AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಗ್ರಾಹಕರಿಗೆ ಶುಭ ಸುದ್ದಿ, ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಬೆಲೆ ಕಡಿತ

Commercial Gas Cylinder price in Bangalore: ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಸೋಮವಾರದಿಂದ (ಆಗಸ್ಟ್ 1) ₹ 36 ಕಡಿತವಾಗಿದೆ.

LPG Cylinder Price: ಗ್ರಾಹಕರಿಗೆ ಶುಭ ಸುದ್ದಿ, ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಬೆಲೆ ಕಡಿತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 01, 2022 | 9:44 AM

Share

ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್ (LPG Commercial Cylinder Price) ಬೆಲೆಯಲ್ಲಿ ಸೋಮವಾರದಿಂದ (ಆಗಸ್ಟ್ 1) ₹ 36 ಕಡಿತವಾಗಿದೆ. ಬೆಂಗಳೂರಿನಲ್ಲಿ ದರ ಪರಿಷ್ಕರಣೆಗೆ ಮೊದಲು 19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆಯು ₹ 2,100ಕ್ಕೆ ಮಾರಾಟವಾಗುತ್ತಿತ್ತು. ಇದೀಗ ₹ 36ರ ದರ ಕಡಿತದ ನಂತರ ₹ 2,063.50ಗೆ ಮಾರಾಟವಾಗುತ್ತಿದೆ. ದೆಹಲಿಯಲ್ಲಿ ಇಂದಿನಿಂದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯು 1,976, ಕೊಲ್ಕತ್ತಾದಲ್ಲಿ ₹ 2,095.50, ಮುಂಬೈನಲ್ಲಿ ₹ 1,936.50 ಮತ್ತು ಚೆನ್ನೈನಲ್ಲಿ ₹ 2,141ಕ್ಕೆ ಮಾರಾಟವಾಗಲಿದೆ.

ಮೌಲ್ಯವರ್ಧಿತ ತೆರಿಗೆಯಲ್ಲಿ ವ್ಯತ್ಯಯ ಇರುವ ಕಾರಣ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಕಂಡುಬರುತ್ತದೆ.

ಬೆಲೆ ಏರಿಕೆ ಮತ್ತು ಹಣದುಬ್ಬರ ಖಂಡಿಸಿ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿವೆ. ಈ ನಡುವೆ ಕೇಂದ್ರ ಪೆಟ್ರೋಲಿಯಂ ಇಲಾಖೆಯು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಧಾರಣೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಈ ಕ್ರಮ ಮಹತ್ವ ಪಡೆದಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಕಡಿತದಿಂದ ರೆಸ್ಟೊರೆಂಟ್​, ಹೊಟೆಲ್ ಮಾಲೀಕರಿಗೆ ಅನುಕೂಲವಾಗಲಿದೆ. ಆದರೆ ಗೃಹಬಳಕೆ ಸಿಲಿಂಡರ್​ ಬೆಲೆ ಕಡಿತದ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಗೃಹ ಬಳಕೆ ಸಿಲಿಂಡರ್​ಗಳ ಬೆಲೆಯೂ ಕಡಿಮೆಯಾಗಬಹುದು ಎಂಬ ನಿರೀಕ್ಷೆಯನ್ನು ಈ ಬೆಳವಣಿಗೆ ಹುಟ್ಟುಹಾಕಿದೆ.

ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಎಲ್​ಪಿಜಿ ಧಾರಣೆಯ ನಾಲ್ಕನೇ ಪರಿಷ್ಕರಣೆ ಇದು. ಕಳೆದ ಜೂನ್ ತಿಂಗಳಲ್ಲಿ ಕೇಂದ್ರ ಸರ್ಕಾರವು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹ 135 ಕಡಿಮೆ ಮಾಡಿತ್ತು.

Published On - 9:37 am, Mon, 1 August 22

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ