ಎಂಟು ವರ್ಷದಲ್ಲಿ ಆರು ಲಕ್ಷಕ್ಕೂ ಹೆಚ್ಚು ಗ್ರಾಮಗಳ ಭೂದಾಖಲೆಗಳ ಡಿಜಿಟೀಕರಣವಾಗಿದೆ: ಗ್ರಾಮೀಣಾಭಿವೃದ್ಧಿ ಸಚಿವ

Digitization of land records: 2016ರ ಏಪ್ರಿಲ್​ನಲ್ಲಿ ಆರಂಭವಾದ ಡಿಜಿಟಲ್ ಇಂಡಿಯಾ ಲ್ಯಾಂಡ್ ರೆಕಾರ್ಡ್ಸ್ ಮಾಡರ್ನೈಸೇಶನ್ ಪ್ರೋಗ್ರಾಮ್ ಅಡಿಯಲ್ಲಿ ಈವರೆಗೂ 6,26,000 ಗ್ರಾಮಗಳ ಭೂದಾಖಲೆಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ. ಭೂವ್ಯಾಜ್ಯಗಳಿಂದಾಗಿ ಬಹಳಷ್ಟು ಯೋಜನೆಗಳು ಸ್ಥಗಿತಗೊಂಡಿದ್ದು ಅದರಿಂದ ಆರ್ಥಿಕ ನಷ್ಟ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಸುಧಾರಣಾ ಕ್ರಮವನ್ನು ಜಾರಿಗೊಳಿಸಿದೆ.

ಎಂಟು ವರ್ಷದಲ್ಲಿ ಆರು ಲಕ್ಷಕ್ಕೂ ಹೆಚ್ಚು ಗ್ರಾಮಗಳ ಭೂದಾಖಲೆಗಳ ಡಿಜಿಟೀಕರಣವಾಗಿದೆ: ಗ್ರಾಮೀಣಾಭಿವೃದ್ಧಿ ಸಚಿವ
ಭೂದಾಖಲೆಗಳ ಡಿಜಿಟಲೀಕರಣ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 22, 2024 | 4:27 PM

ನವದೆಹಲಿ, ಅಕ್ಟೋಬರ್ 22: ಎಂಟು ವರ್ಷದಲ್ಲಿ ದೇಶದ 95 ಪ್ರತಿಶತದಷ್ಟು ಗ್ರಾಮಗಳಲ್ಲಿನ ಭೂದಾಖಲೆಗಳನ್ನು ಡಿಜಿಟೈಸ್ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೀಡಿದ್ದಾರೆ. ಅವರು ನೀಡಿರುವ ಹೇಳಿಕೆ ಪ್ರಕಾರ 2016ರಿಂದೀಚೆ 6,26,000 ಗ್ರಾಮಗಳ ಲ್ಯಾಂಡ್ ರೆಕಾರ್ಡ್​ಗಳನ್ನು ಡಿಜಿಟೀಕರಣಗೊಳಿಸಲಾಗಿದೆ. ಸುಮಾರು 5,000 ಉಪನೊಂದಣಿ ಕಚೇರಿಗಳನ್ನು ಕಂಪ್ಯೂಟೀರಣಗೊಳಿಸಲಾಗಿದ್ದು, ಆ ಮೂಲಕ ಕ್ಷಿಪ್ರ ವೇಗದಲ್ಲಿ ದಾಖಲೆಗಳ ಡಿಜಿಟಲೀಕರಣ ಮಾಡಲು ಸಾಧ್ಯವಾಗಿದೆ.

2016ರ ಏಪ್ರಿಲ್​ನಲ್ಲಿ ಡಿಜಿಟಲ್ ಇಂಡಿಯಾ ಭೂ ದಾಖಲೆಗಳ ಆಧುನೀಕರಣಗೊಳಿಸುವಿಕೆಯ ಯೋಜನೆ ಆರಂಭಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರವೇ ಪೂರ್ಣ ಅನುದಾನ ನೀಡುತ್ತದೆ. ಜಮೀನು ಮಾಲಕತ್ವದ ಬಗ್ಗೆ ಯಾವ ಗೊಂದಲ ಇಲ್ಲದಂತೆ ಎಚ್ಚರವಹಿಸಲು ಈ ಡಿಜಿಟಲೀಕರಣ ನೆರವಾಗಲಿದೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆದ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಜನೌಷಧ ಕೇಂದ್ರಗಳಲ್ಲಿ ಆದ ಒಟ್ಟು ಬಿಸಿನೆಸ್ ಈ ವರ್ಷ 1,000 ಕೋಟಿ ರೂಗಿಂತಲೂ ಹೆಚ್ಚು

ನಗರ ಭಾಗದಲ್ಲಿ ಭೂ ಸರ್ವೇಕ್ಷಣೆಯಲ್ಲಿ ಆಧುನಿಕ ತಂತ್ರಜ್ಞಾನಗಳ ಬಗ್ಗೆ ಎರಡು ದಿನದ ಜಾಗತಿಕ ತರಬೇತಿ ಕಾರ್ಯಗಾರಕ್ಕೆ ವರ್ಚುವಲ್ ಆಗಿ ಚಾಲನೆ ನೀಡಿ ಮಾತನಾಡಿದ ಕೇಂದ್ರ ಸಚಿವರು, ಆರು ಕೋಟಿಗೂ ಅಧಿಕ ಭೂದಾಖಲೆಗಳ ಜೊತೆಗೆ 2.23 ಕೋಟಿ ನಕ್ಷೆಗಳನ್ನೂ ಡಿಜಿಟೈಸ್ ಮಾಡಲಾಗಿದೆ. 1.4 ಕೋಟಿ ಭೂ ಆಧಾರ್ ಅನ್ನು ವಿತರಿಸಲಾಗಿದೆ ಎನ್ನುವ ಮಾಹಿತಿ ತಿಳಿಸಿದ್ದಾರೆ.

ಭೂ ವ್ಯಾಜ್ಯಗಳಿಂದಾಗಿ ಹಲವು ಯೋಜನೆಗಳು ನಿಂತು ಹೋಗಿ ದೇಶದ ಜಿಡಿಪಿಗೆ ಶೇ. 1.3ರಷ್ಟು ನಷ್ಟವಾಗುತ್ತಿರುವ ಅಂದಾಜಿದೆ. ಭಾರತದಲ್ಲಿ ದಾಖಲಾಗಿರುವ ಸಿವಿಲ್ ವ್ಯಾಜ್ಯಗಳಲ್ಲಿ ಶೇ. 66ರಷ್ಟು ಪ್ರಕರಣಗಳು ಜಮೀನು ಅಥವಾ ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿದ್ದೇ ಆಗಿವೆ. ಈ ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಇರುವ ಸರಾಸರಿ ಅವಧಿ 20 ವರ್ಷ ಎನ್ನಲಾಗಿದೆ. ಈ ಕಾರಣಕ್ಕೆ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಸರ್ಕಾರ ಈ ಯೋಜನೆ ಆರಂಭಿಸಿತ್ತು.

ಇದನ್ನೂ ಓದಿ: ‘ಮಹತ್ವದ ಜಾಗತಿಕ ಪಾತ್ರಕ್ಕೆ ಭಾರತ ಸಿದ್ಧ’: ಅಮೆರಿಕದ ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ನಿರ್ಮಲಾ ಸೀತಾರಾಮನ್ ಭಾಷಣ

ಕೇಂದ್ರ ಸರ್ಕಾರದ ಭೂಮಿ ಸಂಪನ್ಮೂಲ ವಿಭಾಗವು ಡಿಜಿಟಲ್ ಇಂಡಿಯಾ ಲ್ಯಾಂಡ್ ರೆಕಾರ್ಡ್ಸ್ ಮಾಡರ್ನೈಸೇಶನ್ ಪ್ರೋಗ್ರಾಮ್ ಅನ್ನು ಜಾರಿಗೊಳಿಸಿದೆ. ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೆಶಗಳ ಕಂದಾಯ ಮತ್ತು ನೊಂದಣಿ ಇಲಾಖೆಗಳ ಮೂಲಕ ಈ ಯೋಜನೆ ಜಾರಿ ಮಾಡಲಾಗುತ್ತಿದೆ. ಇದರ ಸಂಪೂರ್ಣ ಜಾರಿ ವೆಚ್ಚವನ್ನು ಕೇಂದ್ರವೇ ಭರಿಸುತ್ತದೆ.

ಡಿಜಿಟೈಸ್ ಮಾಡುವುದೆಂದರೆ, ಕಾಗದದಲ್ಲಿ ಇರುವ ಭೂದಾಖಲೆಗಳನ್ನು ಸ್ಕ್ಯಾನ್ ಮಾಡಿ ಅದರ ಪಿಡಿಎಫ್ ಪ್ರತಿಯನ್ನು ಕಂಪ್ಯೂಟರ್​ನಲ್ಲಿ ಸಂಗ್ರಹಿಸಲಾಗಿ ಇಡಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ