LPG Price: ವಾಣಿಜ್ಯ ಸಿಲಿಂಡರ್ ಬೆಲೆ 135 ರೂಪಾಯಿ ಇಳಿಕೆ

19 ಕೆಜಿ ತೂಗುವ ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆಯನ್ನು ಏಪ್ರಿಲ್ 1ರಂದು ಪೆಟ್ರೋಲಿಯಂ ಕಂಪನಿಗಳು ₹ 250 ಹೆಚ್ಚಿಸಿತ್ತು.

LPG Price: ವಾಣಿಜ್ಯ ಸಿಲಿಂಡರ್ ಬೆಲೆ 135 ರೂಪಾಯಿ ಇಳಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 01, 2022 | 8:33 AM

ದೆಹಲಿ: ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯು (Commercial LPG Cylinder Price) ಇಂದಿನಿಂದ (ಜೂನ್ 1) ₹ 135 ಕಡಿಮೆಯಾಗಲಿದೆ. ಕಳೆದ ಮೇ 1ರಂದು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ₹ 100 ಹೆಚ್ಚಿಸಲಾಗಿತ್ತು. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಕಡಿತವಾಗುವುದರೊಂದಿಗೆ 19 ಕೆಜಿ ತೂಕದ ಸಿಲಿಂಡರ್ ಬೆಲೆಯು ದೆಹಲಿಯಲ್ಲಿ ಇದೀಗ ₹ 2219ಕ್ಕೆ ಮಾರಾಟವಾಗಲಿದೆ. ಈವರೆಗೆ ವಾಣಿಜ್ಯ ಸಿಲಿಂಡರ್ ಬೆಲೆಯು ₹ 2354 ಇತ್ತು. ಅದೇ ರೀತಿ ಮುಂಬೈನಲ್ಲಿ ₹ 2306ಕ್ಕೆ ಬದಲಾಗಿದೆ ಮುನ್ನು ಮುಂದೆ ₹ 2171.50ಗೆ ವಾಣಿಜ್ಯ ಬಳಕೆ ಸಿಲಿಂಡರ್ ಸಿಗಲಿದೆ. ಕೊಲ್ಕತ್ತಾದಲ್ಲಿ ₹ 2322, ಚೆನ್ನೈನಲ್ಲಿ ₹ 2507ಕ್ಕೆ ವಾಣಿಜ್ಯ ಬಳಕೆ ಸಿಲಿಂಡರ್ ಮಾರಾಟವಾಗುತ್ತಿದೆ.

19 ಕೆಜಿ ತೂಗುವ ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆಯನ್ನು ಏಪ್ರಿಲ್ 1ರಂದು ಪೆಟ್ರೋಲಿಯಂ ಕಂಪನಿಗಳು ₹ 250 ಹೆಚ್ಚಿಸಿತ್ತು. ಅದಕ್ಕೂ ಮೊದಲು ಮಾರ್ಚ್ 1ರಂದು ₹ 105 ಹೆಚ್ಚಿಸಲಾಗಿತ್ತು.

ಈ ನಡುವೆ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಕಂಪನಿಗಳು ದೇಶದ ವಿವಿಧೆಡೆ 5,000 ಎಲ್​ಪಿಜಿ ಪಂಚಾಯಿತಿಗಳನ್ನು ಆಯೋಜಿಸುವ ಮೂಲಕ ಉಜ್ವಲ ದಿವಸ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿವೆ.

ಎಲ್​ಪಿಜಿ ಬಳಕೆಯ ಸುಸ್ಥಿರ ಮತ್ತು ಸುರಕ್ಷಿತ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಹೆಚ್ಚು ಜನರು ಎಲ್​ಪಿಜಿ ಬಳಸುವಂತೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶ. ಬಡವರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸುವುದು ಮತ್ತು ಸಮಾಜದ ಎಲ್ಲ ವರ್ಗಗಳಿಗೆ ಆರ್ಥಿಕ ಉನ್ನತಿಯ ಅನುಕೂಲಗಳನ್ನು ಕಲ್ಪಿಸಿಕೊಡುವುದು ‘ಪ್ರಧಾನ ಮಂತ್ರಿ ಉಜ್ವಲ ಯೋಜನಾ’ದ ಉದ್ದೇಶವಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 am, Wed, 1 June 22

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್