AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Prices: ಎಲ್​ಪಿಜಿ ಸಿಲಿಂಡರ್ ದರ 200 ರೂ ಇಳಿಕೆ; ಕೇಂದ್ರ ಸಂಪುಟದಿಂದ ಅನುಮೋದನೆ

LPG Subsidy For PM Ujjwala Yojana: ಬಿಪಿಎಲ್ ಕಾರ್ಡ್​ದಾರರಿಗೆ ನೀಡಲಾಗುವ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್​ಗಳ ಮೇಲೆ ಹೆಚ್ಚುವರಿ 200 ರೂನಷ್ಟು ಸಬ್ಸಿಡಿ ಕೊಡಲು ನಿರ್ಧರಿಸಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಈ ಕ್ರಮಕ್ಕೆ ಅನುಮೋದನೆ ಸಿಕ್ಕಿದೆ. ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಇದರ ಘೋಷಣೆ ಮಾಡಲಿದೆ.

LPG Prices: ಎಲ್​ಪಿಜಿ ಸಿಲಿಂಡರ್ ದರ 200 ರೂ ಇಳಿಕೆ; ಕೇಂದ್ರ ಸಂಪುಟದಿಂದ ಅನುಮೋದನೆ
ಎಲ್​ಪಿಜಿ ಸಿಲಿಂಡರ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 29, 2023 | 4:18 PM

ನವದೆಹಲಿ, ಆಗಸ್ಟ್ 29: ಎಲ್​ಪಿಜಿ ಸಿಲಿಂಡರ್​ಗಳ ಬೆಲೆ 200 ರೂನಷ್ಟು ಕಡಿಮೆ ಆಗಲಿದೆ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ (LPG Cylinder Price) 200 ರೂನಷ್ಟು ಸಬ್ಸಿಡಿ ಒದಗಿಸಲು ಕೇಂದ್ರ ಸಂಪುಟ (Union Cabinet) ಇಂದು ಅನುಮೋದನೆ ನೀಡಿದೆ. ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ (PM Ujjwal Yojana) ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ. ಗ್ಯಾಸ್ ಬೆಲೆ ಕಡಿಮೆ ಆಗಿರುವ ಬಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.

ಟೈಮ್ಸ್ ಆಫ್ ಇಂಡಿಯಾದಲ್ಲಿ ಬಂದಿರುವ ವರದಿ ಪ್ರಕಾರ ಉಜ್ವಲ ಯೋಜನೆ ಅಡಿ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗೆ 200 ರೂ ಹೆಚ್ಚುವರಿ ಸಬ್ಸಿಡಿ ನೀಡಲಾಗುತ್ತಿದೆ. ಇದರೊಂದಿಗೆ, ಈ ಸ್ಕೀಮ್​ನಲ್ಲಿ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ ನೀಡಲಾಗುವ ಒಟ್ಟು ಸಬ್ಸಿಡಿ 400 ರೂ ಆಗುತ್ತದೆ.

ಸಬ್ಸಿಡಿರಹಿತ 14 ಕಿಲೋ ಎಲ್​ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ. ಕೋಲ್ಕತಾದಲ್ಲಿ 1,118.50 ರೂ ಇದೆ. ಚೆನ್ನೈನಲ್ಲಿ 1,102.50 ರೂ ಇದೆ.

ಮೇ ತಿಂಗಳಿಂದೀಚೆ ಐಒಸಿ, ಭಾರತ್ ಪೆಟ್ರೋಲಿಯಂ ಮೊದಲಾದ ತೈಲ ಮಾರುಕಟ್ಟೆ ಕಂಪನಿಗಳು ಮೂರು ಬಾರಿ ಎಲ್​ಪಿಜಿ ದರಗಳನ್ನು ಏರಿಸಿವೆ. ಜುಲೈ ತಿಂಗಳಲ್ಲಿ 50 ರೂ ಹೆಚ್ಚಳವಾಗಿತ್ತು. ಈಗ ಉಜ್ವಲ ಸ್ಕೀಮ್ ಅಡಿಯಲ್ಲಿ ಸರ್ಕಾರ 200 ರೂ ಸಬ್ಸಿಡಿ ಘೋಷಿಸಿದೆ.

ಇದನ್ನೂ ಓದಿ: ಮೂರು ದೊಡ್ಡ ಸ್ಟಾರ್ಟಪ್​ಗಳ ಮಾಲೀಕ ಸುಪಮ್ ಮಹೇಶ್ವರಿ ಮೇಲೆ ತೆರಿಗೆಗಳ್ಳತನ ಆರೋಪ; ಐಟಿಯಿಂದ ನೋಟೀಸ್

ಕೇಂದ್ರ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಸ್ಕೀಮ್ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯನ್ನು 200 ರೂನಷ್ಟು ಇಳಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸರ್ಕಾರದ ಈ ಸಬ್ಸಿಡಿ ನಿರ್ಧಾರದಿಂದ ಒಂದು ವರ್ಷದಲ್ಲಿ ಸುಮಾರು 7,500 ಕೋಟಿ ರೂ ಹೊರೆಯಾಗುವ ನಿರೀಕ್ಷೆ ಇದೆ.

ಏನಿದು ಪಿಎಂ ಉಜ್ವಲ ಯೋಜನೆ?

ಪ್ರಧಾನಮಂತ್ರಿ ಉಜ್ವಲ ಯೋಜನೆ 2016ರಲ್ಲಿ ಶುರುವಾಗಿದ್ದು, ಬಡತನ ರೇಖೆಯಿಂದ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಎಲ್​ಪಿಜಿ ಕನೆಕ್ಷನ್ ಕೊಡುವ ಉದ್ದೇಶ ಹೊಂದಿದೆ. 18 ವರ್ಷ ಮೇಲ್ಪಟ್ಟ ಮಹಿಳೆಯರು ಇದರ ಫಲಾನುಭವಿಗಳಾಗಬಹುದು. 5 ಕೋಟಿ ಎಲ್​ಪಿಜಿ ಸಂಪರ್ಕ ಕೊಡುವ ಗುರಿ ಇಡಲಾಗಿದೆ.

ಇದನ್ನೂ ಓದಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​ನಲ್ಲಿ ಭಾರತ ಸ್ವಸಾಮರ್ಥ್ಯ ಬೆಳೆಸಿಕೊಳ್ಳಬೇಕು, ರಾಷ್ಟ್ರೀಯ ಎಐ ಲ್ಯಾಬ್ ಸ್ಥಾಪಿಸಬೇಕು: ಐಬಿಎಂ ಸಿಇಒ ಅರವಿಂದ್ ಕೃಷ್ಣ ಸಲಹೆ

ಭಾರತದಲ್ಲಿ ನಗರ ಪ್ರದೇಶಗಳಲ್ಲಿ ಬಹುತೇಕ ಮನೆಗಳಲ್ಲಿ ಎಲ್​ಪಿಜಿ ಸಿಲಿಂಡರ್ ಬಳಕೆ ಆಗುತ್ತದೆ. ಕರ್ನಾಟಕ, ದೆಹಲಿ, ಗೋವಾ, ತೆಲಂಗಾಣ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಮನೆಗಳು ಅಡುಗೆಗೆ ಎಲ್​ಪಿಜಿ ಬಳಸುವುದುಂಟು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Tue, 29 August 23

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್