LPG Cylinder Price : ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಹೆಚ್ಚಳ
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 39ರೂ.ಗಳಷ್ಟು ಹೆಚ್ಚಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 39ರೂ.ಗಳಷ್ಟು ಹೆಚ್ಚಾಗಿದೆ. ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂ., ಜೂನ್‌ನಲ್ಲಿ 69.50 ಮತ್ತು ಮೇನಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು. ಎಲ್‌ಪಿಜಿ ಬೆಲೆಗಳಲ್ಲಿನ ಹಠಾತ್ ಹೆಚ್ಚಳವು ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ-ಪ್ರಮಾಣದ ಕೈಗಾರಿಕೆಗಳವರೆಗೆ ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಬಹುದು.
ಈಗ ಸೆಪ್ಟೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1691.50 ರೂ.ಗೆ ಲಭ್ಯವಾಗಲಿದೆ. ಹೊಸ ದರಗಳ ಪ್ರಕಾರ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ 39 ರೂ. ಈಗ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1691.50 ರೂ. IOCL ವೆಬ್‌ಸೈಟ್ ಪ್ರಕಾರ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಹೆಚ್ಚಳವು ಸೆಪ್ಟೆಂಬರ್ 1 ರಿಂದ ಜಾರಿಗೆ ಬಂದಿದೆ.
Oil marketing companies have revised the prices of commercial LPG gas cylinders. The rate of 19 KG commercial LPG gas cylinders has been increased by Rs 39 in Delhi with effect from September 1. Delhi retail sales price of 19kg commercial LPG cylinder is Rs 1,691.50 from today. pic.twitter.com/qiJTAucOOc
— ANI (@ANI) August 31, 2024
ಮುಂಬೈನಲ್ಲಿ ಇದರ ಬೆಲೆ 1644 ರೂ. ಈ ಮೊದಲು ಈ ಸಿಲಿಂಡರ್ ಮುಂಬೈನಲ್ಲಿ 1605 ರೂ.ಗೆ ಲಭ್ಯವಿತ್ತು. ಕೋಲ್ಕತ್ತಾದಲ್ಲಿ ಈ ಸಿಲಿಂಡರ್ ಬೆಲೆ 1764.50 ರೂ.ನಿಂದ 1802.50 ರೂ.ಗೆ ಏರಿಕೆಯಾಗಿದೆ. ಆದರೆ ಚೆನ್ನೈನಲ್ಲಿ ಈ ಸಿಲಿಂಡರ್ ಈಗ 1855 ರೂ.ಗೆ ಲಭ್ಯವಾಗಲಿದೆ. ಈ ಹಿಂದೆ ಚೆನ್ನೈನಲ್ಲಿ 19 ಕೆಜಿ ಸಿಲಿಂಡರ್ 1817 ರೂ.ಗೆ ಮಾರಾಟವಾಗಿತ್ತು.
ಆಗಸ್ಟ್‌ನಲ್ಲಿ ಎಲ್‌ಪಿಜಿ ಗ್ಯಾಸ್‌ನ ಬೆಲೆಯನ್ನು ಹೆಚ್ಚಿಸಲಾಗಿತ್ತು ಆಗ ಕಂಪನಿಗಳು 8.50 ರೂಪಾಯಿ ಏರಿಕೆ ಮಾಡಿದ್ದವು ಆದರೆ ಈ ಬಾರಿ ನೇರವಾಗಿ 39 ರೂಪಾಯಿ ಹೆಚ್ಚಿಸಿವೆ.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:19 am, Sun, 1 September 24