ದೀಪಾವಳಿ ಹಬ್ಬದ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಎಲ್‌ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರಿ ಇಳಿಕೆ ಮಾಡಿವೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಇಂದು ಅಂದರೆ ನವೆಂಬರ್ 1 ರಂದು ಮತ್ತೆ ಕಡಿತಗೊಳಿಸಲಾಗಿದೆ. ಇದರೊಂದಿಗೆ ಸತತ ಆರನೇ ತಿಂಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಬೆಲೆ ಇಳಿಕೆಯಾದಂತಾಗಿದೆ. 19-ಕೆಜಿ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ 115.50 ರೂಪಾಯಿ ಕಡಿತಗೊಳಿಸಲಾಗಿದ್ದು, ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳು ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಪ್ರತಿ ಸಿಲಿಂಡರ್‌ಗೆ ರೂ 1,885 ರಿಂದ ರೂ 1,744 ಕ್ಕೆ ಇಳಿದಿದೆ. ಏತನ್ಮಧ್ಯೆ, ಪ್ರಸ್ತುತ ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಎಲ್‌ಪಿಜಿ ಬೆಲೆ 1,053 ರೂ. ಇದೆ.
ಪರಿಷ್ಕೃತ ದರ ಪಟ್ಟಿಯ ಪ್ರಕಾರ ಇಂಡೇನ್‌ನ 19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಂದಿನಿಂದ ದೆಹಲಿಯಲ್ಲಿ 115.5 ರೂ., ಕೋಲ್ಕತ್ತಾದಲ್ಲಿ 113 ರೂ., ಮುಂಬೈನಲ್ಲಿ 115.5 ರೂ. ಮತ್ತು ಚೆನ್ನೈನಲ್ಲಿ 116.5 ರೂ.ಗೆ ಕಡಿತಗೊಳಿಸಲಾಗಿದೆ.
ನಾಲ್ಕು ಮಹಾನಗರಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಪರಿಷ್ಕೃತ ಬೆಲೆ
ಗೃಹಬಳಕೆ ಸಿಲಿಂಡರ್ ಬೆಲೆ
ದೇಶದ ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನದಂದು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ನಿಗದಿಪಡಿಸುತ್ತವೆ. ವಾಣಿಜ್ಯ LPG ಅನಿಲವನ್ನು ಹೆಚ್ಚಾಗಿ ಹೋಟೆಲ್‌ಗಳು, ಆಹಾರ ಅಂಗಡಿಗಳು ಇತ್ಯಾದಿಗಳಲ್ಲಿ ಬಳಸಲಾಗುತ್ತದೆ. ಬೆಲೆ ಇಳಿಕೆಯಿಂದ ಉದ್ಯಮಿಗಳಿಗೆ ತುಸು ರಿಲೀಫ್ ಸಿಕ್ಕಂತಾಗಿದೆ.
ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:29 am, Tue, 1 November 22