Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Price Today: ಎಲ್​ಪಿಜಿ ಗ್ರಾಹಕರಿಗೆ ಗುಡ್​ ನ್ಯೂಸ್​; ಇಂದಿನಿಂದ ಅಡುಗೆ ಅನಿಲದ ದರ ಇಳಿಕೆ

LPG Cylinder Price in Bangalore: ವಾಣಿಜ್ಯ ಎಲ್​​ಪಿಜಿ ಸಿಲಿಂಡರ್ ಬೆಲೆ 198 ರೂ. ಇಳಿಕೆಯಾಗಿದೆ. ಇಂದಿನಿಂದ ವಾಣಿಜ್ಯ LPG ಸಿಲಿಂಡರ್​ ಪರಿಷ್ಕೃತ ಬೆಲೆ ಜಾರಿಯಾಗಿದೆ. ಪ್ರತಿ‌ ತಿಂಗಳ‌ ಮೊದಲ ದಿನವೇ LPG ಸಿಲಿಂಡರ್ ದರ ಪರಿಷ್ಕರಣೆಯಾಗುತ್ತದೆ.

LPG Price Today: ಎಲ್​ಪಿಜಿ ಗ್ರಾಹಕರಿಗೆ ಗುಡ್​ ನ್ಯೂಸ್​; ಇಂದಿನಿಂದ ಅಡುಗೆ ಅನಿಲದ ದರ ಇಳಿಕೆ
ಎಲ್​ಪಿಜಿ ಸಿಲಿಂಡರ್Image Credit source: Aaj Tak
Follow us
TV9 Web
| Updated By: Digi Tech Desk

Updated on:Jul 01, 2022 | 9:35 AM

LPG Cylinder Price in Bangalore | ಬೆಂಗಳೂರು: ಅಡುಗೆ ಅನಿಲ (Cooking Gas Cylinder) ಬಳಕೆದಾರರಿಗೆ ಗುಡ್​ ನ್ಯೂಸ್​ ಒಂದಿದೆ. ಇಂದಿನಿಂದ (ಜುಲೈ 1) ಎಲ್​ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಲಾಗಿದೆ. ದೇಶದಲ್ಲಿ ವಾಣಿಜ್ಯ ಎಲ್​​ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ವಾಣಿಜ್ಯ ಎಲ್​​ಪಿಜಿ ಸಿಲಿಂಡರ್ ಬೆಲೆ 198 ರೂ. ಇಳಿಕೆಯಾಗಿದೆ. ಇಂದಿನಿಂದ ವಾಣಿಜ್ಯ LPG ಸಿಲಿಂಡರ್​ ಪರಿಷ್ಕೃತ ಬೆಲೆ ಜಾರಿಯಾಗಿದೆ. ಪ್ರತಿ‌ ತಿಂಗಳ‌ ಮೊದಲ ದಿನವೇ LPG ಸಿಲಿಂಡರ್ ದರ ಪರಿಷ್ಕರಣೆಯಾಗುತ್ತದೆ.

ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂಡೇನ್ ಗ್ಯಾಸ್ ಸಿಲಿಂಡರ್‌ಗಳ ದರ 198 ರೂ. ಇಳಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ LPG ಸಿಲಿಂಡರ್ ಬೆಲೆ 2,021 ರೂ. ಆಗಿದೆ. ಕೊಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್ ದರ 182 ರೂ. ಕುಸಿತವಾಗಿದೆ. ಮುಂಬೈನಲ್ಲಿ 190.50 ರೂ. ಇಳಿಕೆಯಾಗಿದೆ. ಚೆನ್ನೈನಲ್ಲಿ 187 ರೂ. ಇಳಿಕೆಯಾಗಿದೆ. ಪೆಟ್ರೋಲಿಯಂ ಕಂಪನಿ ಇಂಡಿಯನ್ ಆಯಿಲ್ ವಾಣಿಜ್ಯ ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿದೆ ಎಂದು ಲೈವ್ ಹಿಂದೂಸ್ತಾನ್ ವರದಿ ತಿಳಿಸಿದೆ.

ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಗ್ರಾಹಕರು ಹೆಚ್ಚಿನ ಬೆಲೆಯ ಭಾರವನ್ನು ಎದುರಿಸುತ್ತಲೇ ಇದ್ದಾರೆ. 14.2 ಕೆಜಿಯ ಗೃಹಬಳಕೆಯ ಸಿಲಿಂಡರ್ ಅಗ್ಗವಾಗಲಿ, ದುಬಾರಿಯಾಗಲಿ ಇಲ್ಲ. ಮೇ 19ರ ದರದಲ್ಲೇ ಈಗಲೂ ಲಭ್ಯವಿದೆ.

ಇದನ್ನೂ ಓದಿ: LPG Cylinder: ಎಲ್​ಪಿಜಿ ಗ್ರಾಹಕರೇ ಗಮನಿಸಿ; ಸದ್ಯದಲ್ಲೇ ಅಡುಗೆ ಅನಿಲದ ಸಿಲಿಂಡರ್​ಗಳ ತೂಕ ಇಳಿಸಲು ಸರ್ಕಾರ ಚಿಂತನೆ

ಕಳೆದ ತಿಂಗಳು ಜೂನ್‌ನಲ್ಲಿ ವಾಣಿಜ್ಯ ಸಿಲಿಂಡರ್ ದರವನ್ನು 135 ರೂ. ಕಡಿಮೆ ಮಾಡಲಾಗಿತ್ತು. ಆದರೆ, ಮೇ ತಿಂಗಳಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಗ್ರಾಹಕರು ಎರಡು ಬಾರಿ ಆಘಾತಕ್ಕೊಳಗಾಗಿದ್ದರು. ಮೇ 7ರಂದು ಮೊದಲ ಬಾರಿಗೆ ಗೃಹಬಳಕೆಯ ಸಿಲಿಂಡರ್‌ನ ದರವನ್ನು 50 ರೂ. ಹೆಚ್ಚಿಸಲಾಗಿತ್ತು. ಮೇ 19ರಂದು ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು ಸಹ ಹೆಚ್ಚಿಸಲಾಗಿತ್ತು.

14.2 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ಇಲ್ಲಿದೆ: ದೆಹಲಿ: 1,003 ರೂ. ಮುಂಬೈ: 1,003 ರೂ. ಕೋಲ್ಕತ್ತಾ: 1,029 ರೂ. ಚೆನ್ನೈ: 1,019 ರೂ. ಲಕ್ನೋ: 1,041 ರೂ. ಜೈಪುರ: 1,007 ರೂ. ಪಾಟ್ನಾ: 1,093 ರೂ. ಇಂದೋರ್: 1,031 ರೂ. ಅಹಮದಾಬಾದ್: 1,010 ರೂ. ಪುಣೆ: 1,006 ರೂ. ಗೋರಖ್‌ಪುರ: 1,012 ರೂ. ಭೋಪಾಲ್: 1,009 ರೂ. ಆಗ್ರಾ: 1,016 ರೂ. ರಾಂಚಿ: 1,061 ರೂ.

Published On - 8:45 am, Fri, 1 July 22

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್