AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಮಹಿಳಾ ದಿನಾಚರಣೆ ದಿನ ಪ್ರಧಾನಿ ಮೋದಿ ಗಿಫ್ಟ್

Women's Day Gift: ಆರು ತಿಂಗಳುಗಳಿಂದ ಪರಿಷ್ಕರಣೆ ಮಾಡದೇ ಇದ್ದ ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಇಳಿಕೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಈ ನಿರ್ಧಾರ ಪ್ರಕಟಿಸಲಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ.

LPG Cylinder Price: ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಮಹಿಳಾ ದಿನಾಚರಣೆ ದಿನ ಪ್ರಧಾನಿ ಮೋದಿ ಗಿಫ್ಟ್
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Mar 08, 2024 | 11:01 AM

Share

ನವದೆಹಲಿ, ಮಾರ್ಚ್​ 8: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day) ದಿನವೇ ಪ್ರಧಾನಿ ಮೋದಿ (Narendra Modi) ದೇಶದ ಜನತೆಗೆ ಉಡುಗೊರೆ ನೀಡಿದ್ದು, ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. (LPG Cylinder Price) ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.

‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಎಂದು ಮೋದಿ ಉಲ್ಲೇಖಿಸಿದ್ದಾರೆ.

ಮೋದಿ ಎಕ್ಸ್​ ಸಂದೇಶ

ಈ ನಿರ್ಧಾರವು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರ ಬದುಕನ್ನು ಸುಲಭಗೊಳಿಸುವುದನ್ನು ಖಾತರಿಪಡಿಸಿಕೊಳ್ಳುವ ನಮ್ಮ ಬದ್ಧತೆಗೆ ಪೂರಕವಾಗಿದೆ ಎಂದು ಮೋದಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ದರ ಎಷ್ಟು?

ಸರ್ಕಾರದ ಈ ನಿರ್ಧಾರದೊಂದಿಗೆ ಇದೀಗ ಗೃಹ ಬಳಕೆಯ ಎಲ್​​ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 100 ರೂ. ಕಡಿಮೆ ಆಗಿ 805.50 ರೂ. ಆಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 803 ರೂ. ಆಗಿದೆ.

ಉಜ್ವಲ ಯೋಜನೆಯಡಿ ಸಿಲಿಂಡರ್ ಬೆಲೆಯ ಮೇಲಿನ 300 ರೂಪಾಯಿ ರಿಯಾಯಿತಿಯನ್ನು ಮುಂದಿನ ಒಂದು ವರ್ಷಕ್ಕೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ನಿರ್ಧಾರ ಕೈಗೊಂಡಿತ್ತು. ಅದರಾಚೆಗೆ, ಎಲ್ಲಾ ಸಾಮಾನ್ಯ ಸಿಲಿಂಡರ್ ಗ್ರಾಹಕರಿಗೆ ಪ್ರತಿ ಸಿಲಿಂಡರ್‌ಗೆ 100 ರೂ. ದರ ಇಳಿಕೆ ಅನ್ವಯವಾಗಲಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ಸುಮಾರು 32.5 ಕೋಟಿ ಎಲ್‌ಪಿಜಿ ಸಂಪರ್ಕಗಳಿವೆ. ಇದರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ಸುಮಾರು 10.25 ಕೋಟಿ ಸಿಲಿಂಡರ್‌ಗಳನ್ನು ವಿತರಣೆ ಮಾಡಲಾಗಿದೆ.

ಇದನ್ನೂ ಓದಿ: ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇನ್ನಷ್ಟು ದುಬಾರಿ

ಮಾರ್ಚ್​ 1ರಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 25 ರೂ. ಹೆಚ್ಚಳ ಮಾಡಿದ್ದವು. ಆದರೆ, ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಕಳೆದ 6 ತಿಂಗಳುಗಳಿಂದ ಪರಿಷ್ಕರಣೆ ಮಾಡಿರಲಿಲ್ಲ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:04 am, Fri, 8 March 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?