LPG Cylinder Price: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ

|

Updated on: Sep 01, 2023 | 10:01 AM

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು, ಗ್ರಾಹಕರಿಗೆ ಖುಷಿ ತಂದಿದೆ. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾದ ಬಳಿಕ ಇದೀಗ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯೂ ಇಳಿಕೆಯಾಗಿದೆ. ಎಲ್‌ಪಿಜಿ ಗ್ರಾಹಕರಿಗೆ ಪ್ರಮುಖ ಪರಿಹಾರವಾಗಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 158ರೂ.ನಷ್ಟು ಕಡಿತಗೊಳಿಸಿವೆ ಎಂದು ಮೂಲಗಳು ತಿಳಿಸಿವೆ.

LPG Cylinder Price: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ
ಎಲ್​ಪಿಜಿ ಸಿಲಿಂಡರ್
Follow us on

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು, ಗ್ರಾಹಕರಿಗೆ ಖುಷಿ ತಂದಿದೆ. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾದ ಬಳಿಕ ಇದೀಗ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯೂ ಇಳಿಕೆಯಾಗಿದೆ. ಎಲ್‌ಪಿಜಿ ಗ್ರಾಹಕರಿಗೆ ಪ್ರಮುಖ ಪರಿಹಾರವಾಗಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 158ರೂ.ನಷ್ಟು ಕಡಿತಗೊಳಿಸಿವೆ ಎಂದು ಮೂಲಗಳು ತಿಳಿಸಿವೆ. ಹೊಸ ಬೆಲೆಗಳು ಇಂದಿನಿಂದ ಜಾರಿಗೆ ಬರಲಿದ್ದು, ದೆಹಲಿಯ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟದ ಬೆಲೆ 1,522ರೂ. ಆಗಿರುತ್ತದೆ. ಈ ಹಿಂದೆ, ರಕ್ಷಾ ಬಂಧನದ ಮುನ್ನಾದಿನದಂದು, ದೇಶದ ಮಹಿಳೆಯರಿಗೆ ಉಡುಗೊರೆಯಾಗಿ ಕೇಂದ್ರ ಸರ್ಕಾರವು ದೇಶೀಯ ಎಲ್‌ಪಿಜಿ ಬೆಲೆಯನ್ನು 200ರೂ. ಕಡಿತಗೊಳಿಸಿತ್ತು.

ವಾಣಿಜ್ಯ ಮತ್ತು ಗೃಹಬಳಕೆಯ LPG  ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ. ಹೊಸ ದರಗಳು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುತ್ತವೆ. ಆಗಸ್ಟ್‌ನಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಒಎಂಸಿಗಳು 99.75 ರೂ.ನಷ್ಟು ಕಡಿತಗೊಳಿಸಿದ್ದವು. ಜುಲೈನಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ತಲಾ 7ರೂ. ಹೆಚ್ಚಿಸಲಾಗಿತ್ತು .

ಈ ಏರಿಕೆಗೆ ಮೊದಲು, ಈ ವರ್ಷದ ಮೇ ಮತ್ತು ಜೂನ್‌ನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಸತತ ಎರಡು ಬಾರಿ ಕಡಿತ ಮಾಡಲಾಗಿತ್ತು. ಮೇ ತಿಂಗಳಲ್ಲಿ OMC ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 172ರೂ. ಕಡಿಮೆ ಮಾಡಿದ್ದರೆ, ಜೂನ್‌ನಲ್ಲಿ 83 ರೂ. ಕಡಿಮೆ ಮಾಡಲಾಗಿದೆ. ಏಪ್ರಿಲ್‌ನಲ್ಲಿಯೂ ಅವುಗಳ ಬೆಲೆ ಪ್ರತಿ ಯೂನಿಟ್‌ಗೆ 91.50ರೂ. ನಷ್ಟು ಕಡಿಮೆಯಾಗಿದೆ .

ಮತ್ತಷ್ಟು ಓದಿ: LPG Prices: ಎಲ್​ಪಿಜಿ ಸಿಲಿಂಡರ್ ದರ 200 ರೂ ಇಳಿಕೆ; ಕೇಂದ್ರ ಸಂಪುಟದಿಂದ ಅನುಮೋದನೆ

ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಈ ವರ್ಷ ಮಾರ್ಚ್ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 350.50ರೂ. ಮತ್ತು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 50ರೂ. ಹೆಚ್ಚಿಸಿದ್ದವು.

 

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:57 am, Fri, 1 September 23