Kharif Crops: ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

Kharif Crops: ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ
ಸಾಂದರ್ಭಿಕ ಚಿತ್ರ
Follow us
|

Updated on:Jun 07, 2023 | 4:17 PM

ದೆಹಲಿ: ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಪಡೆಯಲು ಮತ್ತು ಬೆಳೆ ವೈವಿಧ್ಯತೆಯನ್ನು ಉತ್ತೇಜಿಸಲು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (CCEA) ಈ ನಿರ್ಧಾರವನ್ನು ಮಾಡಿದೆ. ಬೆಂಬಲ ಬೆಲೆಯನ್ನು ಸರ್ಕಾರವು ರೈತರಿಂದ ಬೆಳೆಗಳನ್ನು ಖರೀದಿಸುವ ಮೂಲಕ  ನಿರ್ಧಾರಿಸುತ್ತದೆ. ಬೆಲೆಗಳಲ್ಲಿ ತೀವ್ರ ಕುಸಿತ ಉಂಟಾಗುವ ವಿರುದ್ಧ ಸುರಕ್ಷತಾ ಕ್ರಮವನ್ನು ಒದಗಿಸುತ್ತದೆ. ಮಾರುಕಟ್ಟೆಯ ಅನಿರೀಕ್ಷಿತ ಏರಿಳಿತಗಳ ಹಿನ್ನೆಲೆಯಲ್ಲಿ ರೈತರ ಹಿತಾಸಕ್ತಿಗಳನ್ನು ರಕ್ಷಿಸಲು MSP ಹೆಚ್ಚಳಕ್ಕೆ ಈ  ಅನುಮೋದನೆಯು ನಿರ್ಣಾಯಕ ಕ್ರಮವಾಗಿದೆ ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ (ಸಿಸಿಇಎ), ರೈತರನ್ನು ಉತ್ತೇಜಿಸುವ ಸಲುವಾಗಿ 2023-24 ಬೆಳೆ ವರ್ಷಕ್ಕೆ (ಜುಲೈ-ಜೂನ್) ಭತ್ತದ ಎಂಎಸ್‌ಪಿಯಲ್ಲಿ ಪ್ರತಿ ಕ್ವಿಂಟಲ್‌ಗೆ 143 ರೂ. ರಿಂದ 2,183 ರೂ,ಗೆ ಹೆಚ್ಚಿಸಲು ಅನುಮೋದಿಸಿದೆ . ಹೆಚ್ಚಿನ ಪ್ರದೇಶವನ್ನು ಬೆಳೆಯ ಅಡಿಯಲ್ಲಿ ತರಲು ಮತ್ತು ಅವರ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆ.

ಕೃಷಿಯಲ್ಲಿ ನಾವು ಸಿಎಸಿಪಿ (ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗ) ಶಿಫಾರಸುಗಳನ್ನು ಆಧರಿಸಿ ಕಾಲಕಾಲಕ್ಕೆ ಎಂಎಸ್‌ಪಿಯನ್ನು ನಿಗದಿಪಡಿಸುತ್ತಿದ್ದೇವೆ. ಈ ವರ್ಷ ಮುಂಗಾರು ಬೆಳೆಗಳ ಎಂಎಸ್‌ಪಿ ಹೆಚ್ಚಳವು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಅತ್ಯಧಿಕವಾಗಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ: Fertilizer Subsidy: ಮುಂಗಾರು ಬೆಳೆಗೆ ಒಂದು ಲಕ್ಷ ಕೋಟಿ ರೂ ರಸಗೊಬ್ಬರ ಸಬ್ಸಿಡಿ: ಕೇಂದ್ರ ಸಮಿತಿ ಅನುಮೋದನೆ; 12ಕೋಟಿ ರೈತರಿಗೆ ಪ್ರಯೋಜನ

ಚಿಲ್ಲರೆ ಹಣದುಬ್ಬರ ಕುಸಿತದ ಪ್ರವೃತ್ತಿಯಲ್ಲಿರುವ ಸಮಯದಲ್ಲಿ ಎಂಎಸ್‌ಪಿ ಹೆಚ್ಚಳದಿಂದ ರೈತರಿಗೆ ಲಾಭವಾಗಲಿದೆ ಎಂದು ಅವರು ಹೇಳಿದರು. ಸಾಮಾನ್ಯ ದರ್ಜೆಯ ಭತ್ತದ ಎಂಎಸ್‌ಪಿಯನ್ನು 2023-24ರ ಬೆಳೆ ವರ್ಷಕ್ಕೆ 143 ರೂ. ರಿಂದ 2,183 ರೂ, ಗೆ ಹೆಚ್ಚಿಸಲಾಗಿದೆ ಎಂದು ಗೋಯಲ್ ಹೇಳಿದರು , ಹಿಂದಿನ ವರ್ಷ 2,040 ರೂ. ರಿಂದ ‘ಎ’ ದರ್ಜೆಯ ಭತ್ತದ ಬೆಂಬಲ ಬೆಲೆಯನ್ನು ಕ್ವಿಂಟಲ್‌ 2,060 ರೂ.ಗೆ ಹೆಚ್ಚಿಸಲಾಗಿದೆ. 163 ರೂ. ರಿಂದ 2,203 ರೂ. ಗೆ ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು.

2023-24ರ ಬೆಳೆ ವರ್ಷದಲ್ಲಿ ಪ್ರತಿ ಕ್ವಿಂಟಲ್‌ಗೆ 8,558 ರೂ. ರಂತೆ, ಹಿಂದಿನ ವರ್ಷದಲ್ಲಿ ಕ್ವಿಂಟಲ್‌ಗೆ 7,755 ರೂ. ಗೆ ಹೋಲಿಸಿದರೆ, 10.4 ಪ್ರತಿಶತದಷ್ಟು ಎಂಎಸ್‌ಪಿ ಹೆಚ್ಚಳವಾಗಿದೆ. ಭತ್ತವು ಮುಖ್ಯ ಮುಂಗಾರು ಬೆಳೆಯಾಗಿದೆ, ಇದರ ಬಿತ್ತನೆಯು ಸಾಮಾನ್ಯವಾಗಿ ನೈಋತ್ಯ ಮಾನ್ಸೂನ್ ಆರಂಭದೊಂದಿಗೆ ಪ್ರಾರಂಭವಾಗುತ್ತದೆ. ಭಾರತೀಯ ಹವಾಮಾನ ಇಲಾಖೆ (IMD) ಜೂನ್-ಸೆಪ್ಟೆಂಬರ್ ಅವಧಿಗೆ ಎಲ್ ನಿನೋ ಪರಿಸ್ಥಿತಿಗಳ ಹೊರತಾಗಿಯೂ ಸಾಮಾನ್ಯ ಮಾನ್ಸೂನ್​​ ಆಗುವ ಬಗ್ಗೆ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Wed, 7 June 23

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್