AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Domestic LPG Cylinder Price Hike: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ

ಗೃಹಬಳಕೆ ಸಿಲಿಂಡರ್ ದರ ಏರಿಕೆ: ದೇಶದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ 29 ರೂ. ಹೆಚ್ಚಳವಾಗಿದೆ. ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ದರಗಳು ಜೂನ್ 7 ರಿಂದಲೇ ಜಾರಿಗೆ ಬಂದಿವೆ. ದೆಹಲಿಯಲ್ಲಿ ಸಿಲಿಂಡರ್ ದರ 942 ರೂ.ಗೆ ತಲುಪಿದೆ. ಇಷ್ಟಾದರೂ ತೈಲ ಕಂಪನಿಗಳಿಗೆ ಪ್ರತಿ ಸಿಲಿಂಡರ್ ಮೇಲೆ ಇನ್ನು 700 ರೂ. ನಷ್ಟವಾಗುತ್ತಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ತಿಳಿಸಿದ್ದಾರೆ.

Domestic LPG Cylinder Price Hike: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ
ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ Image Credit source: ANI
ಭಾವನಾ ಹೆಗಡೆ
|

Updated on:Jun 07, 2026 | 6:39 AM

Share

ನವದೆಹಲಿ, ಜೂನ್ 07: ಪೆಟ್ರೋಲ್, ಡೀಸೆಲ್ ಮತ್ತು ಸಿಎನ್​ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದೆ. ಈ ಹೊಸ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ. ಪರಿಷ್ಕೃತ ದರಗಳು ಜೂನ್ 7 ರಿಂದಲೇ ಜಾರಿಗೆ ಬಂದಿವೆ ಎಂದು ಉದ್ಯಮದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ (PTI) ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮುಖ್ಯಾಂಶಗಳು

  • ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ 29 ರೂಪಾಯಿ ಹೆಚ್ಚಳವಾಗಿದೆ.
  • ದೆಹಲಿಯಲ್ಲಿ ಸಿಲಿಂಡರ್ ಬೆಲೆ 942 ರೂಪಾಯಿಗೆ ಭಾರಿ ಏರಿಕೆ ಕಂಡಿದೆ.
  • ತೈಲ ಕಂಪನಿಗಳ ಅಂಡರ್-ರಿಕವರಿ ವೆಚ್ಚ ಇನ್ನು 700 ರೂಪಾಯಿ ಇದೆ.

ಜಾಗತಿಕ ಬಿಕ್ಕಟ್ಟಿನ ಎಫೆಕ್ಟ್

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ನಿರಂತರ ಸಂಘರ್ಷದಿಂದಾಗಿ ಜಾಗತಿಕ ತೈಲ ಮತ್ತು ಅನಿಲ ಪೂರೈಕೆಯ ಮೇಲೆ ಭಾರಿ ಒತ್ತಡ ಉಂಟಾಗಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಗಗನಕ್ಕೇರಲು ಪ್ರಮುಖ ಕಾರಣವಾಗಿದೆ.

ಇದಕ್ಕೂ ಮುನ್ನ, ಮಾರ್ಚ್ 7 ರಂದು ಪ್ರತಿ ಸಿಲಿಂಡರ್ ಬೆಲೆಯನ್ನು 60 ರೂ. ಹೆಚ್ಚಿಸಲಾಗಿತ್ತು. ಪ್ರಸ್ತುತ ಮಾಡಲಾದ ದರ ಏರಿಕೆಯು ತೈಲ ಕಂಪನಿಗಳಿಗೆ ದೇಶೀಯ ಎಲ್‌ಪಿಜಿ ಮಾರಾಟದಲ್ಲಿ ಆಗುತ್ತಿರುವ ನಷ್ಟವನ್ನು ಭಾಗಶಃ ಮಾತ್ರ ಸರಿದೂಗಿಸಿದೆ ಎಂದು ಮೂಲಗಳು ತಿಳಿಸಿವೆ.ಈ ದರ ಪರಿಷ್ಕರಣೆಯು ದೇಶಾದ್ಯಂತ ಅನ್ವಯವಾಗಲಿದ್ದರೂ, ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳ ವ್ಯತ್ಯಾಸದಿಂದಾಗಿ ಪ್ರತಿ ನಗರದಲ್ಲೂ ಸಿಲಿಂಡರ್‌ನ ಅಂತಿಮ ಬೆಲೆಯಲ್ಲಿ ವ್ಯತ್ಯಾಸವಿರಲಿದೆ.

ANI ಟ್ವೀಟ್ ಇಲ್ಲಿದೆ

ಸುಜಾತಾ ಶರ್ಮಾ ಹೇಳಿದ್ದೇನು?

ಗುರುವಾರದಂದು ನಡೆದ ಅಂತರ-ಸಚಿವಾಲಯದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ, ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವುದು ಮತ್ತು ಆಮದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಎಲ್‌ಪಿಜಿ ಲಭ್ಯತೆಯನ್ನು ಸಮರ್ಪಕವಾಗಿ ಕಾಯ್ದುಕೊಳ್ಳಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಇದನ್ನೂ ಓದಿ Commercial LPG cylinder Price Hike: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ಗೃಹಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ಮೇಲಿನ ಅಂಡರ್-ರಿಕವರಿ (ತೈಲ ಕಂಪನಿಗಳಿಗೆ ಆಗುತ್ತಿರುವ ನಷ್ಟದ ಕೊರತೆ ಭರ್ತಿ ವೆಚ್ಚ) ಕುರಿತು ಹೇಳುವುದಾದರೆ, ಇದು ಇಂದಿಗೂ ಪ್ರತಿ ಸಿಲಿಂಡರ್‌ಗೆ ಸುಮಾರು 700 ರೂಪಾಯಿಗಳ ಆಸುಪಾಸಿನಲ್ಲೇ ಇದೆ ಎಂದು ಶರ್ಮಾ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:33 am, Sun, 7 June 26

Follow Us
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ