ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ (LPG Commercial Cylinder Price) ಬೆಲೆಯಲ್ಲಿ ಸೋಮವಾರದಿಂದ (ಆಗಸ್ಟ್ 1) ₹ 36 ಕಡಿತವಾಗಿದೆ. ಬೆಂಗಳೂರಿನಲ್ಲಿ ದರ ಪರಿಷ್ಕರಣೆಗೆ ಮೊದಲು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯು ₹ 2,100ಕ್ಕೆ ಮಾರಾಟವಾಗುತ್ತಿತ್ತು. ಇದೀಗ ₹ 36ರ ದರ ಕಡಿತದ ನಂತರ ₹ 2,063.50ಗೆ ಮಾರಾಟವಾಗುತ್ತಿದೆ. ದೆಹಲಿಯಲ್ಲಿ ಇಂದಿನಿಂದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯು 1,976, ಕೊಲ್ಕತ್ತಾದಲ್ಲಿ ₹ 2,095.50, ಮುಂಬೈನಲ್ಲಿ ₹ 1,936.50 ಮತ್ತು ಚೆನ್ನೈನಲ್ಲಿ ₹ 2,141ಕ್ಕೆ ಮಾರಾಟವಾಗಲಿದೆ.
ಮೌಲ್ಯವರ್ಧಿತ ತೆರಿಗೆಯಲ್ಲಿ ವ್ಯತ್ಯಯ ಇರುವ ಕಾರಣ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಕಂಡುಬರುತ್ತದೆ.
ಬೆಲೆ ಏರಿಕೆ ಮತ್ತು ಹಣದುಬ್ಬರ ಖಂಡಿಸಿ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿವೆ. ಈ ನಡುವೆ ಕೇಂದ್ರ ಪೆಟ್ರೋಲಿಯಂ ಇಲಾಖೆಯು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಧಾರಣೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಈ ಕ್ರಮ ಮಹತ್ವ ಪಡೆದಿದೆ.
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಕಡಿತದಿಂದ ರೆಸ್ಟೊರೆಂಟ್, ಹೊಟೆಲ್ ಮಾಲೀಕರಿಗೆ ಅನುಕೂಲವಾಗಲಿದೆ. ಆದರೆ ಗೃಹಬಳಕೆ ಸಿಲಿಂಡರ್ ಬೆಲೆ ಕಡಿತದ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಗೃಹ ಬಳಕೆ ಸಿಲಿಂಡರ್ಗಳ ಬೆಲೆಯೂ ಕಡಿಮೆಯಾಗಬಹುದು ಎಂಬ ನಿರೀಕ್ಷೆಯನ್ನು ಈ ಬೆಳವಣಿಗೆ ಹುಟ್ಟುಹಾಕಿದೆ.
ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಎಲ್ಪಿಜಿ ಧಾರಣೆಯ ನಾಲ್ಕನೇ ಪರಿಷ್ಕರಣೆ ಇದು. ಕಳೆದ ಜೂನ್ ತಿಂಗಳಲ್ಲಿ ಕೇಂದ್ರ ಸರ್ಕಾರವು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹ 135 ಕಡಿಮೆ ಮಾಡಿತ್ತು.
Published On - 9:37 am, Mon, 1 August 22