LPG Gas Cylinder Price: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ, ಪ್ರತಿ ಸಿಲಿಂಡರ್‌ಗೆ 7 ರೂಪಾಯಿ ಹೆಚ್ಚಳ

LPG Price in Bangalore: ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್(LPG Cylinder) ಬೆಲೆ ಏರಿಕೆಯಾಗಿದೆ. ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ

LPG Gas Cylinder Price: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ, ಪ್ರತಿ ಸಿಲಿಂಡರ್‌ಗೆ 7 ರೂಪಾಯಿ ಹೆಚ್ಚಳ
ಸಿಲಿಂಡರ್
Image Credit source: Moneycontrol

Updated on: Jul 04, 2023 | 10:12 AM

ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್(LPG Cylinder) ಬೆಲೆ ಏರಿಕೆಯಾಗಿದೆ. ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರ ಬೆಲೆ ದೀರ್ಘಕಾಲ ಸ್ಥಿರವಾಗಿದೆ. ಈಗ ದೆಹಲಿಯಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‌ನ ಚಿಲ್ಲರೆ ಬೆಲೆ ಅಂದರೆ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಪ್ರತಿ ಸಿಲಿಂಡರ್‌ಗೆ 1,773 ರೂ.ನಿಂದ 1,780 ರೂ.ಗೆ ಏರಿಕೆಯಾಗಿದೆ.

ವಾಣಿಜ್ಯ ಸಿಲಿಂಡರ್‌(Commercial Cylinder)ಗಳ ಏರಿಕೆ ಜುಲೈ 1 ರಿಂದ ಜಾರಿಗೆ ಬರಲಿದೆ. ಈ ಹಿಂದೆ, ಜೂನ್‌ನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿತ್ತು, ಆದರೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಪ್ರಸ್ತುತ, ಮುಂಬೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1733.50 ರೂ.ಗಳಾಗಿದ್ದು, ಜೂನ್‌ನಲ್ಲಿ ಕೆಜಿಗೆ 1725 ರೂ. ಇತ್ತು. ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ನ ಬೆಲೆ 2190.5 ರೂ ಇದೆ.

ದೇಶದ ಆರ್ಥಿಕ ರಾಜಧಾನಿ ಎಂದು ಕರೆಯಲ್ಪಡುವ ಮುಂಬೈನಲ್ಲಿ ಎಲ್​ಪಿಜಿ ಸಿಲಿಂಡರ್ ಬೆಲೆ 1102.50 ರೂ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1129 ರೂ. ಇಂಡಿಯನ್ ಆಯಿಲ್‌ನ ವೆಬ್‌ಸೈಟ್ ಪ್ರಕಾರ, ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್ ಅನ್ನು ಚೆನ್ನೈನಲ್ಲಿ 1118.50 ರೂ.ಗೆ ಇರಿಸಲಾಗಿದೆ. ಆದರೆ ದೆಹಲಿಯಲ್ಲಿ ಎಲ್‌ಪಿಜಿ ಬೆಲೆ 1103 ರೂ. ಗಮನಾರ್ಹ ಅಂಶವೆಂದರೆ ಈ ವರ್ಷದ ಮಾರ್ಚ್‌ನಲ್ಲಿ ಎಲ್‌ಪಿಜಿ ಸಿಲಿಂಡರ್‌ಗೆ 50 ರೂ. ಇದೆ.

ಮತ್ತಷ್ಟು ಓದಿ: LPG Cylinder Price: 19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ 83.50 ರೂ. ಇಳಿಕೆ, ವಿವರಗಳು ಇಲ್ಲಿವೆ

ಕೋಲ್ಕತ್ತಾದಲ್ಲಿ ವಾಣಿಜ್ಯ ಅನಿಲದ ಬೆಲೆ ಪ್ರತಿ ಸಿಲಿಂಡರ್‌ಗೆ 1895.50 ರೂ. ಹಾಗೆಯೇ ಚೆನ್ನೈನಲ್ಲಿ ವಾಣಿಜ್ಯ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗೆ 1945 ರೂ. ಜೂನ್‌ನಲ್ಲಿ ಕೋಲ್ಕತ್ತಾದಲ್ಲಿ 1875.50 ರೂ ಮತ್ತು ಚೆನ್ನೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1937 ರೂ. ಇದೆ.

ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಹಲವಾರು ಬಾರಿ ಹೆಚ್ಚಿಸಿದೆ. ಕಳೆದ ತಿಂಗಳು ಜೂನ್‌ನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ 83 ರೂಪಾಯಿ ಇಳಿಕೆಯಾಗಿತ್ತು. ಆದರೆ ಮೇ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್ 1856.50 ರೂ.ಗೆ ಇಳಿದಿತ್ತು.

ಏಪ್ರಿಲ್‌ನಲ್ಲಿ, ವಾಣಿಜ್ಯ ಸಿಲಿಂಡರ್‌ನ ಬೆಲೆ 2028 ರೂ.ಗೆ ತಲುಪಿದ್ದರೆ, ಮಾರ್ಚ್‌ನಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಗರಿಷ್ಠ 2119.50 ರೂ. ಜನವರಿ ಮತ್ತು ಫೆಬ್ರವರಿಯಲ್ಲಿ ಇದರ ಬೆಲೆ 1769 ರೂ. ಇತ್ತು.

Published On - 10:10 am, Tue, 4 July 23