LIC Earnings: ಹಣಕಾಸು ವರ್ಷ 2022ಕ್ಕೆ ಎಲ್​ಐಸಿ ನಿವ್ವಳ ಲಾಭ ಶೇ 39ರಷ್ಟು ಏರಿಕೆಯಾಗಿ 4043 ಕೋಟಿಗೆ

2021-22ರ ಹಣಕಾಸು ವರ್ಷಕ್ಕೆ ಎಲ್​ಐಸಿ ನಿವ್ವಳ ಲಾಭವು ಕಳೆದ ವರ್ಷಕ್ಕಿಂತ ಶೇ 39ರಷ್ಟು ಹೆಚ್ಚಾಗಿ 4053 ಕೋಟಿ ರೂಪಾಯಿಯನ್ನು ಮುಟ್ಟಿದೆ.

LIC Earnings: ಹಣಕಾಸು ವರ್ಷ 2022ಕ್ಕೆ ಎಲ್​ಐಸಿ ನಿವ್ವಳ ಲಾಭ ಶೇ 39ರಷ್ಟು ಏರಿಕೆಯಾಗಿ 4043 ಕೋಟಿಗೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: May 30, 2022 | 6:23 PM

ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿಯಾದ ಭಾರತೀಯ ಜೀವ ವಿಮಾ ನಿಗಮ (LIC) ಮೇ 30ನೇ ತಾರೀಕಿನ ಸೋಮವಾರದಂದು ಪ್ರಕಟಿಸಿರುವ ಹಣಕಾಸಿನ ಫಲಿತಾಂಶದ ಪ್ರಕಾರ, ಮಾರ್ಚ್ 2022ಕ್ಕೆ ಕೊನೆಗೊಳ್ಳುವ ತ್ರೈಮಾಸಿಕದಲ್ಲಿ ರೂ. 2,409 ಕೋಟಿ ನಿವ್ವಳ ಲಾಭವನ್ನು ವರದಿ ಮಾಡಿದೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ವರದಿಯಾದ ರೂ. 2,917.33 ಕೋಟಿಗೆ ಹೋಲಿಸಿದರೆ ಶೇ 17.41ರಷ್ಟು ಕಡಿಮೆಯಾಗಿದೆ. ಇಡೀ ಹಣಕಾಸು ವರ್ಷದಲ್ಲಿ ಕಂಪೆನಿಯ ನಿವ್ವಳ ಲಾಭವು ರೂ. 4,043.12 ಕೋಟಿ ಎಂದು ವರದಿಯಾಗಿದ್ದು, ಇದು ಹಣಕಾಸು ವರ್ಷ 2021ರಲ್ಲಿ ಇದ್ದ ರೂ. 2,900.56 ಕೋಟಿಗೆ ಹೋಲಿಸಿದರೆ ಶೇ 39.4ರಷ್ಟು ಹೆಚ್ಚಾಗಿದೆ.

ಹಣಕಾಸು ವರ್ಷ 2022ರ ನಾಲ್ಕನೇ ತ್ರೈಮಾಸಿಕದಲ್ಲಿ ಒಟ್ಟು ಆದಾಯವು 2,11,471 ಕೋಟಿ ರೂಪಾಯಿ ಬಂದಿದ್ದು, ಇದು ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ವರದಿಯಾದ 1,89,176 ಕೋಟಿ ಆದಾಯಕ್ಕೆ ಹೋಲಿಸಿದರೆ ಶೇ 11.64ರಷ್ಟು ಹೆಚ್ಚಾಗಿದೆ. ಇತ್ತೀಚೆಗೆ ಭಾರತದ ಅತಿದೊಡ್ಡ ಆರಂಭಿಕ ಸಾರ್ವಜನಿಕ ಕೊಡುಗೆಗೆ (ಐಪಿಒ) ತೆರೆದಿರುವ ಎಲ್ಐಸಿ, ಪ್ರತಿ ಈಕ್ವಿಟಿ ಷೇರಿಗೆ ರೂ. 1.50 ರಷ್ಟು ಲಾಭಾಂಶವನ್ನು ಘೋಷಿಸಿರುವುದು ನಿಯಂತ್ರಕ ಫೈಲಿಂಗ್​ನಿಂದ ತಿಳಿದುಬಂದಿದೆ.

ಪರಿಶೀಲನೆಯಲ್ಲಿರುವ ತ್ರೈಮಾಸಿಕದಲ್ಲಿ ಅದರ ನಿವ್ವಳ ಪ್ರೀಮಿಯಂ ಆದಾಯವು 1,44,158.84 ಕೋಟಿ ರೂಪಾಯಿಗೆ ಏರಿದೆ ಎಂದು ಕಂಪೆನಿಯು ಗಮನ ಸೆಳೆದಿದೆ. ಇದು ಹಣಕಾಸು ವರ್ಷ 2021ರ ನಾಲ್ಕನೇ ತ್ರೈಮಾಸಿಕದಲ್ಲಿ ವರದಿಯಾದ 1,22,290.64 ಕೋಟಿ ರೂಪಾಯಿಗೆ ಹೋಲಿಸಿದರೆ ಶೇ 17.88 ರಷ್ಟು ಏರಿಕೆಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: LIC Stock Market Debut: 949 ರೂ.ಗೆ ಹಂಚಿದ್ದ ಎಲ್​ಐಸಿ ಷೇರು ಶೇ 9ರಷ್ಟು ಕಡಿಮೆಗೆ 867 ರೂಪಾಯಿಯಲ್ಲಿ ಮಾರುಕಟ್ಟೆ ಲಿಸ್ಟಿಂಗ್

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ