AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಹಿಂಡನ್​ಬರ್ಗ್ ಆರೋಪದ ಬಗ್ಗೆ ಅದಾನಿ ಸಮೂಹದ ಜತೆ ಮಾತುಕತೆ ನಡೆಸುತ್ತೇವೆ; ಎಲ್​ಐಸಿ

ಹೂಡಿಕೆದಾರರ ಹಣ ಸುರಕ್ಷಿತವಾಗಿದೆ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಎಲ್​ಐಸಿ ಚೇರ್ಮನ್ ಎಂಆರ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

Adani Row: ಹಿಂಡನ್​ಬರ್ಗ್ ಆರೋಪದ ಬಗ್ಗೆ ಅದಾನಿ ಸಮೂಹದ ಜತೆ ಮಾತುಕತೆ ನಡೆಸುತ್ತೇವೆ; ಎಲ್​ಐಸಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Feb 10, 2023 | 4:32 PM

Share

ನವದೆಹಲಿ: ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ (Hindenburg) ಆರೋಪ ಮಾಡಿರುವುದು ಮತ್ತು ನಂತರದ ಬೆಳವಣಿಗೆಗಳಿಗೆ ಸಂಬಂಧಿಸಿ ಅದಾನಿ ಸಮೂಹ(Adani Group) ಮ್ಯಾನೇಜ್​ಮೆಂಟ್​​ ಜತೆ ಮಾತುಕತೆ ನಡೆಸಲಿದ್ದೇವೆ. ಆ ಮೂಲಕ ಬಿಕ್ಕಟ್ಟಿನ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಿದ್ದೇವೆ ಎಂದು ಎಲ್​ಐಸಿ (LIC) ಚೇರ್ಮನ್ ಎಂಆರ್ ಕುಮಾರ್ (MR Kumar) ಶುಕ್ರವಾರ ತಿಳಿಸಿದ್ದಾರೆ. ಮುಂದಿನ ಏಳರಿಂದ ಹತ್ತು ದಿನಗಳ ಒಳಗೆ ಅದಾನಿ ಸಮೂಹವನ್ನು ಎಲ್​ಐಸಿ ಸಂಪರ್ಕಿಸಲಿದೆ ಎಂದು ಅವರು ‘ಬ್ಯುಸಿನೆಸ್​ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಹಿಂಡನ್​​ಬರ್ಗ್ ಆರೋಪದ ಬೆನ್ನಲ್ಲೇ ಅದಾನಿ ಸಮೂಹ ಕಂಪನಿಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿತ್ತು. ಇದರ ಬೆನ್ನಲ್ಲೇ ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿರುವ ಎಲ್​ಐಸಿಗೂ ನಷ್ಟವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಇದಾದ ಬಳಿಕ ಸ್ಪಷ್ಟನೆ ನೀಡಿದ್ದ ಎಲ್​ಐಸಿ, ಅದಾನಿ ಸಮೂಹದಲ್ಲಿ ಹೆಚ್ಚು ಹೂಡಿಕೆ ಮಾಡಿಲ್ಲ. 36,000 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಹೂಡಿಕೆದಾರರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿತ್ತು. ಅದಾನಿ ಸಮೂಹ ಕಂಪನಿಗಳಲ್ಲಿ ಎಲ್​ಐಸಿಯ ಒಟ್ಟಾರೆ ಹೂಡಿಕೆ 36,000 ಕೋಟಿ ರೂ. ಆಗಿದೆ. ಜನವರಿ 27ರ ವೇಳೆಗೆ ಅದರ ಮಾರುಕಟ್ಟೆ ಮೌಲ್ಯ 56,142 ಕೋಟಿ ರೂ. ಆಗಿದೆ ಎಂದು ಎಲ್​ಐಸಿ ತಿಳಿಸಿತ್ತು. ಆದರೆ, ಜನವರಿ 27ರ ನಂತರದ ಮಾಹಿತಿ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ

ಹೂಡಿಕೆದಾರರ ಹಣ ಸುರಕ್ಷಿತವಾಗಿದೆ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರ್ ಹೇಳಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ಎಲ್ಲ ಹೂಡಿಕೆದಾರರಿಗೂ ಹೇಳಬಯಸುತ್ತೇನೆ. ಶೇ 1ರಷ್ಟು ಅಪಾಯವೂ ಇಲ್ಲ. ಅದಾನಿ ಸಮೂಹದ ಪ್ರಕರಣದಿಂದ ಹೂಡಿಕೆ ಮೇಲೆ ಯಾವುದೇ ರೀತಿಯ ಪರಿಣಾಮವಾಗದು. ನಾವು ಆ ಬಗ್ಗೆ ಕಾಳಜಿವಹಿಸಲಿದ್ದೇವೆ. ಅದಾನಿ ಸಮೂಹದಲ್ಲಿ ಎಲ್​ಐಸಿ ಮಾಡಿರುವ ಹೂಡಿಕೆ ಸಮುದ್ರದ ನೀರಿನ ಒಂದು ಬಿಂದಿನಷ್ಟು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ