೂಲಕ ಹೋಗುತ್ತದೆ. ಇನ್ನೊಂದು ರೈಲು ಬೆಂಗಳೂರಿನಿಂದ ಹೈದರಾಬಾದ್​ಗೆ ಹೋಗುತ್ತದೆ. ಮೂರನೇ ರೈಲು ಬೆಂಗಳೂರಿನಿಂದ ಹುಬ್ಬಳ್ಳಿ, ಧಾರವಾಡ ಮುಖಾಂತರ ಬೆಳಗಾವಿವರೆಗೂ ಹೋಗುತ್ತದೆ.

ವಂದೇ ಭಾರತ್ ರೈಲು ವಿಶೇಷತೆಗಳು

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳು ಸಾಮಾನ್ಯ ರೈಲಿಗಿಂತ ಹೆಚ್ಚು ವೇಗದಲ್ಲಿ ಸಂಚರಿಸುವಂತೆ ರೂಪಿಸಲಾಗಿದೆ. ಇದರ ವಿನ್ಯಾಸ ಉತ್ತಮವಾಗಿದೆ. ಟಿಕೆಟ್ ಬೆಲೆಯೂ ಹೆಚ್ಚು. ಭಾರತದಲ್ಲಿ ಒಟ್ಟು 400ರಿಂದ 450 ವಂದೇ ಭಾರತ್ ರೈಲುಗಳಿವೆ. ಪ್ರತೀ ವರ್ಷವೂ 200ರಿಂದ 250 ಹೊಸ ರೈಲುಗಳನ್ನು ತಯಾರಿಸುವ ಸಾಮರ್ಥ್ಯ ಭಾರತೀಯ ರೈಲ್ವೆಗೆ ಇದೆ.

ಇದನ್ನೂ ಓದಿ: Inspiring: ಕಾಲೇಜು ಅರ್ಧಕ್ಕೆ ಬಿಟ್ಟು ಸ್ವಂತ ಕಂಪನಿ ಕಟ್ಟಿದ ಬೆಂಗಳೂರು ಹುಡುಗ; ಬಾಲಿವುಡ್ ಸಿನಿಮಾ ಆಗಿದೆ ಇವರ ಸಾಹಸ

ಮುಂದಿನ ನಾಲ್ಕು ವರ್ಷದಲ್ಲಿ ಭಾರತೀಯ ರೈಲ್ವೆ ಒಟ್ಟು 3,000 ಹೊಸ ರೈಲುಗಳನ್ನು (ಎಲ್ಲಾ ರೈಲು) ಬಿಡುಗಡೆ ಮಾಡಲು ಯೋಜಿಸಿದೆ. ಸದ್ಯ ಇರುವ ರೈಲುಗಳಲ್ಲಿ 800 ಕೋಟಿ ಪ್ರಯಾಣಿಕರು ಸಂಚರಿಸಬಹುದಾಗಿದೆ. 3,000 ಹೊಸ ರೈಲುಗಳು ಬಂದರೆ ಇದು 1,000 ಕೋಟಿ ಪ್ರಯಾಣಿಕ ಸಂಖ್ಯೆಗೆ ಏರಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್